ಉತ್ತರ ಪ್ರದೇಶ ಸರ್ಕಾರ ವಜಾಕ್ಕೆ ಆಗ್ರಹ

Team Udayavani, Oct 4, 2020, 3:55 PM IST

ಉತ್ತರ ಪ್ರದೇಶ ಸರ್ಕಾರ ವಜಾಕ್ಕೆ ಆಗ್ರಹ

ರಾಯಚೂರು: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ ಘಟನೆಗಳನ್ನು ತಡೆಯುವಲ್ಲಿ ವಿಫಲವಾದ ಯೋಗಿ ಅದಿತ್ಯನಾಥ ಸರ್ಕಾರ ವಜಾಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿ ಡಿಸಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಉತ್ತರ ಪ್ರದೇಶದ ಯುವತಿ ಮೇಲೆ ಜರುಗಿದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು. ಉತ್ತರ ಪ್ರದೇಶ ಯೋಗಿ ಆದಿತ್ಯನಾಥರ ಸರ್ಕಾರ ಕೊಲೆಗಡುಕರ ರಕ್ಷಣೆಗೆ ಮುಂದಾಗಿದೆ. ಉತ್ತರ ಪ್ರದೇಶದಲ್ಲಿ ದಲಿತರಿಗೆ ಮತ್ತು ದಲಿತ ಮಹಿಳೆಯರಿಗೂ,ದುಡಿಯುವ ಬಡ ಕುಟುಂಬದ ಜನರಿಗೆ ಜೀವಿಸಲು ರಕ್ಷಣೆ ಇಲ್ಲದಂತಾಗಿದೆ. ನಿತ್ಯ 2ರಿಂದ 3 ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ. ಇದನ್ನು ತಡೆಯುವಲ್ಲಿ ವಿಫಲವಾದ ಉತ್ತರ ಪ್ರದೇಶದ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು. ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಪದಾಧಿಕಾರಿಗಳಾದ ಎಸ್‌.ಪ್ರಸಾದ, ಎಂ.ವಸಂತಕುಮಾರ, ರವೀಂದ್ರನಾಥ ಪಟ್ಟಿ, ಎಂ.ಈರಣ್ಣ, ಲಕ್ಷ್ಮೀ ದೇವಿ, ಶಾಂತರಾಜ, ಶಿವಪ್ಪ ವಂದಲಿ, ಉರುಕುಂದಮ್ಮ, ಸಾವಿತ್ರಿ, ಎಂ.ಶರಣಬಸವ, ಅನಿಲಕುಮಾರ, ಸಾಗರ, ವೆಂಕಟೇಶ, ಸಾದಿಕ್‌ ಹಾಗೂ ಮತ್ತಿತರರಿದ್ದರು.

ಬಹುಜನ ಸಮಾಜ ಪಕ್ಷದ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ವಾಲ್ಮೀಕಿ ಜನಾಂಗದ ಯುವತಿ ಮೇಲೆ ಅತ್ಯಾಚಾರವೆಸಗಿದ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಡಿಸಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಒಂದು ಕಡೆ ಕೇಂದ್ರ ಸರಕಾರ ಬೇಟಿ ಬಚಾವೋ ಬೇಟಿ ಪಡಾವೋ ಎಂದು ಹೇಳುತ್ತಿದೆ. ಆದರೆ, ಉತ್ತರ ಪ್ರದೇಶದಲ್ಲಿ ದಿನೇ ದಿನೇ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗುತ್ತಿವೆ. ಯುಪಿ ಗೂಂಡಾಗಳ ರಾಜ್ಯವಾಗಿದೆ. ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ತಡೆಯುವಲ್ಲಿ ವಿಫಲರಾದ ಯೋಗಿ ಆದಿತ್ಯನಾಥ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ವೈ.ನರಸಪ್ಪ, ಪದಾಧಿಕಾರಿಗಳಾದ ಎಂ. ಬುಡ್ಡಪ್ಪ, ಹನುಮಂತ ಹೊಸಪೇಟೆ, ಹನುಮಂತಪ್ಪ ವಕೀಲರು, ಎಂ.ಬಸವರಾಜ ಭಂಡಾರಿ, ಜೈ ಭೀಮ. ವಲ್ಲಭ ಹಾಗೂ ಮತ್ತಿತರರಿದ್ದರು.

ನೌಕರರ ಒಕ್ಕೂಟದ : ಉತ್ತರ ಪ್ರದೇಶದಲ್ಲಿ ವಾಲ್ಮೀಕಿ ಜನಾಂಗದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಸದಸ್ಯರು ಡಿಸಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಯುವತಿ ಶವವನ್ನು ಕುಟುಂಬಕ್ಕೆ ನೀಡದೇ ರಾತ್ರೋರಾತ್ರಿ ಪೊಲೀಸ್‌ ಸರ್ಪಗಾವಲಿನಲ್ಲಿ ಸುಟ್ಟು ಹಾಕಿರುವ ಉತ್ತರ ಪ್ರದೇಶದ ಸರ್ಕಾರದ ಕ್ರಮ ಖಂಡನೀಯ ಎಂದು ದೂರಿದರು. ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಅತ್ಯಾಚಾರಿಗಳಿಗೆ ಬೆಂಬಲಿಸುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಯುವತಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

ಒಕ್ಕೂಟದ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಅಸ್ಕಿಹಾಳ, ದೇವರಾಜ ನಾಯಕ ಹಾಗೂ ರಾಘವೇಂದ್ರ ನಾಯಕ ವಕೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕರ್ನಾಟಕ ಅಸ್ಪೃಶ್ಯ ಸಮುದಾಯಗಳ ಮಹಾಸಭಾ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಹಾಗೂ ಉತ್ತರ ಪ್ರದೇಶದ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಅಸ್ಪೃಶ್ಯ ಸಮುದಾಯಗಳ ಮಹಾಸಭಾ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಉತ್ತರಪ್ರದೇಶ ಸರ್ಕಾರ ವಿಫಲವಾಗಿದೆ. ಜನರನ್ನು ರಕ್ಷಣೆ ಮಾಡಬೇಕಿದ್ದಪೊಲೀಸರೆ ಅಪರಾ ಧಿಗಳೊಂದಿಗೆ ನಿಂತಿರುವುದು ಖಂಡನೀಯ ಎಂದರು.

ಮಹಾಸಭಾದ ಎಂ.ವಿರೂಪಾಕ್ಷಿ, ಅಂಬಣ್ಣ ಅರೋಲಿ, ರವೀಂದ್ರನಾಥ, ಎಂ.ಈರಣ್ಣ,ರಾಜುಪಟ್ಟಿ, ವಿಶ್ವನಾಥ ಪಟ್ಟಿ, ಎ.ವಸಂತಕುಮಾರ, ಮಹೇಶ ಇತರರು ಇದ್ದರು.

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.