ಕೋವಿಡ್ ನಿಯಂತ್ರಣದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ : ಪ್ರಿಯಾಂಕ್ ಖರ್ಗೆ ಟೀಕೆ

Team Udayavani, Nov 18, 2020, 2:23 PM IST

ಕೋವಿಡ್ ನಿಯಂತ್ರಣದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ : ಪ್ರಿಯಾಂಕ್ ಖರ್ಗೆ ಟೀಕೆ

ಕಲಬುರಗಿ: ಕೋವಿಡ್ ವೈರಸ್ ಹಾವಳಿ ಕಡಿಮೆಯಾಗಿಲ್ಲ. ಸರ್ಕಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜನರು ಕೊರೊನಾ ಕಡಿಮೆಯಾಗಿದೆ ಎಂದು ಭಾವಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ.

ನಗರದ ಎರಡು ಟೆಸ್ಟಿಂಗ್ ಕೇಂದ್ರಗಳಿಂದ ಮಾದರಿ‌ ಪರೀಕ್ಷೆ ವರದಿಗಳು ತಕ್ಷಣಕ್ಕೆ ಲಭ್ಯವಾಗುತ್ತಿಲ್ಲ. ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಜನರು ಕೊರೋನಾ ಕಡಿಮೆಯಾಗಿದೆ ಎಂದೇ ಭಾವಿಸುತ್ತಿದ್ದಾರೆ. ಬೆಂಗಳೂರಿನಲ್ಲಿ 2.9 % ಇದೆ ಎಂದು ಹೇಳಲಾಗುತ್ತಿದೆ ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ:ಕೋವಿಡ್ ಪ್ರಕರಣದಲ್ಲಿ ಇಳಿಕೆ : ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಪುನರಾರಂಭಕ್ಕೆ ಸೂಚನೆ

ಹೋಂ ಕ್ವಾರೆಂಟೆನ್ ಬಗ್ಗೆ ಯಾವುದೇ ನಿಯಮಾವಳಿಗಳು ಇಲ್ಲ. ಯೂರೋಪ್ ರಾಷ್ಟ್ರಗಳಲ್ಲಿ ಎರಡನೆಯ ಹಂತದ ಕೊರೋನಾ ಬಂದಿದೆ. ದಿಲ್ಲಿಯಲ್ಲಿ ಕೂಡಾ ಮತ್ತೆ ಪ್ರಾರಂಭವಾಗಿದೆ. ಇಷ್ಟೆಲ್ಲ ಉದಾಹರಣೆ ಇರುವಾಗ ರಾಜ್ಯದಲ್ಲಿ ಕೊರೋನಾ‌ ನಿಯಂತ್ರಣಕ್ಕೆ ಮುಂಜಾಗುರೂಕತೆಯಾಗಿ ಯಾವುದೇ ಕ್ರಮಗಳನ್ನು ತೆಗೆದೆಕೊಳ್ಳುತ್ತಿಲ್ಲ. ಸಚಿವರು ಸದನದಲ್ಲಿ ಕೊಡುವ ಉತ್ತರಕ್ಕೂ ವಾಸ್ತವಕ್ಕೂ ವ್ಯತ್ಯಾಸವಿದೆ. ಕೇಂದ್ರ ಸರಕಾರ ನೀಡಿರುವ ಕಟ್ಟುನಿಟ್ಟಿನ ಕ್ರಮಗಳನ್ನು ರಾಜ್ಯದಲ್ಲಿ ಎಷ್ಟು ಪ್ರಮಾಣದಲ್ಲಿ ಜಾರಿಗೆ ತರಲಾಗಿದೆ.

