ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು?: ಅಶೋಕ್‌

Team Udayavani, Nov 10, 2020, 11:17 AM IST

ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು?: ಅಶೋಕ್‌

ಬೆಂಗಳೂರು: ಯಡಿಯೂರಪ್ಪ ಬದಲಾವಣೆ ನಿಶ್ಚಿತ ಎಂದು ಹೇಳಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷಿಯಾದರೋ ಗೊತ್ತಿಲ್ಲ ಎಂದು ಸಚಿವ ಆರ್‌.ಅಶೋಕ್‌ ವ್ಯಂಗ್ಯವಾಡಿದರು.

ಸುದ್ದಿಗಾರರ ಜತೆ ಮಾತನಾಡಿ, ಸಿದ್ದರಾಮಯ್ಯ ಅವರಿಗೆ ದೆಹಲಿಯಿಂದ ಹೇಗೆ ಸಂದೇಶ ಬಂತು? ಅಷ್ಟಕ್ಕೂ ಅವರಿಗೆ ಗುಪ್ತಚರ ವ್ಯವಸ್ಥೆ ಎಲ್ಲಿದೆ. ಅವರು ಇನ್ನೂ ಭ್ರಮೆಯಲ್ಲೇ ಇದ್ದಾರೆ. ಅಧಿಕಾರ ಕಳೆದುಕೊಂಡು ಹೀಗೆ ಆಗಿದ್ದಾರೆ ಎಂದು ಕುಟುಕಿದರು.

ಉಪಚುನಾವಣಾ ಫ‌ಲಿತಾಂಶದ ಬಳಿಕ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. ಅವರು ಇನ್ನಷ್ಟು ಗಟ್ಟಿಯಾಗಿ ಇರಲಿದ್ದಾರೆ. ಖಾಲಿ ಇರದೆ ಇರುವ ಸ್ಥಾನಕ್ಕೆ ಅರ್ಜಿ ಹಾಕ ಬೇಡಿ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.

ರಾಜರಾಜೇಶ್ವರಿನಗರ ಹಾಗೂ ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಲ್ಲ ಪಕ್ಷಗಳ ಭವಿಷ್ಯ ಮಂಗಳವಾರ ನಿರ್ಧಾರವಾಗಲಿದೆ. ನನಗೆ ರಾಜ ರಾಜೇಶ್ವರಿನಗರ ಕ್ಷೇತ್ರದ ಉಸ್ತುವಾರಿ ನೀಡಿದ್ದರು. ಸುಮಾರು 25 ವರ್ಷ ಅಲ್ಲಿ ಕಾರ್ಯಕರ್ತ, ಶಾಸಕ, ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ಉಪಚುನಾವಣೆ ಸಂದರ್ಭದಲ್ಲಿ ಅಲ್ಲೇ ಇದ್ದು, ಕಾರ್ಯ ನಿರ್ವಹಿಸಿದ್ದೇನೆ. ಕಾಂಗ್ರೆಸ್‌ನ ಡಿ.ಕೆ. ಶಿವಕುಮಾರ್‌ ಅವರ ಯಾ ವಆಟವೂ ನಡೆಯುವುದಿಲ್ಲ. 35,000 ಅಂತರದಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡಿ.ಕೆ. ಶಿವಕುಮಾರ್‌ ಸೋಲಿಗೆ ಮೊದಲೇ ಶಸ್ತ್ರತ್ಯಾಗ ಮಾಡಿ ಹೋಗಿದ್ದಾರೆ. ನನ್ನ ಹೇಳಿಕೆಗಳಿಗೆ ಉತ್ತರವನ್ನೇ ನೀಡಿಲ್ಲ. ಅವರು ಏನೂ ಕೆಲಸ ಮಾಡಿಲ್ಲ. ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಕ್ಷೇತ್ರದಲ್ಲೆಲ್ಲಾ ಓಡಾಡಿದ್ದರು. ನಾನು ಸಹ ಅಲ್ಲಿ ಅಭ್ಯರ್ಥಿಎಂದು ಹೇಳಿಯೇ ಪ್ರಚಾರ ಮಾಡಿದ್ದೇನೆ ಎಂದು ಹೇಳಿದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.