ನಟ ಯಶ್‌ ಅಭಿವೃದ್ದಿ ಪಡಿಸಿದ ತಲ್ಲೂರ ಕೆರೆ! ರೈಲ್ವೆ ಗುತ್ತಿಗೆದಾರರ ಎಡವಟ್ಟಿಗೆ ಕೆರೆ ಭಣಭಣ

Team Udayavani, Oct 15, 2020, 3:31 PM IST

ನಟ ಯಶ್‌ ಅಭಿವೃದ್ದಿ ಪಡಿಸಿದ ತಲ್ಲೂರ ಕೆರೆ! ರೈಲ್ವೆ ಗುತ್ತಿಗೆದಾರರ ಎಡವಟ್ಟಿಗೆ ಕೆರೆ ಭಣಭಣ

ಯಲಬುರ್ಗಾ: ಈ ಬಾರಿ ಮಳೆಯ ಪ್ರಮಾಣ ವಾಡಿಕೆಗಿಂತ ಹೆಚ್ಚಾಗಿದೆ. ತಾಲೂಕಿನ ಬಹುತೇಕ ಕೆರೆಗಳು ತುಂಬಿ ಭರ್ತಿಯಾಗಿವೆ.
ಭರ್ತಿಯಾದ ಕೆರೆಗಳಿಗೆ ಪೂಜೆ ಬಾಗಿನ ಸಲ್ಲಿಸುವುದನ್ನು ಕಾಣುತ್ತಿದ್ದೇವೆ. ಆದರೆ ತಾಲೂಕಿನಲ್ಲಿಯೇ ಅತಿ ದೊಡ್ಡದಾದ
ಕೆರೆ, ಚಿತ್ರನಟ ಯಶ್‌ ಅಭಿವೃದ್ಧಿ ಪಡಿಸಿದ ತಲ್ಲೂರು ಕೆರೆ ಅಂಗಳ ಮಾತ್ರ ಭಣಗುಡುತ್ತಿದೆ.

ಕೆರೆಗೆ ನೀರು ಬರುವ ಸ್ಥಳವನ್ನು ರೈಲ್ವೆ ಇಲಾಖೆಯವರು ತಪ್ಪಿಸಿದ ಪರಿಣಾಮ ಈ ಬಾರಿ ಹೆಚ್ಚಿನ ಮಳೆಯಾದರೂ ಕೆರೆಯಲ್ಲಿ ನೀರು ಇಲ್ಲದಂತಾಗಿದೆ. ಗದಗ-ವಾಡಿ ರೈಲ್ವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಹೊಣೆ ಹೊತ್ತ ರೈಲ್ವೆ ಗುತ್ತಿಗೆದಾರರು ನೀರಿನ
ಜಾಡು ಹಾದಿಯನ್ನು ತಪ್ಪಿಸಿದ್ದು ಕೆರೆಗೆ ನೀರು ಬರುತ್ತಿಲ್ಲ ಎಂಬುದು ರೈತರ ಆರೋಪವಾಗಿದೆ.

ನೀರಿನ ಸಂಪರ್ಕ ಸ್ಥಳದಲ್ಲಿ ಗುಂಡಿ: ಕೆರೆಗೆ ನೀರು ಬರುವ ಸ್ಥಳ, ಜಮೀನುಗಳಲ್ಲಿ ಮರಂ ತೆಗೆಯಲು ದೊಡ್ಡ ದೊಡ್ಡ
ಪ್ರಮಾಣದಲ್ಲಿ ಗುಂಡಿ ತೋಡಿದ ಪರಿಣಾಮ ನೀರು ಗುಂಡಿಯಲ್ಲಿ ಒಂದಿಷ್ಟು ಸಂಗ್ರಹವಾಗಿದೆ. ಕೆರೆಗೆ ದೊಡ್ಡ ಪ್ರಮಾಣದಲ್ಲಿ ನೀರು ಬರುವ ವಜ್ರಬಂಡಿ, ಲಿಂಗನಬಂಡಿ, ನೀರಿನ ಹರಿವನ್ನು ತಪ್ಪಿಸಿದ್ದರಿಂದ ಕೆರೆಗೆ ನೀರು ಹರಿದು ಬಂದಿಲ್ಲ.

ಇದನ್ನೂ ಓದಿ:ಬಿಹಾರ ರಾಜಕೀಯ ರಂಗು: ಮೂವರು ಸ್ಟಾರ್ ನಾಯಕರು… ಅಟಲ್ ಮೇಲಿನ ಕೋಪಕ್ಕೆ ಎಲ್ ಜೆಪಿ ಸ್ಥಾಪನೆ

ಯಶ್‌ ಅಭಿವೃದ್ದಿ ಪಡಿಸಿದ ಕೆರೆ: ಚಿತ್ರನಟ ಯಶ್‌ ಅವರು ತಮ್ಮ ಯಶೋಮಾರ್ಗ ಸಂಸ್ಥೆ ವತಿಯಿಂದ 4 ಕೋಟಿ ರೂ. ವೆಚ್ಚದಲ್ಲಿ ಹೂಳೆತ್ತಿ ಈ ಕೆರೆ ಅಭಿವೃದ್ಧಿ ಪಡಿಸಿದ್ದರು. ಕೆರೆ 96 ಎಕರೆ ವಿಸ್ತೀರ್ಣ ಹೊಂದಿದೆ. 40 ಗ್ರಾಮಗಳಿಗೆ ಆಸರೆಯಾಗಬೇಕಿದ್ದ ಕೆರೆಗೆ ನೀರಿಲ್ಲ. ನಟ ಯಶ್‌ ಅವರ ಪ್ರಯತ್ನದಿಂದ ತಲ್ಲೂರು ಕೆರೆಗೆ ನೀರು ಬಂದಿತ್ತು. ರೈಲ್ವೆ ಇಲಾಖೆಯ ಗುತ್ತಿಗೆದಾರರ
ಅವೈಜ್ಞಾನಿಕ ನಿರ್ಣಯದಿಂದ ನೀರು ಇಲ್ಲದಂತಾಗಿದೆ. ಕಳೆದ ಅಭಿವೃದ್ಧಿ ಪಡಿಸಿದ ಬಳಿಕ ಕೆರೆ ತುಂಬಿ ಈ ಭಾಗದ ರೈತರಿಗೆ ಅನುಕೂಲವಾಗಿತ್ತು. ಆದರೆ ಈ ವರ್ಷ ನೀರಿನ ಮಾರ್ಗ ಬದಲಿಸಿದ್ದಾರೆ.

ರೈತರ ಆಕ್ರೋಶ: ಕೆರೆಯ ನೀರಿನ ಹಾದಿ ತಪ್ಪಿಸಿದ ರೈಲ್ವೆ ಗುತ್ತಿಗೆದಾರರ ನಡೆ ಈ ಭಾಗದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಗುತ್ತಿಗೆದಾರರ ಮೇಲೆ ಕ್ರಮ ಜರುಗಿಸುವಂತೆ ತಹಶೀಲ್ದಾರ್‌ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು
ರೈತರು ದೂರುತ್ತಾರೆ.

– ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.