ಮಳೆಗೆ ಮೆಣಸಿನಕಾಯಿ ಹಾಳು

ಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡಲು ರೈತರ ಒತ್ತಾಯ

Team Udayavani, Oct 22, 2020, 4:14 PM IST

rc-tdy-1

ದೇವದುರ್ಗ: ಭಾರೀ ಮಳೆ ಹಿನ್ನೆಲೆಯಲ್ಲಿ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಮೆಣಸಿನಕಾಯಿ, ಭತ್ತ, ಹತ್ತಿ, ತೊಗರಿ, ಕಬ್ಬು ಸೇರಿ ಇತರೆ ಬೆಳೆಗಳು ಸಂಪೂರ್ಣ ಹಾಳಾಗಿದೆ. ಹೊನ್ನಟಗಿ ಗ್ರಾಮದ ಮಲ್ಲಪ್ಪ ಎಂಬುವವರ 4 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿ ಹಾಳಾಗಿದ್ದು, ರೈತರು ಕಣ್ಣೀರು ಹಾಕುವಂತಾಗಿದೆ.

ಪಟ್ಟಣ ಸೇರಿ ತಾಲೂಕಿನಾದ್ಯಂತ ಆಗಸ್ಟ್‌, ಸೆಪ್ಟೆಂಬರ್‌ ತಿಂಗಳಲ್ಲಿ ಬಿಟ್ಟು ಬಿಡದೇ ನಿರಂತರ ಸುರಿದ ಮಳೆಯಿಂದಾಗಿ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಗಳು ಹಾನಿಯಾಗಿವೆ. ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳ ತಂಡ ಸಮೀಕ್ಷೆ ಮಾಡಲಾಗಿದೆ. ಆಗಸ್ಟ್‌ ಮತ್ತು ಸೆಪ್ಟೆಂಬರ್‌ ಇಲ್ಲಿವರೆಗೆ 215 ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ, 196 ಹೆಕ್ಟೇರ್‌ ಪ್ರದೇಶದಲ್ಲಿತೊಗರಿ, 986 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ, 10 ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬು ನಷ್ಟವಾಗಿದೆ ಎಂದು ಸಮೀಕ್ಷೆ ತಂಡದ ಅಧಿಕಾರಿಯೊಬ್ಬರು ತಿಳಿಸಿದರು.  ಇನ್ನೂ ಬೆಳೆ ಸಮೀಕ್ಷೆ ಪೂರ್ಣವಾಗಬೇಕಾಗಿದೆ.

ಬೆಳೆಗಳಿಗೆ ರೋಗ: ತಾಲೂಕಿನಾದ್ಯಂತ ನಿರಂತರ ಮಳೆಯ ಅವಾಂತರಕ್ಕೆ ಹತ್ತಿ, ತೊಗರಿ ಬೆಳೆಗಳಿಗೆ ಕೆಲ ರೋಗಗಳ ಲಕ್ಷಣಗಳು ಕಂಡುಬಂದಿವೆ. ಕಾಡಿಗ ರೋಗ, ಕಾಯಿ ಕೊರಕ ಸೇರಿ ಇತರೆ ರೋಗಗಳು ಹರಡುತ್ತಿದ್ದು, ರೈತರು ಆತಂಕ ಪಡುವಂತಾಗಿದೆ. ಹತ್ತಿ ಕೆಂಪು ಬಣ್ಣಕ್ಕೆತಿರುಗಿದೆ. ಕೃಷ್ಣಾ ನದಿ ತೀರದ ಗ್ರಾಮಗಳ ವ್ಯಾಪ್ತಿಯ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ನೆಲಕ್ಕಚ್ಚಿದೆ. ಈ ಭಾರಿ 50 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಭತ್ತ ನಾಟಿ ಮಾಡಿದ್ದಾರೆ. ಮೆಣಸಿನಕಾಯಿ ಬೆಳೆದ ರೈತರ ಪರಿಸ್ಥಿತಿಯಂತೂ ಹೇಳತೀರದಂತಾಗಿದೆ.