ಕೇಂದ್ರ ಸರಕಾರ ನಿರ್ದೇಶನದ ಪ್ರಕಾರ ಟೆಸ್ಟಿಂಗ್ ಕೇಂದ್ರಗಳನ್ನು ಹೆಚ್ಚು ಮಾಡಬೇಕು. ಆದರೆ ಇಲ್ಲಿ ಎಷ್ಟು ಹೆಚ್ಚುವರಿ ಸ್ಥಾಪಿಸಲಾಗಿದೆ. ಕಲಬುರಗಿ ಯಲ್ಲಿ ಸಧ್ಯ ಇರುವ ಕೇಂದ್ರಗಳೇ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಟೀಕಿಸಿದರು.

ಮಾದರಿ ಸಂಗ್ರಹ ಮಾಡಿದ 24 ಗಂಟೆಯಲ್ಲೇ ವರದಿ ನೀಡಬೇಕು. ಆದರೆ, ಕಲಬುರಗಿಯಲ್ಲಿ ದಿನಗಳು ಕಳೆದರೂ ವರದಿ ಬರುತ್ತಿಲ್ಲ. ಸಮುದಾಯ ತಿಳುವಳಿಕೆ ಕ್ರಮಗಳಾದ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ‌ ಇತ್ಯಾದಿ ಜಾರಿಗೆ ತರಲಾಗಿಲ್ಲ. ಸ್ಥಳೀಯ ಆಡಳಿತ ಈ ಕುರಿತು ಯಾವ ಕ್ರಮ ಕೈಗೊಂಡಿದೆ ಎಂದು ಪ್ರಿಯಾಂಕ್ ಖಾರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ:ಪರಿಹಾರ ಕೊಡಲು ಸರಕಾರದ ಬಳಿ ದುಡ್ಡಿಲ್ಲ! ಜಾತಿ ನಿಗಮ ಪ್ರಾಧಿಕಾರಕ್ಕೆ ದುಡ್ಡು ಎಲ್ಲಿಂದ ಬಂತು?

ಕಳೆದ ಹತ್ತು ತಿಂಗಳಿಂದ ಕಾಲೇಜುಗಳು ಬಂದ್ ಆಗಿವೆ. ಈಗ ಸರಕಾರ ಪುನಾರಂಭಕ್ಕೆ ತಯಾರಿ ನಡೆಸಿದೆ. ಈ ಕುರಿತು ಒಂದು ಸ್ಪಷ್ಟ ನೀಲ ನಕ್ಷೆ ತಯಾರಾಗಿಲ್ಲ. ವಿದ್ಯಾರ್ಥಿಗಳು ಆರ್ ಟಿಪಿಸಿಆರ್ ನೆಗೆಟಿವ್ ವರದಿ ತರುವಂತೆ ಹೇಳಲಾಗುತ್ತದೆ. ವಿದ್ಯಾರ್ಥಿಗಳು ಎಷ್ಟು ಸಲ ತರಬೇಕು.

ರಜೆಗೆಂದು ಬೇರೆ ಊರಿಗೆ ಹೋದವರು ಎಷ್ಟು ಸಲ ವರದಿ ತರಬೇಕು? ಹಾಸ್ಟೆಲ್ ನಲ್ಲಿ ವಾಸಿಸುವ ವಿದ್ಯಾರ್ಥಿಗಳ ಸ್ಥಿತಿ ಹೇಗೆ? 20 – 25 ಸಾವಿರ ವಿದ್ಯಾರ್ಥಿಗಳು ಹಾಗೂ 5 ಸಾವಿರ ಭೋದಕ ಹಾಗೂ ಇತರೆ ಸಿಬ್ಬಂದಿಗಳು‌ ಮಾದರಿ ಪರೀಕ್ಷೆಗೆ ಎಲ್ಲಿ ಹೋಗಬೇಕು? ಕಲಬುರಗಿ ಜಿಲ್ಲೆಯಲ್ಲಿ ಇರುವ 16 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿಲ್ಲ ಎಂದು ಸರಕಾರದ ನಿರ್ಲಕ್ಷದ ವಿರುದ್ಧ ಪ್ರಶ್ನೆ ಮಾಡಿದ್ದಾರೆ.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.