ಡಿಕೆ ಶಿವಕುಮಾರ್,ಡಿಕೆ ಸುರೇಶ್ ಮನೆ ಮೇಲೆ ಸಿಬಿಐ ದಾಳಿ: ಟ್ರಬಲ್ ಶೂಟರ್ ಗೆ ಮತ್ತೊಂದು ಟ್ರಬಲ್
Team Udayavani, Oct 5, 2020, 9:05 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಡಿ ಕೆ ಶಿ ಮನೆಗೆ ಸೋಮವಾರ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಡಿ ಕೆ ಶಿವಕುಮಾರ್ ಅವರ ಸದಾಶಿವ ನಗರದ ಮನೆ ಸೇರಿದಂತೆ ಕನಕಪುರದಲ್ಲಿ ಕೂಡಾ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಡಿ ಕೆ ಶಿವಕುಮಾರ್ ಅವರ ಸಹೋದರ ಸಂಸದ ಡಿ ಕೆ ಸುರೇಶ್ ಅವರ ಮನೆಗೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿದೆ.
ಇದನ್ನೂ ಓದಿ:ಡಿ ಕೆ ರವಿ ಪತ್ನಿ ಕುಸುಮಾ ಇಂದು ಕಾಂಗ್ರೆಸ್ ಸೇರ್ಪಡೆ: ಏನಿದು ಕಾಂಗ್ರೆಸ್ ಹೊಸ ಪ್ಲ್ಯಾನ್?
ಸಿಬಿಐ ನ ಬೆಂಗಳೂರು ಘಟಕದ ಪೊಲೀಸರು ಈ ದಾಳಿ ನಡೆಸಿದ್ದು, ಡಿಕೆ ಸಹೋದರರಿಗೆ ಸೇರಿದ ಹಲವು ಕಡೆ ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಆರು ಗಂಟೆಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ರಾಮನಗರದ ದೊಡ್ಡ ಆಲನಹಳ್ಳಿಯಲ್ಲಿರುವ ಡಿ ಕೆ ಶಿವಕುಮಾರ್ ಅವರ ಮನೆಗೂ ದಾಳಿ ಮಾಡಲಾಗಿದೆ.
ಈ ಹಿಂದೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ ಕೆ ಶಿವಕುಮಾರ್ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ನಂತರ ಅವರ ಬಂಧನವಾಗಿತ್ತು. ಸದ್ಯ ಡಿ ಕೆ ಶಿ ಜಾಮೀನು ಪಡೆದಿದ್ದು, ಇದೀಗ ಸಿಬಿಐ ದಾಳಿ ನಡೆದಿದ್ದು, ಕನಕಪುರ ಬಂಡೆಗೆ ಮತ್ತೊಂದು ಕಂಟಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!