ಸೇನೆಯಲ್ಲಿದ್ದ ಮಗನನ್ನು ಗುಂಡಿಕ್ಕಿ ಕೊಂದಿದ್ದ ಪಾಪಿ ತಂದೆಗೆ ಜೀವಾವಧಿ ಶಿಕ್ಷೆ

Team Udayavani, Nov 11, 2020, 8:25 PM IST

bg-tdy-1

ಬೆಳಗಾವಿ: ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ರಜೆಗೆಂದು ಮನೆಗೆ ಬಂದಿದ್ದ ಮಗನನ್ನೇ ಗುಂಡಿಕ್ಕಿ ಕೊಂದ ಪಾಪಿ ತಂದೆಗೆ ಬೆಳಗಾವಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಬೈಲಹೊಂಗಲ ತಾಲೂಕಿನ ನಯಾನಗರದ ಆರೋಪಿ ವಿಠ್ಠಲ ಇಂಡಿ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಧೀಶ ಬಸವರಾಜ ತೀರ್ಪು ನೀಡಿದರು. ಮಗ ಈರಣ್ಣ ವಿಠ್ಠಲ ಇಂಡಿ ಹತ್ಯೆಗೀಡಾಗಿದ್ದನು. ಈ ಕುರಿತು ಮೃತನ ಸಹೋದರಿ ಪ್ರೀತಿ ನೀಡಿದ ದೂರಿನನ್ವಯ ನ್ಯಾಯಾಲಯ ವಿಚಾರಣೆ ನಡೆಸಿ ತೀರ್ಪು ನೀಡಿದೆ.

ಏನಿದು ಘಟನೆ?: ತಂದೆ ವಿಠ್ಠಲ ಇಂಡಿಗೆ ದ್ವಿಚಕ್ರ ವಾಹನ ಖರೀದಿಸಲು ಹಣದ ಅವಶ್ಯಕತೆ ಇತ್ತು. ಮಗ ಈರಣ್ಣ ಹಣ ನೀಡಲು ನಿರಾಕರಿಸಿದ್ದನು ಎಂಬ ಕಾರಣಕ್ಕೆ ಇಬ್ಬರ ಮಧ್ಯೆ ಜಗಳವಾಗಿತ್ತು. 2016 ಡಿಸೆಂಬರ್ 12ರಂದು ಜಗಳ ವಿಕೋಪಕ್ಕೆ ತಿರುಗಿ ಮಗನ ಮೇಲೆ ವಿಠ್ಠಲ ತನ್ನ ಬಳಿ ಇದ್ದ ರಿವಾಲ್ವರ್‌ದಿಂದ ಗುಂಡಿಕ್ಕಿ ಕೊಲೆ ಮಾಡಿದ್ದನು. ಬಿಡಿಸಲು ಬಂದಿದ್ದ ಪತ್ನಿ ಹಾಗೂ ಪುತ್ರಿ ಮೇಲೆಯೂ ವಿಠ್ಠಲ ಗುಂಡಿನ ದಾಳಿ ನಡೆಸಿದ್ದನು. ಪತ್ನಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಳು. ನಂತರ ಗುಣಮುಖಳಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಈ ಕುರಿತು ಬೈಲಹೊಂಗಲ ಠಾಣೆಯಲ್ಲಿ ಮೃತನ ಸಹೋದರಿ ಪ್ರೀತಿ ವಿಠ್ಠಲ ಇಂಡಿ ದೂರು ದಾಖಲಿಸಿದ್ದರು. ತನಿಖಾಧಿಕಾರಿ ಸಂಗನಗೌಡ ಅವರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 70 ದಾಖಲಾತಿ, 25 ಮುದ್ದೆಮಾಲುಗಳು ಹಾಗೂ 17 ಸಾಕ್ಷಿಗಳ ಆಧಾರದ ಮೇಲೆ ನ್ಯಾಯಾಲಯ ತೀರ್ಪು ನೀಡಿದೆ. ಅಭಿಯೋಜಕ ವಿದ್ಯಾಸಾಗರ ದಶರಥ ದರಬಾರೆ ಸರ್ಕಾರದ ಪರ ವಕಾಲತ್ತು ವಹಿಸಿದ್ದರು.

ಆರೋಪಿಯ ಹಿನ್ನೆಲೆ: ಆರೋಪಿ ವಿಠ್ಠಲ ಸೇನೆಯಲ್ಲಿ ಕೆಲಸ ನಿರ್ವಹಿಸಿ ನಿವೃತ್ತಿಯಾಗಿದ್ದನು. ನಂತರ ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದನು. ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಾಣಿ ಗ್ರಾಮದ ವಿಠ್ಠಲ ಇಬ್ಬರು ಪತ್ನಿಯರನ್ನು ಹೊಂದಿದ್ದಾನೆ. ಮೊದಲನೇ ಪತ್ನಿ ಮಲಕವ್ವ ಹಿಂಗಾಣಿ ಗ್ರಾಮದಲ್ಲಿ ಹಾಗೂ ಎರಡನೇ ಪತ್ನಿ ಅನುಸೂಯಾ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದಲ್ಲಿ ನೆಲೆಸಿದ್ದರು. ಬೈಲಹೊಂಗಲದಲ್ಲಿ ಕೆಲಸ ಮಾಡುವಾಗ ಅನುಸೂಯ ಪರಿಚಯವಾಗಿ ನಂತರ ಇದು ಪ್ರೀತಿಗೆ ತಿರುಗಿ ಇಬ್ಬರೂ ಮದುವೆಯಾಗಿದ್ದರು. ಈ ದಂಪತಿಯ ಮೂವರ ಮಕ್ಕಳ ಪೈಕಿ ಹಿರಿಮಗ ಈರಣ್ಣ ಸೇನೆಗೆ ಸೇರಿಕೊಂಡಿದ್ದರು. ಮೊದಲನೇ ಹೆಂಡತಿಗೂ ಓರ್ವ ಪುತ್ರನಿದ್ದಾನೆ.

ಟಾಪ್ ನ್ಯೂಸ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.