ವೇಷಗಾರರಿಗೆ ಬೇಕಿದೆ ಶಾಶ್ವತ ನೆಲೆ

ಕಲಾವಿದರಿಗೆ ಬೇಕಿದೆ ಕಾಯಕಲ್ಪ | ಸೂರು-ನೀರಿಗಾಗಿ ನಿತ್ಯ ಅಲೆದಾಟ ತಪ್ಪಿಲ್ಲ

Team Udayavani, Oct 2, 2020, 6:27 PM IST

ವೇಷಗಾರರಿಗೆ ಬೇಕಿದೆ ಶಾಶ್ವತ ನೆಲೆ

ಅಫಜಲಪುರ: ಹಲವು ದಶಕಗಳಿಂದ ನಮ್ಮಲ್ಲಿ ವೇಷಗಾರರ ಪರಂಪರೆ ಇದೆ. ಅವರು ತಮ್ಮದೇ ಶೈಲಿಯಲ್ಲಿ ಹಾಡುಗಳನ್ನು ಕಟ್ಟಿಕೊಂಡು ಊರುರು ಅಲೆಯುತ್ತಾ ಜೀವನ ನಡೆಸುವ ಕಾಯಕ ಮಾಡುತ್ತಾರೆ. ಅವರಿಗೆ ಈಗನೆಲೆ ಬೇಕಾಗಿದೆ. ಅಲ್ಲದೆ ಅವರ ಕಲೆಗೆಬೆಲೆಯೂ ಸಿಗಬೇಕಾಗಿದೆ.

ಹೌದು, ತಾಲೂಕಿನಾದ್ಯಂತ 100ಕ್ಕೂ ಹೆಚ್ಚು ವೇಷಗಾರರ ಕುಟುಂಬಗಳು ವಾಸವಾಗಿವೆ. ಆದರೆ ಅವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಇಷ್ಟು ವರ್ಷ ಊರುರು ಅಲೆದು ಹಾಡು ಹೇಳಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಕೋವಿಡ್ ವಕ್ಕರಿಸಿದ ಬಳಿಕ ಎಲ್ಲವು ನಿಂತು ಹೋಗಿದೆ. ಹಾಡು ಇಲ್ಲ, ಹೊಟ್ಟೆಪಾಡು ಇಲ್ಲದಂತಾಗಿ ನಡು ನೀರಲ್ಲಿ ನಿಂತ ಪರಿಸ್ಥಿತಿ ಈಗ ವೇಷಗಾರರದ್ದಾಗಿದೆ. ವೇಷಗಾರರಿಗೆ ಬೇಕಿದೆ ಕಾಯಕಲ್ಪ: ವೇಷಗಾರರು ಹೆಚ್ಚೇನು ಓದಿಕೊಂಡವರಲ್ಲ. ಆದರೂತಮ್ಮದೇ ದಾಟಿಯಲ್ಲಿ ಸಾಹಿತ್ಯ  ರಚಿಸಿ ರಾಗಬದ್ದವಾಗಿ ಹಾಡುತ್ತಾರೆ.ಜನರನ್ನು ರಂಜಿಸುತ್ತ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ವಿವಿಧ ವೇಷ ಭೂಷಣ ಧರಿಸಿಕೊಂಡು ಊರುರು ಅಲೆಯುತ್ತಾರೆ. ಇವರು ನಮ್ಮ ಸಂಸ್ಕೃತಿಯ ಅಂಗವಾಗಿದ್ದಾರೆ. ಎಲ್ಲೋ ಒಂದು ಕಡೆ ಗಟ್ಟಿ ನೆಲೆ ನಿಲ್ಲಬೇಕೆಂಬ ಇವರ ಬಯಕೆಗೆ ಭದ್ರ ಬುನಾದಿ ಬೇಕಾಗಿದೆ.

