ಸಚಿವ ಜಗದೀಶ್ ಶೆಟ್ಟರ್ ಭೇಟಿಯಾದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
Team Udayavani, Oct 3, 2020, 2:38 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಹಟ್ನಾ, ಗೊಲ್ಲರಹಟ್ಟಿ ಸುತ್ತಮುತ್ತಲ ಗ್ರಾಮ ಗಳ ರೈತರ ಜಮೀನು ಸ್ವಾಧೀನ ಸಂಬಂಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹಟ್ನಾ, ಗೊಲ್ಲರಹಟ್ಟಿ ಸುತ್ತಮುತ್ತಲ ಗ್ರಾಮಗಳ ರೈತರ ಜಮೀನು ಸ್ವಾಧೀನ ಸಂಬಂಧ ಉಂಟಾಗಿದ್ದ ಸಮಸ್ಯೆಗಳ ಕುರಿತು ಎಚ್ ಡಿ ಕುಮಾರಸ್ವಾಮಿಯವರು ಸಚಿವ ಜಗದೀಶ್ ಶೆಟ್ಟರ್ ಮತ್ತು ಕೆಐಎಡಿಬಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಇದನ್ನೂ ಓದಿ:ಮಿನಿಫೈಟ್: ಶಿರಾ ಬಿಜೆಪಿ ಅಭ್ಯರ್ಥಿ ಬಹುತೇಕ ಅಂತಿಮ, ರಾಜೇಶ್ ಗೌಡ ಇಂದು ಬಿಜೆಪಿ ಸೇರ್ಪಡೆ
500 ಎಕರೆ ಒಣಭೂಮಿ ಪ್ರದೇಶವನ್ನು ಸ್ವಾಧೀನ ಪಡಿಸಿಕೊಂಡು ರೈತರಿಗೆ ಅನ್ಯಾಯವಾಗದಂತೆ ಸೂಕ್ತ ಪರಿಹಾರ ನೀಡಬೇಕು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 700ಕ್ಕೂ ಹೆಚ್ಚು ಎಕರೆ ನೀರಾವರಿ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುವುದನ್ನು ಕೈಬಿಡುವಂತೆ ಒತ್ತಾಯಿಸಿ ಅಗತ್ಯ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು