ಕೋವಿಡ್ ವಾರಿಯರ್ಸ್ ಗಿಲ್ಲ ಗೌರವಧನ

ಲ್ಯಾಬ್‌ ಟೆಕ್ನಿಷಿಯನ್‌, ಕಂಪ್ಯೂಟರ್‌ ಆಪರೇಟರ್‌ಗಳಿಗೆ 2 ತಿಂಗಳಿನಿಂದ ಸಂಕಷ್ಟ

Team Udayavani, Nov 12, 2020, 4:47 PM IST

dg-tdy-2

ಸಾಮದರ್ಭಿಕ ಚಿತ್ರ

ಹರಿಹರ: ಕೋವಿಡ್‌-19 ನಿಮಿತ್ತಆರೋಗ್ಯ ಇಲಾಖೆ ಗುತ್ತಿಗೆ ಆಧಾರಿತವಾಗಿನೇಮಿಸಿಕೊಂಡ ಲ್ಯಾಬ್‌ ಟೆಕ್ನಿಷಿಯನ್‌ ಮತ್ತು ಕಂಪ್ಯೂಟರ್‌ ಆಪರೇಟರ್‌ಗಳು ಕಳೆದೆರಡು ತಿಂಗಳಿನಿಂದ ಸಂಬಳವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ.

ಸಾರ್ವತ್ರಿಕ ಕೋವಿಡ್‌ ತಪಾಸಣೆಕಾರ್ಯಕ್ಕೆ ಸರ್ಕಾರ ರಾಜ್ಯಾದ್ಯಂತ ಸಾವಿರಕ್ಕೂ ಹೆಚ್ಚು ಲ್ಯಾಬ್‌ ಟೆಕ್ನಿಷಿಯನ್‌ಮತ್ತು ಕಂಪ್ಯೂಟರ್‌ ಆಪರೇಟರ್‌ಗಳನ್ನುಮಾಸಿಕ 10 ಸಾವಿರ ರೂ. ಗೌರವಧನಹಾಗೂ ಪ್ರತಿ ತಪಾಸಣೆಗೆ 15 ರೂ.ಇನ್ಸೆಂಟಿವ್‌ ನೀಡುವುದಾಗಿ ಹೇಳಿ ಗುತ್ತಿಗೆಆಧಾರದಲ್ಲಿ ನೇಮಿಸಿಕೊಳ್ಳಲಾಗಿದೆ. ಇದು ಅಲ್ಪಾವಧಿಯ ನೇಮಕವಾದರೂ ಸೂಕ್ತ ಕೆಲಸವಿಲ್ಲದವರು, ಲಾಕ್‌ಡೌನ್‌ ನಿಂದ ನಿರುದ್ಯೋಗಿಗಳಾಗಿದ್ದವರು ತಾತ್ಕಾಲಿಕವಾದರೂ ಬದುಕಿಗೆ ಆಧಾರವಾಯ್ತಲ್ಲ ಎಂದು ಕೆಲಸಕ್ಕೆಸೇರಿಕೊಂಡಿದ್ದರು.

