ಸರಣಿ ರಜೆ; ಕರಾವಳಿಗೆ ಭಕ್ತರ, ಪ್ರವಾಸಿಗರ ಆಗಮನ: ಬೀಚ್‌, ಸೀವಾಕ್‌ನಲ್ಲಿ ಜನಸಂದಣಿ

ಧಾರ್ಮಿಕ ಕ್ಷೇತ್ರಗಳಲ್ಲಿ ಜನದಟ್ಟಣೆ

Team Udayavani, Nov 1, 2020, 6:10 AM IST

ಸರಣಿ ರಜೆ; ಕರಾವಳಿಗೆ ಭಕ್ತರ, ಪ್ರವಾಸಿಗರ ಆಗಮನ: ಬೀಚ್‌, ಸೀವಾಕ್‌ನಲ್ಲಿ ಜನಸಂದಣಿ

ಮಂಗಳೂರು/ಉಡುಪಿ: ನವರಾತ್ರಿ ಬಳಿಕ ಮತ್ತೆ ನಿರಂತರ ಎರಡು ಮೂರು ದಿನ ಸರಕಾರಿ ರಜೆ ನಿಮಿತ್ತ ವಿವಿಧ ಜಿಲ್ಲೆಗಳ ಭಕ್ತರು, ಪ್ರವಾಸಿಗರು ಉಭಯ ಜಿಲ್ಲೆಗಳ ಪ್ರಮುಖ ಧಾರ್ಮಿಕ ಕ್ಷೇತ್ರ ಸಹಿತ ಪ್ರವಾಸಿ ಸ್ಥಳಗಳಿಗೆ ಭಾರೀ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.

ಈದ್‌ ಮಿಲಾದ್‌, ವಾಲ್ಮೀಕಿ ಜಯಂತಿ ಮತ್ತು ವೀಕೆಂಡ್‌ ಹಿನ್ನೆಲೆಯಲ್ಲಿ ರಜೆ ಇರುವುದರಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಕಟೀಲು, ಕೊಲ್ಲೂರು ಮುಂತಾದ ದೇಗುಲಗಳಿಗೆ ಭಕ್ತರು ಅಪಾರ ಸಂಖ್ಯೆಯಲ್ಲಿ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ.

ಧರ್ಮಸ್ಥಳದ ಮಂಜುನಾಥ ಸನ್ನಿಧಿ, ಕೊಕ್ಕಡ ಶ್ರೀ ಸೌತಡ್ಕ ಮಹಾಗಣಪತಿ ಕ್ಷೇತ್ರ, ಸುರ್ಯ ಶ್ರೀ ಸದಾಶಿವರುದ್ರ ಸಹಿತ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚು ಕಂಡುಬರುತ್ತಿದೆ. ನಾನಾ ಕಡೆಗಳಿಂದ ಪ್ರವಾಸಿಗರು ಬರುತ್ತಿರುವ ಕಾರಣ ವಸತಿ ಗೃಹಗಳು ಭರ್ತಿಯಾಗುತ್ತಿವೆ. ಧರ್ಮಸ್ಥಳದಲ್ಲಿ 15 ಸಾವಿರಕ್ಕೂ ಮಿಕ್ಕಿ ಭಕ್ತರು ದೇವರ ದರ್ಶನ ಪಡೆದಿದ್ದು ಹಲವು ಸಮಯಗಳ ಬಳಿಕ ಧಾರ್ಮಿಕ ಕ್ಷೇತ್ರಕ್ಕೆ ಜೀವಕಳೆ ಬಂದಂತಾಗಿದೆ.

ಇದನ್ನೂ ಓದಿ:ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣ: ಒಟ್ಟು 9 ಆರೋಪಿಗಳ ಬಂಧನ

ಕುಕ್ಕೆ: ಹೆಚ್ಚಿನ ಭಕ್ತರ ಆಗಮನ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶುಕ್ರವಾರ, ಶನಿವಾರ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿ ದೇವರ
ದರ್ಶನ ಪಡೆದರು.

ಭಕ್ತರು ನಿಗದಿತ ಮಿತಿಯಲ್ಲಿ ಸೇವೆಗಳನ್ನು ನೆರವೇರಿಸುತ್ತಿದ್ದಾರೆ. ಶನಿವಾರ ಸುಮಾರು ಹತ್ತು ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ರಾತ್ರಿಯೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

ಕಟೀಲು: 22 ಮದುವೆ
ಕಟೀಲು: ಸರಣಿಯಾಗಿ ಸರಕಾರಿ ರಜೆಯಾಗಿರುವುದರಿಂದ ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶನಿವಾರ ಭಾರೀ ಜನಸಂದಣಿ ಇತ್ತು ಶುಕ್ರವಾರ 22ಕ್ಕೂ ಹೆಚ್ಚು ಮದುವೆ ನಡೆದಿದ್ದರೆ 10 ಸಾವಿರಕ್ಕೂ ಮಿಕ್ಕಿ ಭಕ್ತರು ದೇವರ ದರ್ಶನ ಪಡೆದಿದ್ದಾರೆ. ಶನಿವಾರ ಭಕ್ತರ ಸಂಖ್ಯೆ ಸ್ವಲ್ಪ ಕಡಿಮೆ. ಆದರೆ ರವಿವಾರ ಭಕ್ತರ ಸಂಖ್ಯೆ ದ್ವಿಗುಣವಾಗುವ ನಿರೀಕ್ಷೆ ಹೊಂದಲಾಗಿದೆ. ದೇವಸ್ಥಾನದಲ್ಲಿ ಎಲ್ಲ ಸೇವಾ ಕಾರ್ಯಗಳು ನಡೆಯುತ್ತಿದ್ದು, ದಿನಂಪ್ರತಿ ರಾತ್ರಿ 12 ರಂಗ ಪೂಜೆಗಳು ನಡೆಯುತ್ತಿವೆ ಎಂದು ದೇವಸ್ಥಾನದ ಮೂಲಗಳು ತಿಳಿಸಿದೆ.

