ದೇಗುಲ ರಕ್ಷಣೆಗೆ ಜನಜಾಗೃತಿ ಸಭೆ

Team Udayavani, Nov 4, 2020, 9:34 PM IST

uk-tdy-1

ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ಭಟ್ಕಳ ಉಪವಿಭಾಗ ಹೊನ್ನಾವರ ವೃತ್ತ ವತಿಯಿಂದ ಹೊನ್ನಾವರ ಪ್ರತಿಭೋದಯ ಸಬಾಭವನದಲ್ಲಿ ಹೊನ್ನಾವರ ತಾಲೂಕಿನ ದೇವಾಲಯಗಳ ಭದ್ರತೆ ಕುರಿತು ಜನಜಾಗೃತಿ ಸಭೆ ನಡೆಯಿತು.

ಸಿಪಿಐ ಶ್ರೀಧರ ನಾಯ್ಕ ಮಾತನಾಡಿ,ಇತ್ತೀಚೆಗೆ ಹೊರ ಜಿಲ್ಲೆಗಳಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವಾರು ತಾಲೂಕುಗಳ ದೇವಾಲಯಗಳಲ್ಲಿ ಕಳ್ಳತನಗಳುನಡೆಯುತ್ತಿದ್ದರಿಂದ ದೇವಸ್ಥಾನಗಳ ಭದ್ರತೆ ದೃಷ್ಟಿಯಿಂದ ಕಡ್ಡಾಯವಾಗಿ ಪಾಲಿಸಲೇ ಬೇಕಾದ ಹಲವು ಸೂಚನೆಗಳನ್ನ ನೀಡಿದರು.ದೇವಾಲಯಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಟಿವಿ ಅಳವಡಿಸಬೇಕು. ಅವುಗಳನ್ನು ಸುರಕ್ಷಿತ ಸ್ಥಳದಲ್ಲಿ ಇಡಬೇಕು. ದೇವಾಲಯದ ಬೆಲೆ ಬಾಳುವ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಬ್ಯಾಂಕ್‌ ಲಾಕರ್‌ನಲ್ಲಿ ಇಡಲು ಕ್ರಮ ಕೈಗೊಳ್ಳಬೇಕು. ದೇವಾಲಯಕ್ಕೆ ಭದ್ರವಾದ ಬಾಗಿಲು ಕಿಟಕಿಗಳನ್ನು ಅಳವಡಿಸಿ ಕಬ್ಬಿಣದ ಗ್ರಿಲ್‌ ಗೇಟ್‌ಗಳನ್ನು ಅಳವಡಿಸಬೇಕು.

ದೇವಾಲಯದ ಭದ್ರತೆಗಾಗಿ ಕಾವಲುಗಾರರನ್ನ ನೇಮಿಸಿಕೊಳ್ಳಬೇಕು ಇಲ್ಲವಾದಲ್ಲಿ ಗ್ರಾಮದಯುವಕರ ತಂಡ ರಚಿಸಿ ಸರದಿ ಪ್ರಕಾರ ರಾತ್ರಿ ವೇಳೆ ದೇವಸ್ಥಾನದ ಭದ್ರತೆ ನೋಡಿಕೊಳ್ಳುವಂತೆ ಮಾಡುವುದು. ದೇವಾಲಯದ ಹುಂಡಿಗಳಲ್ಲಿ ಹೆಚ್ಚು ಹಣ ಶೇಖರಣೆ ಆಗದಂತೆನೋಡಿಕೊಳ್ಳಬೇಕು. ಕಾವಲಿಗೆ ನೇಮಕ ಆದವರು ರಾತ್ರಿ ವೇಳೆ ಟಾರ್ಚ್‌ ಮೂಲಕ ಸುತ್ತಲಿನ ದೇವಾಲಯದ ಸುತ್ತಲಿನ ಪ್ರದೇಶ ಪರಶೀಲಿಸಬೇಕು. ದೇವಸ್ಥಾನದಲ್ಲಿ ಸೈರನ್‌ ವ್ಯವಸ್ಥೆ ಅಳವಡಿಸಬೇಕು. ದೇವಾಲಯದ ಬಳಿ ಯಾರೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ವಾಹನಗಳು ಕಂಡು ಬಂದಲ್ಲಿ ಕೂಡಲೆ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು. ಮತ್ತು ದೇವಾಲಯದ ಭದ್ರತೆ ದೃಷ್ಟಿಯಿಂದ ಪೊಲೀಸರು ಕಾಲಾಕಾಲಕ್ಕೆ ನೀಡುವ ಸಲಹೆ ಸೂಚನೆಗಳನ್ನ ಪಾಲಿಸಬೇಕು ಎಂದರು.

ಎಎಸ್‌ಪಿ ನಿಖೀಲ್‌ ಬುಳ್ಳಾವರ ಮಾತನಾಡಿ, ಹೊನ್ನಾವರ ಕಾಸರಕೊಡಿನಲ್ಲಿ ದೇವಾಲಯ ಕಳುವಾಗಿದೆ. ಅಲ್ಲದೆ ಕರಾವಳಿ ಭಾಗದ ಹೈವೇ ಹತ್ತಿರದಲ್ಲಿ ಹೆಚ್ಚಿನ ದೇವಾಲಯಗಳಲ್ಲಿ ಕಳ್ಳತನವಾಗಿದೆ. ಹೀಗಾಗಿ ದೇವಾಲಯಕ್ಕೆ ಸಂಬಂಧಪಟ್ಟವರು ಪೊಲೀಸ್‌ ಇಲಾಖೆ ಸೂಚನೆಗಳನ್ನ ಪಾಲಿಸಿ ಸಹಕರಿಸಬೇಕೆಂದು ಆಗ್ರಹಿಸಿದರು.

ಭಟ್ಕಳ ಎಎಸ್‌ಪಿ ನಿಖೀಲ್‌, ಹೊನ್ನಾವರ ಸಿಪಿಐ ಶ್ರೀಧರ, ಪಿಎಸ್‌ಐ ಶಶಿಕುಮಾರ, ಮಂಕಿ ಪಿಎಸ್‌ಐ ಪಿ.ಬಿ. ಕೊಣ್ಣೂರ, ಪಿಎಸ್‌ಐ ಸಾವಿತ್ರಿ ನಾಯಕ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.