ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ಅಧಿಕಾರಿಗಳಿಗೆ ಸಂಸದ ಶಿವಕುಮಾರ ಉದಾಸಿ ಖಡಕ್‌ ಸೂಚನೆ

Team Udayavani, Nov 14, 2020, 3:57 PM IST

ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ಹಾನಗಲ್ಲ: ತಾಲೂಕಿನಲ್ಲಿ ಬಾಕಿ ಇರುವ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದ ಸಂಸದ ಶಿವಕುಮಾರ ಉದಾಸಿ, ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜೀ ಇಲ್ಲ ಎಂದು ಎಚ್ಚರಿಸಿದರು.

ಶುಕ್ರವಾರ ತಾಪಂ ಸಭಾಭವನದಲ್ಲಿ ನಡೆದ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಯಲ್ಲಿ ನಿರ್ಲಕ್ಷ್ಯ ತೋರಿದ ಆಲೂರು, ಆಲದಕಟ್ಟಿ, ಹಾವಣಗಿ, ಕೂಡಲ, ನರೇಗಲ್‌, ಶೀಗಿಹಳ್ಳಿ, ಸುರಳೇಶ್ವರಗ್ರಾಮ ಪಂಚಾಯತಿಗಳು ಶೇ. 50ಕ್ಕಿಂತ ಕಡಿಮೆ ಪ್ರಗತಿ ತೋರಿಸಿದ್ದು, ಕೂಡಲೇ ತ್ವರಿತ ಕಾಮಗಾರಿ ಮಾಡಿ ಅಭಿವೃದ್ಧಿಗೆ ಹೆಜ್ಜೆ ಹಾಕಬೇಕೆಂದು ಸೂಚಿಸಿದರು.

ಬೇಸಿಗೆ ಎದುರಾಗಿದ್ದು, ಡೊಮ್ಮನಾಳ, ಗುಡ್ಡದ ಮತ್ತಿಗಳ್ಳಿ, ವಳಗೇರಿ, ಮಾಸನಕಟ್ಟಿ, ಗ್ರಾಮಗಳಲ್ಲಿ ಹಿಂದಿನ ವರ್ಷಗಳಲ್ಲಿಆದಂತೆ ಕುಡಿಯುವ ನೀರಿನ ಸಮಸ್ಯೆಗೆ ಈಗಲೇ ಪರಿಹಾರ ಕಂಡುಕೊಳ್ಳಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದು. ತಾಲೂಕಿನಲ್ಲಿ 16 ಶುದ್ಧಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿದ್ದು, ಜಿಪಂ ವಿಶೇಷ ಅನುದಾನ ನೀಡಿದರೂ ದುರಸ್ತಿ ಮಾಡಿಲ್ಲ. ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಅಧಿ ಕಾರಿಗಳು ಕೂಡಲೇ ಸಂಬಂಧಿ ಸಿದವರನ್ನು ಸಂಪರ್ಕಿಸಿ ದುರಸ್ತಿಗೊಳಿಸಬೇಕು ಎಂದು ಸೂಚನೆ ನೀಡಿದರು.

ಹೊಸ ಜಲಜೀವನ್‌ ಮಿಷನ್‌ ಯೋಜನೆಯಲ್ಲಿ ತಾಲೂಕಿನ 98 ಗ್ರಾಮಗಳಿಗೆ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆ ಒಳಗೊಂಡಿವೆ ಎಂದರು. ತಾಲೂಕಿನಲ್ಲಿ ಆಶ್ರಯ ಮನೆ ಯೋಜನೆಯಡಿ 210ಫಲಾನುಭವಿಗಳಿಗೆ ತಾಂತ್ರಿಕ ದೋಷದಿಂದ ಮನೆ ನಿರ್ಮಾಣ ಸ್ಥಗಿತವಾಗಿದೆ. ಕೂಡಲೇ ಇವನ್ನು ಸರಿಪಡಿಸಬೇಕು. ಅಂಬೇಡ್ಕರ್‌, ಬಸವ ವಸತಿ ಯೋಜನೆಯಡಿ ಮಂಜುರಾದ ಮನೆಗಳ ನಿರ್ಮಾಣಕ್ಕೆ ಪೂರ್ಣ ಸಹಕಾರ ನೀಡುವಂತೆ ಸಲಹೆ ಮಾಡಿದರು.

ಕೋವಿಡ್‌-19ರ ಪ್ರಕರಣಗಳು ಇಳಿಮುಖವಾಗಿವೆ ಎಂಬ ಕಾರಣಕ್ಕೆ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಾಳಕೂಡದು. ಎದುರಿಗೆ ಹಲವು ಹಬ್ಬಗಳ ಆಚರಣೆ ನಡೆಯುತ್ತಿರುವುದರಿಂದ, ಜನಸಂದಣಿಯಲ್ಲಿ ಹಬ್ಬಗಳು ನಡೆಯುತ್ತಿರುವುದರಿಂದ ಕೋವಿಡ್‌ ಜಾಗೃತಿ ಗ್ರಾಮ ಪಂಚಾಯತಿಗಳಿಂದ ನಿರಂತರವಾಗಿರಲಿ. ಸ್ವಚ್ಛತಾ ವಿಷಯದಲ್ಲಿ ನಿರ್ಲಕ್ಷ್ಯ ಬೇಡ ಎಂದು ಎಚ್ಚರಿಸಿದರು. ಜಿಪಂ ಸದಸ್ಯ ಮಾಲತೇಶ ಸೊಪ್ಪಿನ, ತಾಪಂ ಇಒ ಸುನೀಲಕುಮಾರ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.