ಸೂರು-ನೀರಿಗಾಗಿ ಅಲೆದಾಟ: ಸದ್ಯ ತಾಲೂಕಿನ ಕರ್ಜಗಿ, ಅಫಜಲಪುರ, ಸ್ಟೆಷನ್‌ ಗಾಣಗಾಪುರ ಮತ್ತು ಚವಡಾಪುರ ಗ್ರಾಮಗಳಲ್ಲಿ ವೇಷಗಾರರಕುಟುಂಬಗಳಿವೆ. ಈ ಕುಟುಂಗಳಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಕ್ಕಿಲ್ಲ. ಎಲ್ಲರಿಗೂ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಇವೆ. ಆದರೆ, ವಾಸಕ್ಕೆ ಯೋಗ್ಯವಾದ ಮನೆಗಳಿಲ್ಲ. ಮಳೆ ಬಂದರೆ ಚಾಪೆ ತಲೆ ಮೇಲೆ ಹಿಡಿದುಕೊಂಡು ಮಕ್ಕಳೊಂದಿಗೆ ಬೀದಿಯಲ್ಲಿ ನಿಲ್ಲಬೇಕಾದ ಅನಿವಾರ್ಯತೆ ವೇಷಗಾರರ ಕುಟುಂಬಗಳಿಗೆ ಇದೆ. ಇಂತಹ ಕುಟುಂಬಗಳಿಗೆ ಈಗ ನೀರು, ಸೂರಿನ ಭರವಸೆ ಬೇಕಾಗಿದೆ. ಇನ್ನಾದರೂ ನೊಂದ 100 ಕುಟುಂಬಗಳಿಗೆಅವರಿದ್ದಲ್ಲಿಯೇ ಸೂರು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಗ್ರಾಪಂ, ತಾಪಂ, ಜಿಪಂ, ಶಾಸಕರು, ಅಧಿಕಾರಿಗಳು ಇವರ ಬೇಡಿಕೆ ಈಡೇರಿಸಲು ಪ್ರಯತ್ನಿಸಬೇಕಾಗಿದೆ.

ವೇಷಗಾರರು ಯಾವ ಪದವಿ ಶಿಕ್ಷಣ ಪಡೆಯದಿದ್ದರೂ ವ್ಯಾಕರಣ ಬದ್ದವಾಗಿ ಪೌರಾಣಿಕ ಕಥೆಗಳನ್ನು, ರಾಗಬದ್ದವಾಗಿ ಹಾಡುತ್ತಾ ಒಂದು ಬಗೆಯ ಸಾಹಿತ್ಯ ಪರಂಪರೆ ಉಳಿಸಿಕೊಂಡು ಬಂದಿದ್ದಾರೆ. ಇಂತಹ ವಿಶೇಷ ಪಂಗಡವನ್ನು ಸರ್ಕಾರ ಉಳಿಸುವ ಕೆಲಸ ಮಾಡಬೇಕು. ಅವರಿಗೆ ಬೇಕಾದ ಸೂಕ್ತ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಬೇಕು. -ಡಾ| ಸಂಗಣ್ಣ ಎಂ. ಸಿಂಗೆ ಆನೂರ, ಅಫಜಲಪುರ ತಾಲೂಕು ಜಾನಪದ ಪರಿಷತ್‌ ಅಧ್ಯಕ್ಷ

ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ನಮಗೆ ಮೊದಲು ಜಾತಿ ಪ್ರಮಾಣ ಪತ್ರ ನೀಡುತ್ತಿದ್ದರೂ ಈಗ ಕೊಡುತ್ತಿಲ್ಲ. ಕೊವಿಡ್‌ಗಿಂತ ಮೊದಲು ಎಲ್ಲಿಯಾದರೂ ಹಾಡು ಹೇಳಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದೇವು. ಆದರೆ ಈಗ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ಬಂದಿದೆ. ಸರ್ಕಾರ, ಸಂಬಂಧಪಟ್ಟವರು ನಮ್ಮ ಕಷ್ಟಕ್ಕೆ ನೆರವಾಗಬೇಕು. – ದತ್ತು ಕಟ್ಟಿಮನಿ, ವೇಷಗಾರರ ಸಮುದಾಯದ ತಾಲೂಕು ಅಧ್ಯಕ್ಷ

­-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.