ನಗರ ಮಾತ್ರವಲ್ಲದೆ ಹಳ್ಳಿ ಹಳ್ಳಿಗೂ ತೆರಳಿ ಕೋವಿಡ್‌ ಪರೀಕ್ಷೆಗೆ ಮೂಗುಮತ್ತು ಗಂಟಲು ದ್ರವ ಸಂಗ್ರಹ, ಕೋವಿಡ್‌ ಸಂಬಂಧಿ ಅಂಕಿ-ಅಂಶ ಕಲೆ ಹಾಕುವ ಕಾರ್ಯವನ್ನು ಸಮರೋಪಾದಿಯಲ್ಲಿ ಮಾಡುತ್ತಿದ್ದಾರೆ. ಕೋವಿಡ್‌ಎಂದರೆ ಮೂಗು ಮುರಿಯುವ ಜನರಿಂದ ಎಡರು-ತೊಡರುಗಳನ್ನು ಎದುರಿಸಿ,ಜಾಗೃತಿ ಮೂಡಿಸಿ, ಬಿಸಿಲು, ಗಾಳಿ, ಮಳೆ ಲೆಕ್ಕಿಸದೆ ಬಯಲಲ್ಲಿ ಕುಳಿತು ತಪಾಸಣೆ ಮಾಡುತ್ತಿದ್ದಾರೆ. ನೈಪುಣ್ಯತೆ ಹೊಂದಿದ್ದರೂ ಇವರಿಗೆ ನೀಡುತ್ತಿರುವುದು ಅಲ್ಪ ಸಂಬಳ. ಕಳೆದ ಸೆಪ್ಟಂಬರ್‌, ಅಕ್ಟೋಬರ್‌ ತಿಂಗಳಲ್ಲಿ ಅದನ್ನೂ ನೀಡದೆ ಸರ್ಕಾರ, ಗುತ್ತಿಗೆ ಆಧಾರಿತ ನೌಕರರ ಕುಟುಂಬಗಳನ್ನುಸಂಕಷ್ಟಕ್ಕೆ ದೂಡಿದೆ. ಹಲವು ಸಿಬ್ಬಂದಿ ತಮ್ಮ ಸ್ವಂತ ಖರ್ಚಿನಲ್ಲಿ 20-30 ಕಿಮೀ ದೂರ ಪ್ರಯಾಣಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬರುವ ಅರ್ಧ ಸಂಬಳ ಪ್ರಯಾಣ ವೆಚ್ಚ,ಚಹಾ, ತಿಂಡಿಗೆ ಖರ್ಚಾಗುತ್ತದೆ. ಈಗ ಎರಡು ತಿಂಗಳಿನಿಂದ ಸಂಬಳವಿಲ್ಲದೆ ಈಖರ್ಚನ್ನು ನಿಭಾಯಿಸುವುದು ಕಷ್ಟವಾಗಿದೆ. ಕೆಲಸವನ್ನು ಬಿಡಲೂ ಆಗದೆ, ನಿರ್ವಹಿಸಲೂ ಆಗದ ಸ್ಥಿತಿಯಲ್ಲಿ ಇವರಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ತಲಾ 36ಲ್ಯಾಬ್‌ ಟೆಕ್ನಿಷಿಯನ್‌ ಮತ್ತು ಕಂಪ್ಯೂಟರ್‌ ಆಪರೇಟರ್‌ಗಳಿದ್ದಾರೆ. ರಾಜ್ಯದ 36 ಜಿಲ್ಲೆಗಳಲ್ಲಿ ಇವರ ಸಂಖ್ಯೆ ಸಾವಿರ ದಾಟುತ್ತದೆ. ಕೋವಿಡ್‌-19 ನಿರ್ವಹಣೆಗೆ ಅನುದಾನದ ಕೊರತೆ ಇಲ್ಲ ಎನ್ನುವ ಸಚಿವರು, ಕೂಡಲೇ ಬಾಕಿ ಸಂಬಳ ಹಾಗೂ ಇನ್ಸೆಂಟಿವ್‌ ಬಿಡುಗಡೆ ಮಾಡಬೇಕಿದೆ.

ಎರಡು ತಿಂಗಳ ಬಾಕಿ ಸಂಬಳ ಹಾಗೂ ಇನ್ಸೆಂಟಿವ್‌ ಬಿಡುಗಡೆ ಮಾಡಲು ಆರೋಗ್ಯ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದೇವೆ. ಕೆಲ ದಿನಗಳಲ್ಲಿ ಅನುದಾನ ಬರುವ ನಿರೀಕ್ಷೆಯಿದೆ. ಡಾ| ಎಲ್‌. ನಾಗರಾಜ್‌, ಡಿಎಚ್‌

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.