ತೆರಿಗೆ ಆದಾಯಕ್ಕೆ ಹಬ್ಬದ “ಕೊಡುಗೆ’; ಹೆಚ್ಚಿದೆ ಅಬಕಾರಿ ಸುಂಕ

ಮೋಟಾರು ವಾಹನ ಶುಲ್ಕ ಜಿಗಿತ

Team Udayavani, Nov 2, 2020, 10:15 PM IST

ತೆರಿಗೆ ಆದಾಯಕ್ಕೆ ಹಬ್ಬದ “ಕೊಡುಗೆ’ : ಹೆಚ್ಚಿದೆ ಅಬಕಾರಿ ಸುಂಕ

ಬೆಂಗಳೂರು: ಕೊರೊನಾದಿಂದಾಗಿ ಕೊಂಚ ಕುಂಠಿತವಾಗಿದ್ದ ದೇಶದ ಅರ್ಥ ವ್ಯವಸ್ಥೆ ಚೇತರಿಕೆ ಕಾಣುತ್ತಿದೆ ಎಂದು ವಿತ್ತ ಕಾರ್ಯದರ್ಶಿ ಅಜಯ ಭೂಷಣ ಪಾಂಡೆ ಹೇಳಿದ್ದರು. ಅದಕ್ಕೆ ಪೂರಕವಾಗಿ ರಾಜ್ಯದ ಆರ್ಥ ವ್ಯವಸ್ಥೆ ಕೂಡ ದೀಪಾವಳಿ ವೇಳೆಗೆ ಚೈತನ್ಯ ಪಡೆಯುತ್ತಿದೆ. ಸರಕಾರದ ಪ್ರಮುಖ ತೆರಿಗೆ ಮೂಲವಾಗಿರುವ ಅಬಕಾರಿ ಸುಂಕದ ಆದಾಯವೂ ಆಶಾದಾಯಕವಾಗಿದೆ. ವಿತ್ತೀಯ ವರ್ಷದ ಅಂತ್ಯಕ್ಕೆ ನಿಗದಿತ ಗುರಿಯಷ್ಟು ತೆರಿಗೆ ಸಂಗ್ರಹದತ್ತ ಹೆಜ್ಜೆ ಇಡುವ ಭರವಸೆ ಮೂಡಿದೆ.

ಕಳೆದ ತಿಂಗಳು ಅಬಕಾರಿ ಸುಂಕ ಮೂಲದಿಂದ ಬರೋಬ್ಬರಿ 2,005 ಕೋಟಿ ರೂ. ಸಂಗ್ರಹವಾಗಿತ್ತು. 2019ರ ಅಕ್ಟೋಬರ್‌ನಲ್ಲಿ 1,750 ಕೋಟಿ ರೂ. ಸಂಗ್ರಹವಾಗಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಇಲಾಖೆಗೆ 255 ಕೋಟಿ ರೂ. ಹೆಚ್ಚುವರಿ ತೆರಿಗೆ ಆದಾಯ ಬಂದಿದೆ. ಆ ಮೂಲಕ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅಕ್ಟೋಬರ್‌ ಅಂತ್ಯದ ವರೆಗೆ ಅಬಕಾರಿ ಸುಂಕ ಆದಾಯ 11,698 ಕೋಟಿ ರೂ. ತಲುಪಿದೆ. 2019ರ ಅಕ್ಟೋಬರ್‌ ಅಂತ್ಯಕ್ಕೆ 12,630 ಕೋಟಿ ರೂ. ಸಂಗ್ರಹವಾಗಿದ್ದು, ಅದಕ್ಕೆ ಹೋಲಿಸಿದರೆ 932 ಕೋಟಿ ರೂ. ಕಡಿಮೆ ಇದೆ. ಆರ್ಥಿಕ ವರ್ಷದಲ್ಲಿ ಅಬಕಾರಿ ಸುಂಕ ಆದಾಯ ಮೂಲಕದಿಂದ ಒಟ್ಟು 22,700 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ಇದೆ.

