ಮಂದಗತಿ ಕಾಮಗಾರಿಗೆ ಜಿಲ್ಲಾಧಿಕಾರಿ ಅಸಮಾಧಾನ

Team Udayavani, Nov 6, 2020, 7:31 PM IST

bidara-tdy-1

ಬೀದರ: ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾ ಧಿಕಾರಿ ರಾಮಚಂದ್ರನ್‌ ಆರ್‌. ಅಧ್ಯಕ್ಷತೆಯಲ್ಲಿ ನಡೆದವಿಡಿಯೋ ಸಂವಾದದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳು ಮತ್ತು ವಸತಿ ಯೋಜನೆಗಳ ಪ್ರಗತಿ ಕುರಿತು ಚರ್ಚಿಸಲಾಯಿತು.

ಈ ವೇಳೆ ಮಾತನಾಡಿದ ಡಿಸಿ, ನಗರೋತ್ಥಾನ ಹಂತ-3, ನಗರೋತ್ಥಾನ ವಿಶೇಷ ಮತ್ತು ನಗರೋತ್ಥಾನ ಪ್ರೋತ್ಸಾಹ ಧನದ ಕಾಮಗಾರಿಗಳ ಪ್ರಗತಿಗೆ ಅಧಿಕಾರಿಗಳು ಹೆಚ್ಚಿನ ಒತ್ತು ಕೊಡಬೇಕು. ಬೀದರ ನಗರದಲ್ಲಿ ಈ ಕಾಮಗಾರಿಗಳು ಮಂದಗತಿಯಲ್ಲಿ ನಡೆಯುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ತ್ವರಿತಗತಿಯಲ್ಲಿ ಮತ್ತು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಒತ್ತು ಕೊಡಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಅಂಬೇಡ್ಕರ್‌ ವಸತಿ ಯೋಜನೆ, ವಾಜಪೇಯಿ ವಸತಿ ಯೋಜನೆ, ಪ್ರಧಾನ ಮಂತ್ರಿ ಆವಾಸ್‌ ಯೋಜನೆಗಳು ಜಿಲ್ಲೆಯಲ್ಲಿ ಸರಿಯಾಗಿ ಅನುಷ್ಠಾನವಾಗಬೇಕು. ವಸತಿ ಯೋಜನೆಗಳ ಅನುಷ್ಠಾನ ಕಾರ್ಯ ಬಾಕಿ ಉಳಿಯದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿ ಕಾರಿಗಳು ಪೌರಾಯುಕ್ತರುಮತ್ತು ಮುಖ್ಯಾ ಧಿಕಾರಿಗಳಿಗೆ ತಿಳಿಸಿದರು. ಸಂವಾದದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ  ನಿರ್ದೇಶಕ ಶರಣಬಸಪ್ಪ ಕೋಟಪ್ಪಗೋಳ, ಬೀದರ,ಬಸವಕಲ್ಯಾಣ ನಗರಸಭೆ ಪೌರಾಯುಕ್ತರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಇದ್ದರು.

 ವರದಿ ಜಾರಿಗೆ ತಮಟೆ ಚಳವಳಿ : 

ಭಾಲ್ಕಿ: ಮಳಚಾಪುರ ಗ್ರಾಪಂ ಆವರಣದಲ್ಲಿ ನ್ಯಾ| ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಪದಾಧಿಕಾರಿಗಳು ತಮಟೆ ಚಳವಳಿ ನಡೆಸಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಸಂಘದ ಪದಾಧಿಕಾರಿಗಳು, ಸದಾಶಿವ ವರದಿಯಲ್ಲಿ ಪರಿಶಿಷ್ಟ ಜಾತಿಯ ಒಳಮೀಸಲಾತಿ, ಎ.ಬಿ.ಸಿ.ಡಿ ವರ್ಗೀಕರಣ ಅನುಷ್ಠಾನಗೊಳಿಸುವಂತೆ ಕಳೆದ 25 ವರ್ಷಗಳಿಂದ ಹೋರಾಡುತ್ತ ಬಂದಿದ್ದೇವೆ. ಆದರೆ ಯಾವ ಸರ್ಕಾರವೂ ಮೀಸಲಾತಿ ವರದಿ ಅನುಷ್ಠಾನ ಗೊಳಿಸಿಲ್ಲ. ಸದಾಶಿವ ಆಯೋಗದ ವರದಿ ತಕ್ಷಣ ಜಾರಿಗೆ ಬರಬೇಕು. ಇಲ್ಲದಿದ್ದರೆ ಬರುವ ದಿನಗಳಲ್ಲಿ ಮಾದಿಗ ಸಮಾಜದಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಈ ವೇಳೆ ಮಾದಿಗ ಮೀಸಲಾತಿ ಹೋರಾಟ ಸಮಿತಿ ತಾಲೂಕು ಅಧ್ಯಕ್ಷ ಶಿವಾನಂದ ಕರಡ್ಯಾಳ, ರಾಜು ಕಡ್ಯಾಳ, ಯಲಿಶ ಜಾಂತೆ, ಸಲಿವಾನ ಕೆಳಕೆರೆ, ಸಂಜುಕುಮಾರ ಸೈನೂರೆ, ಪ್ರಭು ಬೀರಿ(ಬಿ), ಭಾಸಕ್ರ ತಳವಾಡ, ನಾಗೇಂದ್ರ ಲಂಜವಾಡ, ನಿವುರ್ತಿ ಭಾತಂಬ್ರ, ಬಾಲಾಜಿ ಬಿರಿ (ಬಿ), ರಾಜಕುಮಾರ ಧನ್ನೂರ, ಪ್ರಭು ಧನ್ನೂರ ಇತರರು ಇದ್ದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.