ಫ್ಯಾಶನ್‌ ಗೋಲ್ಡ್‌ ಜುವೆಲರಿ ವಂಚನೆ ಪ್ರಕರಣ! ಮಂಜೇಶ್ವರ ಶಾಸಕ ಖಮರುದ್ದೀನ್‌ ಬಂಧನ

Team Udayavani, Nov 8, 2020, 7:10 AM IST

ಫ್ಯಾಶನ್‌ ಗೋಲ್ಡ್‌ ಜುವೆಲರಿ ವಂಚನೆ ಪ್ರಕರಣ! ಮಂಜೇಶ್ವರ ಶಾಸಕ ಖಮರುದ್ದೀನ್‌ ಬಂಧನ

ಕಾಸರಗೋಡು: ಜಿಲ್ಲೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದ ಫ್ಯಾಶನ್‌ ಗೋಲ್ಡ್‌ ಜ್ಯುವೆಲ್ಲರಿ ಠೇವಣಿ ವಂಚನೆಗೆ ಸಂಬಂಧಿಸಿ ಮಂಜೇಶ್ವರ ಶಾಸಕ, ಸಂಸ್ಥೆಯ ಚೇರ್ಮನ್‌ ಹಾಗೂ ಮುಸ್ಲಿಂ ಲೀಗ್‌ ನೇತಾರ ಎಂ.ಸಿ. ಖಮರುದ್ದೀನ್‌ ಅವರನ್ನು ಕ್ರೈಂ ಬ್ರಾಂಚ್‌ನ ಪ್ರತ್ಯೇಕ ತನಿಖಾ ತಂಡವು ಶನಿವಾರ ಸಂಜೆ ಜಾಮೀನು ರಹಿತ ಕೇಸು ದಾಖಲಿಸಿ ಬಂಧಿಸಿದೆ.

ಚಿನ್ನಾಭರಣ ಮತ್ತು ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಖಮರುದ್ದೀನ್‌ ವಿರುದ್ಧ 115ರಷ್ಟು ಕೇಸುಗಳು ದಾಖಲಾಗಿವೆ ಎಂದು ಎಎಸ್‌ಪಿ ವಿವೇಕ್‌ ಕುಮಾರ್‌ ತಿಳಿಸಿದ್ದಾರೆ. ಕಾಸರಗೋಡು ಜಿಲ್ಲಾ ಪೊಲೀಸ್‌ ತರಬೇತಿ ಕೇಂದ್ರದಲ್ಲಿ ಖಮರುದ್ದೀನ್‌ ಅವರನ್ನು ಬಂಧಿಸಲಾಗಿದೆ.

15 ಕೋಟಿ ರೂ. ವಂಚನೆ
15 ಕೋಟಿ ರೂ. ಗಳಷ್ಟು ವಂಚನೆ ನಡೆಸಿದ ಬಗ್ಗೆ ಮಾಹಿತಿ ಲಭಿಸಿದೆ ಎಂದು ತನಿಖಾ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದರು. ತನಿಖಾ ತಂಡವು ಶನಿವಾರ ಬೆಳಗ್ಗೆ ಎಂ.ಸಿ.ಖಮರುದ್ದೀನ್‌ ಅವರನ್ನು ಜಿಲ್ಲಾ ಪೊಲೀಸ್‌ ತರಬೇತಿ ಕೇಂದ್ರಕ್ಕೆ ಕರೆಸಿ ಅಲ್ಲಿ 5 ಗಂಟೆಗಳ ಕಾಲ ಪ್ರತ್ಯೇಕ ವಿಚಾರಣೆ ನಡೆಸಿತು. ಈ ಸಂದರ್ಭ ಸಮಗ್ರ ಮಾಹಿತಿ ಸಂಗ್ರಹಿಸಿದ ಅನಂತರ ಸಂಜೆ 4 ಗಂಟೆಯ ವೇಳೆಗೆ ಶಾಸಕರನ್ನು ಬಂಧಿಸಲಾಗಿದೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು, ಚಂದೇರ, ಪಯ್ಯನ್ನೂರು ಮುಂತಾದ ಪೊಲೀಸ್‌ ಠಾಣೆಗಳಲ್ಲಿ ಶಾಸಕರ ವಿರುದ್ಧ 115ರಷ್ಟು ಕೇಸುಗಳು ದಾಖಲಾಗಿವೆ. ಚಂದೇರ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿದ ನಾಲ್ಕು ಕೇಸುಗಳಲ್ಲಿ ಬಂಧಿಸಲಾಗಿದೆ. 15 ಕೋಟಿ ರೂ. ಠೇವಣಿ ಸಂಗ್ರಹ ವಂಚನೆ ನಡೆದಿದೆ ಎಂದು ಕಂಡುಕೊಳ್ಳಳಾಗಿದೆ.

ಸುಮಾರು 800ರಷ್ಟು ಠೇವಣಿದಾರರಿಂದ ಭಾರೀ ಮೊತ್ತ ಪಡೆದು ಬಳಿಕ ಅದನ್ನು ಹಿಂದಿರುಗಿಸದೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಖಮರುದ್ದೀನ್‌ ಮತ್ತು ಜುವೆಲರಿಯ ಮ್ಯಾನೇಜಿಂಗ್‌ ಡೈರೆಕ್ಟರ್‌ ಮತ್ತು ಮುಸ್ಲಿಂ ಲೀಗ್‌ನ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪೂಕೋಯ ತಂಙಳ್‌ಅವರ ಮನೆಗೆ ಇತ್ತೀಚೆಗೆ ತನಿಖಾ ತಂಡವು ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿತ್ತು. .

ಶಾಸಕ ಖಮರುದ್ದೀನ್‌ರ ಬಂಧನದಿಂದ ಮುಸ್ಲಿಂ ಲೀಗ್‌ಗೆ ತೀವ್ರ ಮುಖಭಂಗವಾಗಿದೆ. ಮಾತ್ರವಲ್ಲದೆ ಐಕ್ಯರಂಗದ ಘಟಕ ಪಕ್ಷವಾದ ಕಾಂಗ್ರೆಸ್‌ನ್ನು ಪೇಚಿಗೆ ಸಿಲುಕಿಸಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಚುನಾ ವಣೆಯು ಸಮೀಪಿಸುತ್ತಿದ್ದಂತೆ ಇದು ಐಕ್ಯರಂಗವನ್ನು ತೀವ್ರ ಸಂದಿಗ್ಧ ಸ್ಥಿತಿಗೆ ಸಿಲುಕಿಸಿದೆ.

ಬಿಜೆಪಿ ಹೋರಾಟದಿಂದ ಬಂಧನ:
ಬಿಜೆಪಿ ನಡೆಸಿದ ಹೋರಾಟ ದಿಂದ ಖಮರುದ್ದೀನ್‌ ಬಂಧನ ವಾಗಿದೆ. ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.