ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಉಪಯುಕ್ತ


Team Udayavani, Nov 10, 2020, 6:32 PM IST

ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಉಪಯುಕ್ತ

ಕಡೂರು: ಕೋವಿಡ್ ಅವಧಿಯಲ್ಲಿ ನಡೆಯುತ್ತಿರುವ ಅಂತರ್ಜಾಲ ಶಿಕ್ಷಣಕ್ಕೊಂದು ಮಾದರಿಯಾಗಿ ಜ್ಞಾನತಾಣ ಯೋಜನೆಯಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ| ವೀರೆಂದ್ರ ಹೆಗ್ಗಡೆ ಅವರು ರಾಜ್ಯದ ಗ್ರಾಮೀಣ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ನೀಡುತ್ತಿರುವ ಟ್ಯಾಬ್‌ ಮತ್ತು ಲ್ಯಾಪ್‌ಟಾಪ್‌ ಅತ್ಯಂತ ಉಪಯುಕ್ತವಾಗಿದೆ ಎಂದು ಶಾಸಕ ಬೆಳ್ಳಿಪ್ರಕಾಶ್‌ ತಿಳಿಸಿದರು.

ಪಟ್ಟಣದ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಟ್ಯಾಬ್‌ ಮತ್ತು ಲ್ಯಾಪ್‌ಟಾಪ್‌ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ಟ್ಯಾಬ್‌ ಮತ್ತು ಲ್ಯಾಪ್‌ಟಾಪ್‌ ಮಕ್ಕಳ ಆನ್‌ ಲೈನ್‌ ಕಲಿಕೆಗೆ ಉಪಯುಕ್ತವಾಗಲಿದೆ. ಶ್ರೀ ಕ್ಷೇತ್ರವು ಸುಮಾರು 20 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ರಿಯಾಯಿತಿ ದರದಲ್ಲಿ ಉಪಕರಣಗಳನ್ನು ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಶ್ರೀ ಕ್ಷೇತ್ರವು ಇಂತಹ ಹತ್ತು ಹಲವಾರು ಸಾರ್ವಜನಿಕ ಯೋಜನೆಗಳನ್ನು ಮಾಡುತ್ತಿದ್ದು. ದೇಶದ ನಂ. 1 ಎನ್‌ಜಿಒ ಸಂಸ್ಥೆಯಾಗಿದೆ ಎಂದರೆ ತಪ್ಪಾಗಲಾರದು. ಕ್ಷೇತ್ರದಲ್ಲಿ ಶುದ್ಧಗಂಗಾ ಸ್ಥಾಪನೆಯಿಂದ ಆರಂಭಿಸಿಕೃಷಿ, ಹೈನುಗಾರಿಕೆ ಸೇರಿದಂತೆ ಅನೇಕ ಕೃಷಿ ಚಟುವಟಿಕೆಗೆ ಸಾಲ ನೀಡಿ ಅಷ್ಟೇ ಪ್ರಾಮಾಣಿಕವಾಗಿ ಸಾಲ ವಸೂಲಾತಿ ನಡೆಸಿ ಮಹಿಳೆಯರಲ್ಲಿ ಉತ್ತಮ ಹಣಕಾಸಿನ ನೆರವಿನಿಂದ ಕುಟುಂಬ ನಿರ್ವಹಣೆಗೆ ಸಹಕಾರವಾಗಿದ್ದಾರೆ.ಈ ಬಾರಿ 18 ಕೋಟಿ ಉಳಿತಾಯ ಮಾಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಕಡೂರು ಪುರಸಭೆಯ ಅಧ್ಯಕ್ಷ ಭಂಡಾರಿ ಶ್ರೀನಿವಾಸ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀ ಕ್ಷೇತ್ರವು ಸಾರ್ವಜನಿಕರಿಗೆ ಸರ್ಕಾರ ನೀಡುವಂತೆಅನೇಕ ಮೂಲ ಸೌಕರ್ಯಗಳನ್ನು ನೀಡಿದೆ. ಶ್ರೀಕ್ಷೇತ್ರವು ತನ್ನದೇ ಇತಿ ಮಿತಿಯಲ್ಲಿ ಆಯ-ವ್ಯಯ ತಯಾರಿಸಿಕೊಂಡು ಸಾಲ ಸೌಲಭ್ಯಗಳನ್ನು ನೀಡಿ ಬಂದಂತಹ ಲಾಭಾಂಶದಲ್ಲಿ ಸಾರ್ವಜನಿಕ ಸೇವೆಗೆ ಮುಂದಾಗಿರುವುದು ಸಂಕಷ್ಟದಲ್ಲಿರುವವರಿಗೆ ಸಹಾಯವಾಗಿದೆ. ಇದೀಗ ಗ್ರಾಮೀಣ ಮಕ್ಕಳಿಗೆ ಅಂತರ್ಜಾಲ ಶಿಕ್ಷಣಕ್ಕೆ ಟ್ಯಾಬ್‌ ನೀಡುತ್ತಿರುವುದು ಶೈಕ್ಷಣಿಕವಾಗಿ ಮಕ್ಕಳಿಗೆ ಉಪಯೋಗವಾಗಲಿದೆ ಎಂದರು.

ಶ್ರೀಕ್ಷೇತ್ರದ ತಾಲೂಕು ಯೋಜನಾಧಿಕಾರಿ ಕರುಣಾಕರ್‌ ಆಚಾರ್‌ ಪ್ರಾಸ್ತಾವಿಕವಾಗಿ

ಮಾತನಾಡಿ, ಶ್ರೀ ಕ್ಷೇತ್ರದ ಯೋಜನಾ ಕಚೇರಿಯು ಆರಂಭವಾಗಿ 13 ವರ್ಷ ಕಳೆದಿದೆ. ಇದುವರೆಗೂ ಉತ್ತಮ ಯೋಜನೆಗಳನ್ನು ಹಾಕಿಕೊಂಡು 86 ಕೋಟಿ ಸಾಲ ವ್ಯವಹಾರ ನಡೆಸಿದೆ. ಗ್ರಾಮೀಣ ಕನ್ನಡ ಮಾಧ್ಯಮ ಮಕ್ಕಳ ಕಲಿಕೆಗೆ ಪೂರಕವಾಗಿ ಟ್ಯಾಬ್‌ ಮತ್ತು ಲ್ಯಾಪ್‌ಟಾಪ್‌ ವಿತರಣೆ ಕಾರ್ಯವು ನಡೆಯುತ್ತಿದ್ದು ಮೊದಲ ಹಂತವಾಗಿ 130 ಮಕ್ಕಳಿಗೆ ನೀಡಲಾಗುವುದು. ಸಂಘದ ಸದಸ್ಯರ ಮಕ್ಕಳಿಗೆ ಮಾತ್ರ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದರು.

ಕ್ಷೇತ್ರ ಶಿಕ್ಷಾಣಾಧಿಕಾರಿ ಕಚೇರಿಯ ದಿನೇಶ್‌ ಮಾತನಾಡಿ, ಶ್ರೀ ಕ್ಷೇತ್ರವು ನೀಡುತ್ತಿರುವ ಟ್ಯಾಬ್‌ ಮತ್ತು ಲ್ಯಾಪ್‌ಟಾಪ್‌ ವಿತರಣೆಗೆ ಶಿಕ್ಷಣ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.ಜಿಪಂ ಸದಸ್ಯ ಕೆ.ಆರ್‌. ಮಹೇಶ್‌ಒಡೆಯರ್‌ ಮತ್ತು ಪಟ್ಟಣದ ಬಾಹುಬಲಿದಂಡವತಿ ಇದ್ದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.