ಮಾಸಿಕ ಗುರಿಗಿಂತ ಹೆಚ್ಚು ಸಂಗ್ರಹ
ಪ್ರಸಕ್ತ ಹಣಕಾಸು ವರ್ಷದಲ್ಲಿ ಮೋಟಾರು ವಾಹನ ಶುಲ್ಕ ಆದಾಯವು ಮಾಸಿಕ ಗುರಿಗಿಂತ ಹೆಚ್ಚು ಸಂಗ್ರಹವಾಗಿರುವುದು ಇಲಾಖೆಯಲ್ಲಿ ಹುರುಪು ಹೆಚ್ಚಿಸಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ಅಕ್ಟೋಬರ್‌ನಲ್ಲಿ ಮೋಟಾರು ವಾಹನ ಶುಲ್ಕದಿಂದ 550 ಕೋಟಿ ರೂ. ಆದಾಯ ಸಂಗ್ರಹ ಗುರಿ ಹೊಂದಲಾಗಿತ್ತು. ಆದರೆ 560 ಕೋಟಿ ರೂ. ಆದಾಯ ಸಂಗ್ರಹವಾಗಿದ್ದು, ನಿರೀಕ್ಷೆ ಮೀರಿ ಗುರಿ ಸಾಧನೆಯಾಗಿದೆ. ಆ ಮೂಲಕ ಪ್ರಸಕ್ತ ಹಣಕಾಸು ವರ್ಷದಲ್ಲಿ ಮೋಟಾರು ವಾಹನ ಶುಲ್ಕ ಮೂಲದಿಂದ 2,400 ಕೋಟಿ ರೂ. ಸಂಗ್ರಹವಾಗಿದೆ. 2021ರ ಮಾರ್ಚ್‌ ಅಂತ್ಯದ ಹೊತ್ತಿಗೆ ಒಟ್ಟು 6,616 ಕೋಟಿ ರೂ. ಆದಾಯ ಸಂಗ್ರಹ ಗುರಿ ಇದೆ.

ರಿಯಲ್‌ ಎಸ್ಟೇಟ್‌ ಉದ್ಯಮ ಚೇತರಿಕೆ
ಮುದ್ರಾಂಕ ಮತ್ತು ನೋಂದಣಿ ಶುಲ್ಕ ಆದಾಯ ಸಂಗ್ರಹ ಕೂಡ ಅಕ್ಟೋಬರ್‌ನಲ್ಲಿ ಆಶಾದಾಯಕವಾಗಿರುವುದು ಅಂಕಿಸಂಖ್ಯೆಯಿಂದ ಸ್ಪಷ್ಟವಾಗುತ್ತದೆ. ಅಕ್ಟೋಬರ್‌ನಲ್ಲಿ ಈ ಮೂಲದ ಆದಾಯದಿಂದ 933 ಕೋಟಿ ರೂ. ಸಂಗ್ರಹವಾಗಿದೆ. ಹಿಂದಿನ 2019ರ ಅಕ್ಟೊಬರ್‌ನಲ್ಲಿ 902 ಕೋಟಿ ರೂ. ಸಂಗ್ರಹವಾಗಿತ್ತು. ಮುದ್ರಾಂಕ ಮತ್ತು ನೋಂದಣಿ ಶುಲ್ಕ ಆದಾಯ ಹೆಚ್ಚಳವು ರಿಯಲ್‌ ಎಸ್ಟೇಟ್‌ ಉದ್ಯಮದ ಚೇತರಿಕೆ, ಹೊಸ ನಿವೇಶನ, ಫ್ಲ್ಯಾಟ್‌ ಖರೀದಿ, ವರ್ಗಾವಣೆ ಪ್ರಕ್ರಿಯೆ ಕ್ರಮೇಣ ಸಹಜ ಸ್ಥಿತಿಗೆ ಮರಳುವುದರ ಸೂಚನೆ ನೀಡಿದಂತಿದೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.