ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಕಲ್ಪಿಸಿ

Team Udayavani, Oct 5, 2020, 3:55 PM IST

ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಕಲ್ಪಿಸಿ

ಮಂಡ್ಯ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ನಡೆಸುತ್ತಿ ರುವ ಮುಷ್ಕರ 9ನೇ ದಿನವೂ ಮುಂದುವರಿ ದಿದೆ. ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ಮನವಿ ಸಲ್ಲಿಸಿದರು.

ನಗರದ ಅಂಬೇಡ್ಕರ್‌ ಭವನ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡಿ: ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡಿ, ಸೇವಾ ಭದ್ರತೆ ಒದಗಿಸಬೇಕು. ಎಲ್ಲರನ್ನೂ ಕಾಯಂಗೊಳಿಸಬೇಕು. ಆರೋಗ್ಯ ಕ್ಷೇತ್ರದ ಬಜೆಟ್‌ ಅನ್ನು ಶೇಕಡಾವಾರು ಹೆಚ್ಚಿಸಬೇಕು. ಎಲ್ಲ ಹುದ್ದೆಗಳಿಗೆ ವೇತನ ಭತ್ಯೆ ಮತ್ತು ವೇತನ ಶ್ರೇಣಿ ನೀಡಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ವೈದ್ಯಕೀಯ ಶಿಕ್ಷಣಇಲಾಖೆ ಜಾರಿಗೊಳಿಸಿರುವ ಏಕರೂಪ ವೇತನ ಮಾದರಿಯನ್ನು ಎಲ್ಲ ನೌಕರರಿಗೂ ಜಾರಿಗೊಳಿಸ ಬೇಕು. ಹೊರಗುತ್ತಿಗೆ ನೌಕರರಿಗೆ ಗುತ್ತಿಗೆದಾರರ ಮಧ್ಯವರ್ತಿ ಇಲ್ಲದೆ ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿಸಬೇಕು ಎಂದು ಆಗ್ರಹಿಸಿದರು.

ಸೌಲಭ್ಯ ಕಲ್ಪಿಸಲು ಆಗ್ರಹ: ಎನ್‌ಎಚ್‌ಎಂ ಅಡಿಯಲ್ಲಿಕೆಲಸ ಮಾಡುವ ನೌಕರರಿಗೆಕೇಂದ್ರ ಸರ್ಕಾರ ನೀಡುತ್ತಿರುವ ಬೋನಸ್‌ ಹೆಚ್ಚಳವನ್ನು ಕಾರ್ಯಗತಗೊಳಿಸಬೇಕು. ಮುಷ್ಕರದ ದಿನಗಳಲ್ಲಿ ಕಡಿತವಾದ ವೇತನವನ್ನು ಪಾವತಿಸಬೇಕು. ನೌಕರರ ಕಲ್ಯಾಣ ನಿಗಮ/ಮಂಡಳಿ ಸ್ಥಾಪಿಸಬೇಕು. ಆರೋಗ್ಯ ಭಾಗ್ಯ ಯೋಜನೆಯನ್ನು ಗುತ್ತಿಗೆ, ಹೊರಗುತ್ತಿಗೆ ನೌಕರರಿಗೂ ವಿಸ್ತರಿಸಬೇಕು. ಕೆಲಸದ ಸ್ಥಳದಲ್ಲಿ ಗುತ್ತಿಗೆ ನೌಕರರಿಗೆ ಮಾಡುವ ಶೋಷಣೆಯನ್ನು ತಡೆಗಟ್ಟ ಬೇಕು. ತಮ್ಮನ್ನು ಕೆಲಸದಿಂದ ತೆಗೆಯಬಾರದು. ಅನಗತ್ಯವಾಗಿ ಸ್ಥಳ ಬದಲಾವಣೆ ಮಾಡಬಾರದು. ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ್ದಲ್ಲಿ ಆದಿನದ ಪರ್ಯಾಯ ರಜೆ ಮತ್ತು ವೇತನವನ್ನು ನೀಡಬೇಕು. ಹೆರಿಗೆ ರಜೆ, ಪಿತೃತ್ವ ರಜೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಬೇಡಿಕೆ ಈಡೇರಿಕೆಗೆ ಕ್ರಮ: ಮನವಿ ಸ್ವೀಕರಿಸಿದ ಸಚಿವ ನಾರಾಯಣಗೌಡ ಮುಖ್ಯಮಂತ್ರಿಗಳ ಜೊತೆ ಮಾತನಾಡಿ, ನಿಮ್ಮ ಸಮಸ್ಯೆಗಳಿಗೆ ಹಾಗೂ ಬೇಡಿಕೆಗಳ ಈಡೇರಿಕೆಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ನೌಕರರ ಸಂಘದ ರಾಜ್ಯಾಧ್ಯಕ್ಷ ಎಚ್‌.ವೈ.ವಿಶ್ವಾ ರಾಧ್ಯ, ಜಿಲ್ಲಾಧ್ಯಕ್ಷ ಮಾದೇಗೌಡ, ಎಸ್‌.ಉಮೇಶ್‌, ಭಾನು, ಮಹೇಶ್‌, ಚಂದ್ರಕಲಾ, ಶಿವಕುಮಾರ್‌, ಅನಿಲ್‌ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.