ಮಹದಾಯಿ ವಿಚಾರದಲ್ಲಿ ಗೋವಾ ಸಿಎಂ ಸಣ್ಣತನ ಪ್ರದರ್ಶನ: ಕೋನರಡ್ಡಿ

Team Udayavani, Oct 8, 2020, 5:42 PM IST

ಮಹದಾಯಿ ವಿಚಾರದಲ್ಲಿ ಗೋವಾ ಸಿಎಂ ಸಣ್ಣತನ ಪ್ರದರ್ಶನ: ಕೋನರಡ್ಡಿ

ಹುಬ್ಬಳ್ಳಿ: ಮಹದಾಯಿ ವಿಚಾರದಲ್ಲಿ ಗೋವಾ ಸರಕಾರ ಮತ್ತೇ ತಕರಾರು ತೆಗೆದಿದ್ದು, ಅಲ್ಲಿನ ಮುಖ್ಯಮಂತ್ರಿ ಪ್ರಮೋದ ಸಾವಂತ ಅವರು ಸಣ್ಣತನ ಪ್ರದರ್ಶನ ಮಾಡಿದ್ದಾರೆ. ವಿನಾಕಾರಣ ತಗಾದೆ ತೆಗೆಯದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಗೋವಾ ಮುಖ್ಯಮಂತ್ರಿಗೆ ತಿಳಿವಳಿಕೆ ನೀಡಬೇಕೆಂದು ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್‌.ಎಚ್‌.ಕೋನರಡ್ಡಿ ಒತ್ತಾಯಿಸಿದ್ದಾರೆ.

ಕರ್ನಾಟಕ ಮಹದಾಯಿ ನೀರನ್ನು ಕಳಸಾ-ಬಂಡೂರಿ ನಾಲೆಗಳ ಮೂಲಕ ಅಕ್ರಮವಾಗಿ ತಿರುಗಿಸಿದೆ ಎಂದು ಆರೋಪಿಸಿ
ನ್ಯಾಯಾಂಗ ನಿಂದನೆ ಮೊಕದ್ದಮೆ ಸುಪ್ರೀಂಕೋರ್ಟ್‌ನಲ್ಲಿ ದಾಖಲಿಸಿರುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ
ಹೇಳಿದ್ದಾರೆ. ಕರ್ನಾಟದ ವಿರುದ್ಧ ಗೋವಾ ಸಣ್ಣತನ ಪ್ರದರ್ಶಿಸುತ್ತಿದೆ. ಹಿಂದಿನ ಎಲ್ಲಾ ಮುಖ್ಯಮಂತ್ರಿಗಳು ಸುಪ್ರೀಂಕೋರ್ಟ್‌ ತೀರ್ಪಿಗೆ ಬದ್ಧ ಎಂದು ಭರವಸೆ ನೀಡಿದ್ದರು. ಆದರೆ ಇಂದಿನ ಮುಖ್ಯಮಂತ್ರಿ ಸಾವಂತ ಸಣ್ಣತನ ಪ್ರದರ್ಶನ ಮಾಡುತ್ತಿದ್ದಾರೆ.

ನೆರೆ ರಾಜ್ಯವಾಗಿ ಕುಡಿಯುವ ನೀರಿನ ವಿಚಾರದಲ್ಲಿ ಸುಪ್ರೀಂಕೋರ್ಟ್‌ ತೀರ್ಪಿನ ವಿರುದ್ಧ ತಂಟೆ ತೆಗೆಯುವುದು ಸರಿಯಲ್ಲ.
ಈಗಾಗಲೇ ಮಹದಾಯಿ ನ್ಯಾಯಾಧಿಕರಣ ತನ್ನ ಆದೇಶದಲ್ಲಿ ಕುಡಿಯುವ ನೀರಿಗಾಗಿ 5.40 ಟಿಎಂಸಿ ನೀರು ಸೇರಿದಂತೆ
ಕರ್ನಾಟಕ ರಾಜ್ಯಕ್ಕೆ ಒಟ್ಟು 13.42 ಟಿಎಂಸಿ ನೀರನ್ನು ಹಂಚಿಕೆ ಮಾಡಿ ಆದೇಶ ನೀಡಿದ್ದು, ಅಧಿಸೂಚನೆ ಹೊರಡಿಸುವಂತೆ
ಸುಪ್ರೀಂಕೋರ್ಟ್‌ 2020 ಫೆಬ್ರುವರಿ 2 ರಂದು ಆದೇಶ ನೀಡಿದೆ. ಸುಪ್ರೀಂ ಕೋರ್ಟ್‌ ಸೂಚನೆ ಮೇರೆಗೆ 2010 ಫೆಬ್ರುವರಿ 27
ರಂದು ಕೇಂದ್ರ ಸರಕಾರ ಗೆಜೆಟ್‌ ಅಧಿಸೂಚನೆ ಹೊರಡಿಸಿ ರಾಜ್ಯಕ್ಕೆ 13.42 ಟಿಎಂಸಿ ನೀರು ಉಪಯೋಗಿಸಲು ಆದೇಶಿಸಿದೆ.
ಇದರೊಂದಿಗೆ ಜಲ ವಿದ್ಯುತ್‌ ಯೋಜನೆಗೂ ಹಸಿರು ನಿಶಾನೆ ತೋರಿದೆ.

ಕುಡಿಯುವ ನೀರಿಗಾಗಿ ಮಲಪ್ರಭಾ ನದಿಗೆ ಜೋಡಣೆ ಮಾಡಲು ಕಳಸಾ ನಾಲೆಯಿಂದ 1.72 ಟಿಎಂಸಿ, ಬಂಡೂರಿ ನಾಲಾದಿಂದ
2.18 ಟಿಎಂಸಿ ನೀರನ್ನು ರಾಜ್ಯಕ್ಕೆ ಹಂಚಿಕೆ ಮಾಡಲಾಗಿದೆ. ಮಹದಾಯಿ ನದಿಯಿಂದ ಬಹಳಷ್ಟು ನೀರು ಗೋವಾದವರು
ಉಪಯೋಗಿಸದೇ ವ್ಯರ್ಥವಾಗಿ ಸಮುದ್ರ ಸೇರುತ್ತಿದೆ. ಅ ಧಿಸೂಚನೆ ಬಳಿಕ ಮಹದಾಯಿ ನದಿ ತಿರುವು ಯೋಜನೆಗೆ ಕರ್ನಾಟಕ
ಸರಕಾರ ಕಾಮಗಾರಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕಿದೆ. ಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವರು ಈ
ಭಾಗದ ನೀರಿನ ಸಮಸ್ಯೆಯನ್ನರಿತು ಕೂಡಲೇ ಕಾಮಗಾರಿ ಆರಂಭಿಸಬೇಕೆಂದು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.