ಹುದ್ದೆಗಳು ಖಾಲಿ: ಕೃಷಿ ಇಲಾಖೆಯಲ್ಲಿ ಕೆಲ ಹುದ್ದೆಗಳು ಖಾಲಿಯಿದ್ದು, ಹುದ್ದೆ ಭರ್ತಿಗೆ ಸರಕಾರ ಮೀನಮೇಷ ಎಣಿಸುತ್ತಿರುವ ಹಿನ್ನೆಲೆಯಲ್ಲಿ ರೈತಪರ ಯೋಜನೆ ಸಮರ್ಪಕವಾಗಿ ಪೂರೈಕೆಯಲ್ಲಿ ವಿಳಂಬಕ್ಕೆ ಕಾರಣ ಎನ್ನಲಾಗುತ್ತಿದೆ. ಅಧೀಕ್ಷಕರು, ಎಫ್‌ ಡಿಎಸ್‌, ಪ್ರಥಮ ದರ್ಜೆ ಸಹಾಯಕ, ಇಬ್ಬರು ಕೃಷಿ ತಾಂತ್ರಿಕ ಅಧಿಕಾರಿಗಳು ಮೂವರು ಪರಿಚಾರ ಹುದ್ದೆಯಲ್ಲಿ ಒಬ್ಬರೂ ಕರ್ತವ್ಯ ನಿರ್ವಹಿಸಲಾಗುತ್ತಿದೆ. ಸ್ವಂತ ವಾಹನ ಚಾಲಕ ಸಮಸ್ಯೆ ಇಲಾಖೆಗೆ ಕಾಡುತ್ತಿದೆ.

ಕಟ್ಟಡ ಶಿಥಿಲ: ಪಟ್ಟಣದಲ್ಲಿರುವ ಕೃಷಿ ಸಹಾಯಕ ನಿರ್ದೇಶಕ ಕಚೇರಿ ಶಿಥಿಲಗೊಂಡಿದೆ. ಆಗಾಗ ಮೇಲಿನ ಛತ್ತು ಸಿಮೆಂಟ್‌ ಉದುರಿ ಬೀಳುತ್ತಿದ್ದು, ಅಧಿಕಾರಿ, ಸಿಬ್ಬಂದಿ ಆತಂಕದಲ್ಲೇ ಕೆಲಸ ಕಾರ್ಯಗಳು ನಿರ್ವಹಿಸಬೇಕಾಗಿದೆ. ಕಟ್ಟಡ ದುರಸ್ತಿಗಾಗಿ ಕೃಷಿ ಅಧಿಕಾರಿ ಮೇಲಧಿಕಾರಿಗೆ ಪತ್ರ ಬರೆಯಲಾಗಿದೆ. ಅನುದಾನ ಕೊರತೆ ಅಧಿಕಾರಿಗಳ ನಿರ್ಲಕ್ಷéವೋ ಶಿಥಿಲಗೊಂಡ ಕಟ್ಟಡದಲ್ಲೇ ಭಯದಿಂದ ಕೆಲಸಗಳು ಮಾಡಬೇಕಾಗಿದೆ.

ಮಳೆಯಿಂದ ಹಾನಿಯಾದ ಬೆಳೆಗಳ ಸಮೀಕ್ಷೆ ಕಾರ್ಯ ನಡೆದಿದೆ. ಭತ್ತ, ಮೆಣಸಿನಕಾಯಿ, ಹತ್ತಿ, ತೊಗರಿ ಸೇರಿ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಹಾನಿ ಉಂಟಾಗಿದೆ. ವರದಿ ತಾಲೂಕಾಡಳಿತಕ್ಕೆ ನೀಡಲಾಗಿದೆ.-ಡಾ.ಎಸ್‌.ಪ್ರಿಯಾಂಕ್‌, ಸಹಾಯಕ ಕೃಷಿ ನಿರ್ದೇಶಕಿ.

ಬೆಳೆ ನಷ್ಟದ ಸಮೀಕ್ಷೆ ಪಾರಾದರ್ಶಕವಾಗಿ ನಡೆಯಬೇಕು. ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ನೊಂದ ರೈತರಿಗೆಪರಿಹಾರ ನೀಡಬೇಕು. ವಿಳಂಬ ಧೋರಣೆ ತಾಳಿದಲ್ಲಿ ಹೋರಾಟ ಅನಿವಾರ್ಯತೆ.-ರೂಪಾ ನಾಯಕ,ಜಿಲ್ಲಾ ಸಂಚಾಲಕಿ, ರೈತ ಸಂಘ

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.