ಇದನ್ನೂ ಓದಿ:ಹೊಟೇಲ್‌ನಲ್ಲಿ “ಗುಂಡು ಹಾರಾಟ’: ಮೂವರಿಗಾಗಿ ಶೋಧ

ಭಕ್ತರಿಂದ ದೇವಿಯ ದರ್ಶನ
ಕುಂದಾಪುರ: ಇಲ್ಲಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲೂ ಭಾರೀ ಸಂಖ್ಯೆಯಲ್ಲಿ ಭಕ್ತರು ಶ್ರೀದೇವಿಯ ದರ್ಶನ ಪಡೆದಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರು ಹೆಚ್ಚಾಗಿ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಕೇರಳ, ತಮಿಳುನಾಡಿನ ಭಕ್ತರ ಸಂಖ್ಯೆ ವಿರಳವಾಗಿತ್ತು.

ಬೀಚ್‌, ಸೀವಾಕ್‌ನಲ್ಲಿ ಜನಸಂದಣಿ
ಮಲ್ಪೆ: ಈದ್‌ ಮಿಲಾದ್‌, ವಾಲ್ಮೀಕಿ ಜಯಂತಿ, ವೀಕೆಂಡ್‌ ಹೀಗೆ ಮೂರು ದಿನಗಳ ಸರಣಿ ರಜೆಯಿಂದಾಗಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಮಲ್ಪೆ ಬೀಚ್‌ ಮತ್ತು ಸೀವಾಕ್‌ವೆಯಲ್ಲಿ ಜನ ಜಂಗುಳಿ ಉಂಟಾಗಿದ್ದು, ಪರಿಣಾಮ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ನಿತ್ಯ ಟ್ರಾಫಿಕ್‌ಜಾಮ್‌ ಸಮಸ್ಯೆ ತಲೆದೋರಿ ವಾಹನ ಸವಾರರು ಪರದಾಡಬೇಕಾಯಿತು.

ಪ್ರವಾಸಿಗರ ವಾಹನದಿಂದಾಗಿ ಮಲ್ಪೆ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿ ಸಮಸ್ಯೆ ಯಾಗಿದೆ. ನೂರಾರು ವಾಹನಗಳಲ್ಲಿ ಮಲ್ಪೆ ಕಡೆಗೆ ಪ್ರವಾಸಿಗರೇ ಆಗಮಿಸುತ್ತಿದ್ದಾರೆ. ಸಂಜೆ ವೇಳೆ ಟ್ರಾಫಿಕ್‌ ಸಮಸ್ಯೆ ಮತ್ತಷ್ಟು ಹೆಚ್ಚಾಗಿದ್ದು ವಾಹನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.

ಇದನ್ನೂ ಓದಿ:ಅದಾನಿ ಸಮೂಹ ಸಂಸ್ಥೆಗೆ ಮಂಗಳೂರು ವಿಮಾನ ನಿಲ್ದಾಣ ಹಸ್ತಾಂತರ

ಪಾರ್ಕಿಂಗ್‌ ಸಮಸ್ಯೆ
ಹೊರಜಿಲ್ಲೆಯಿಂದ ಪ್ರವಾಸಿಗರು ಶುಕ್ರವಾರ ಮತ್ತು ಶನಿವಾರ ಅಪಾರ ಸಂಖ್ಯೆಯಲ್ಲಿ ಮಲ್ಪೆ ಬೀಚ್‌ ಮತ್ತು ಸೀವಾಕ್‌ಗೆ ಭೇಟಿ ನೀಡಿದ್ದಾರೆ. ಇದರಿಂದಾಗಿ ಬೀಚ್‌ನ ಪಾರ್ಕಿಂಗ್‌ ಏರಿಯಾಗಳಲ್ಲಿ ವಾಹನ ನಿಲುಗಡೆಗೆ ಜಾಗದ ಸಮಸ್ಯೆ ಉಂಟಾಗಿದೆ. ರವಿವಾರ ಇನ್ನಷ್ಟು ಜನ ಹೆಚ್ಚಾಗುವ ಸಾಧ್ಯತೆ ಇದೆ.

ಸೈಂಟ್‌ ಮೇರಿಸ್‌ನಲ್ಲಿ ಜನ ವಿರಳ
ಸೈಂಟ್‌ಮೇರಿ ದ್ವೀಪಕ್ಕೆ ಲಾಕ್‌ಡೌನ್‌ನಿಂದ ಸ್ಥಗಿತಗೊಳಿಸಲಾಗಿದ್ದ ಬೋಟ್‌ ಸಂಚಾರ ಇದೀಗ ಮತ್ತೆ ಆರಂಭವಾಗಿದೆ. ಬೋಟ್‌ ಯಾನ ವಾರದ ಹಿಂದೆ ಆರಂಭಗೊಂಡಿದ್ದರೂ, ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಮಾತ್ರ ತೀರ ವಿರಳವಾಗಿದೆ.

ಸೈಂಟ್‌ ಮೇರೀಸ್‌ಗೆ ಕೇರಳದ ಮಂದಿ ಬಹು ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಇದೀಗ ಕೇರಳದ ಮಂದಿ ಪ್ರವಾಸ ಕೈಗೊಳ್ಳದ ಕಾರಣ ಇಲ್ಲಿಗೆ ಬರುವ ಮಂದಿಯೂ ಕಡಿಮೆ ಯಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.