ಸ್ವಚ್ಛ-ಹಸಿರು ಜಿಲ್ಲೆಗೆ ಸಹಕರಿಸಿ

Team Udayavani, Oct 20, 2020, 3:41 PM IST

cb-tdy-1

ಚಿಕ್ಕಬಳ್ಳಾಪುರ: ಜಿಲ್ಲೆಯನ್ನು ಸ್ವಚ್ಛ ಮತ್ತು ಹಸಿರೀಕರಣ ಗೊಳಿಸಲುಕ್ರಮಕೈಗೊಳ್ಳಲಾಗಿದ್ದು, ಸರ್ಕಾರಿ ಜಮೀನು, ಶಾಲಾ ಕಾಲೇಜುಗಳ ಆವರಣ ಮತ್ತು ಖಾಸಗಿ ಪ್ರದೇಶಗಳಲ್ಲಿ ಸಸಿಗಳನ್ನು ನೆಟ್ಟು ಪೋಷಣೆ ಮಾಡುವ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಜಿಲ್ಲೆಯ ಶಿಡ್ಲಘಟ್ಟದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯನ್ನು ಕ್ಲೀನ್‌ ಅಂಡ್‌ ಗ್ರೀನ್‌ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆಯಲ್ಲಿಶೇಖರಣೆಯಾಗುವ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಗೊಳಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಜೊತೆಗೆ ಕಸದಿಂದ ರಸ ಮಾಡುವ ಯೋಜನೆ ಸಹ ರೂಪಿಸಲಾಗಿದ್ದು, ನಾಗರಿಕರು ರಸ್ತೆ ಬದಿಯಲ್ಲಿ ಅಥವಾ ಎಲ್ಲೆಂದರಲ್ಲೇ ಕಸ ಎಸೆದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತ ಶ್ರೀನಿವಾಸ್‌ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಸುಮಾರು 200 ಗಿಡ ಗಳನ್ನು ನೆಟ್ಟು ಪೋಷಣೆಮಾಡುವ ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಬೆಳೆದಿರುವ ಗಿಡಮರಗಳನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದರು.

ಜಿಲ್ಲಾ ಎಸ್‌.ಪಿ. ಮಿಥುನ್‌ಕುಮಾರ್‌, ತಹಶೀಲ್ದಾರ್‌ಕೆ.ಅರುಂಧತಿ, ಶಿಡ್ಲಘಟ್ಟ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕ ರವೀಂದ್ರ, ಉಪನ್ಯಾಸಕ ಮುನಿರಾಜು, ಎನ್‌ಎಸ್‌ಎಸ್‌ ಘಟಕಾಧಿಕಾರಿ ಅನ್ನಪೂರ್ಣಭಟ್‌,ಸ್ಕೌಟ್ಸ್‌ ಅಂಡ್‌ ಗೈಡ್ಸ್‌ನ ಪ್ರಕಾಶ್‌, ನಗರಸಭೆ ಇಂಜಿನಿಯರ್‌ ಪ್ರಸಾದ್‌, ಆರೋಗ್ಯ ನಿರೀಕ್ಷಕಿ ಶೋಭಾ,ನೀರು ಸರಬರಾಜು ವಿಭಾಗದ ಮುರಳಿ, ಸುಧಾಕರ್‌,ಎಬಿವಿಪಿ ಮುಖಂಡರಾದ ಮಂಜುನಾಥ್‌ರೆಡ್ಡಿ, ತಾಲೂಕು ಅಧ್ಯಕ್ಷ ಸಿಎಂಟಿ ರಮೇಶ್‌ ಇದ್ದರು.

ಆಸೆ, ಆಕಾಂಕ್ಷೆಬದಿಗಿರಿಸಿ ಗುರಿಯತ್ತಮುನ್ನುಗ್ಗಿ: ಲತಾ ಸಲಹೆ :

ಚಿಕ್ಕಬಳ್ಳಾಪುರ: ವಿದ್ಯಾರ್ಥಿ ಜೀವನದಲ್ಲಿ ಪ್ರಾಮಾಣಿಕವಾಗಿ ಓದುವ ಅಭ್ಯಾಸ ಮುಂದುವರಿಸಿದಾಗ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸುತ್ತದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗೇಟ್‌ ಬಳಿ ಬಿಜಿಎಸ್‌ ಸ್ಕೂಲ್‌ ಮತ್ತು ಪಿಯುಸಿ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಿಜಿಎಸ್‌ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ 2019-20 ನೇ ಸಾಲಿನ ಎಸ್‌ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜವಾಬ್ದಾರಿ ಹೆಚ್ಚಿಸಿದೆ: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಜಿಲ್ಲೆಯು ರಾಜ್ಯದ ಗಮನ ಸೆಳೆಯುವಂತೆ ಮಾಡಿರುವುದರಲ್ಲಿ ಜಿಲ್ಲಾಡಳಿತದ ಪಾತ್ರಕ್ಕಿಂತ ವಿದ್ಯಾರ್ಥಿ ಹಾಗೂ ಶಿಕ್ಷಕ ವೃಂದದ ಪಾತ್ರ ಹೆಚ್ಚಿದೆ. ಇದು ಹೆಮ್ಮೆಯ ಸಂಗತಿ ಜೊತೆಗೆ ಜವಾಬ್ದಾರಿಯೂ ಹೆಚ್ಚಿಸಿದೆ ಎಂದರು. ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌ ಮಾತನಾಡಿ, ಒಬ್ಬ ವ್ಯಕ್ತಿಯ ಜೀವನದ ಏಳುಬೀಳುಗಳಿಗೆ ಮೂಲಾಧಾರವೇ ಪ್ರೌಢ ಶಾಲಾ ಶಿಕ್ಷಣವಾಗಿದೆ. ಇಲ್ಲಿ ಯಾರು ಜೀವನದಲ್ಲಿ ಎದು ರಾಗುವ ಸಮಸ್ಯೆಗಳನ್ನು ನಿವಾರಿಸಿಕೊಂಡು ಯಶಸ್ವಿಯಾಗಿ ಮುನ್ನುಗ್ಗುತ್ತಾರೋ ಅವರ ಭವಿಷ್ಯ ಉಜ್ವಲವಾಗಿರುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್‌ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಉತ್ತಮ ಸಾಧನೆ ತೋರಿ ರಾಜ್ಯಕ್ಕೆ ಮೊದಲ ಸ್ಥಾನಗಳಿಸಿರುವುದು ಸಂತೋಷದ ವಿಷಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ

ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ ಟ್ಯಾಪ್‌ ವಿತರಣೆ ಮಾಡಲಾಯಿತು. ಬಿಜಿಎಸ್‌ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಮಹದೇವಯ್ಯ, ಶಿಕ್ಷಣಸಂಯೋಜಕ ಭಾಸ್ಕರಗೌಡ, ತಹಶೀಲ್ದಾರ್‌ ಅರುಂಧತಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ದೇವರಾಜ್‌, ಶಿಕ್ಷಕ ವೆಂಕಟರೆಡ್ಡಿ, ಮಂಜುನಾಥ್‌ರೆಡ್ಡಿ ಇದ್ದರು.

ಟಾಪ್ ನ್ಯೂಸ್

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.