ಹಳೆ ಕಾಮಗಾರಿ ಮುಗಿಸುವುದೇ ಕೆಕೆಆರ್‌ಡಿಬಿ ಗುರಿ!

ಹೊಸ ಕಾಮಗಾರಿಗೆ ಸಿಗದ ಅನುಮೋದನೆ „2020-21ನೇ ಸಾಲಿನಲ್ಲಿ 1100 ಕೋಟಿ ರೂ. ಬಿಡುಗಡೆ ನಿರೀಕ್ಷೆ

Team Udayavani, Nov 20, 2020, 2:59 PM IST

rc-tdy-01

ರಾಯಚೂರು: ಪ್ರತಿ ವರ್ಷ ಸರ್ಕಾರ ನೀಡುತ್ತಿದ್ದ  ಅನುದಾನ ಸಮರ್ಪಕವಾಗಿ ಬಳಸಿಕೊಳ್ಳದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈ ಬಾರಿ ಹೊಸ ಕೆಲಸಗಳೇ ಇಲ್ಲದಾಗಿವೆ. ಲಾಕ್‌ಡೌನ್‌ನಿಂದ ಸರ್ಕಾರ ಈ ಬಾರಿ ಹೊಸ ಕಾಮಗಾರಿಗಳಿಗೆ ಅನುಮೋದನೆ ನೀಡದ ಕಾರಣ ಹಳೆ ಕೆಲಸಗಳನ್ನೇ ಮುಗಿಸುವುದು ಪ್ರಸಕ್ತ ವರ್ಷದ ಗುರಿಯಾಗಿದೆ.

ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳ ಅಭಿವೃದ್ಧಿಗಾಗಿ ಕೆಕೆಆರ್‌ಡಿಬಿ ಸ್ಥಾಪಿಸಲಾಗಿದೆ. ಅದಕ್ಕಾಗಿ ಪ್ರತಿ ವರ್ಷ ಬಜೆಟ್‌ನಲ್ಲಿ 1500 ಕೋಟಿ ರೂ. ಮೀಸಲಿಡಲಾಗುತ್ತಿದೆ. ಆದರೆ, ಸರ್ಕಾರ ನೀಡುವ ಹಣ ಈ ವರೆಗೂ ಶೇ.100 ಖರ್ಚಾದ ನಿದರ್ಶನಗಳೇ ಇಲ್ಲ. 2020-21ನೇ ಸಾಲಿನಲ್ಲಿ ಕೋವಿಡ್‌-19 ಕಾರಣಕ್ಕೆ ಲಾಕ್‌ ಡೌನ್‌ ಜಾರಿಯಾದ ಪರಿಣಾಮ ಸರ್ಕಾರ ಅಭಿವೃದ್ಧಿಗೆ ಕಡಿವಾಣ ಹಾಕಿದ್ದು, ಹೊಸ ಕಾಮಗಾರಿಗಳಿಗೆ ಅನುಮೋದನೆ ನೀಡುತ್ತಿಲ್ಲ. ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಸಿಸಿ ರಸ್ತೆ, ಶಾಲಾಭಿವೃದ್ಧಿ ಸೇರಿದಂತೆ ವಿವಿಧ ಉದ್ದೇಶಗಳಿಗೆ ಮಂಡಳಿಯಿಂದ ಅನುದಾನ ನೀಡಲಾಗುತ್ತಿದೆ. ಆದರೂ ಜನಪ್ರತಿನಿಧಿ ಗಳ ಇಚ್ಛಾಶಕ್ತಿ ಕೊರತೆಯಿಂದ ಅನುದಾನ ಶೇ.100 ಖರ್ಚಾಗದೆ ಉಳಿಯತ್ತಿದೆ. 2019-20ನೇ ಸಾಲಿನಲ್ಲೂ ಆರಂಭಗೊಳ್ಳದೆ ಉಳಿದಿದ್ದ 1270 ಕಾಮಗಾರಿಗಳಿಗೆ ಈಗ ಚಾಲನೆ ನೀಡಲಾಗಿದೆ. ಈಗಾಗಲೇ ಆರ್ಥಿಕ ವರ್ಷ ಶುರುವಾಗಿ ಏಳು ತಿಂಗಳು ಕಳೆದಿದ್ದು, ಸರ್ಕಾರ ನಿರೀಕ್ಷಿತ ಅನುದಾನ ನೀಡುವುದೇ ಎನ್ನುವ ಶಂಕೆ ಮೂಡಿದೆ.

ಕ್ರಿಯಾಯೋಜನೆ ಸಲ್ಲಿಕೆ: ಜಿಲ್ಲಾಡಳಿತ ಪ್ರತಿ ವರ್ಷದಂತೆ ಸರ್ಕಾರಕ್ಕೆ ಈ ವರ್ಷವೂ ಕಾಮಗಾರಿಗಳ ಅಂದಾಜುಪಟ್ಟಿ ಸಲ್ಲಿಸಿ ಕ್ರಿಯಾ ಯೋಜನೆ ಸಲ್ಲಿಸಿದೆ. ಆದರೆ, ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಅದರಲ್ಲಿ ಕೆಲವೊಂದು ಹಳೆ ಕಾಮಗಾರಿಗಳಿಗೆ ಹೆಚ್ಚುವರಿ ಹಣ ಕೇಳಲಾಗಿತ್ತು ಎನ್ನಲಾಗುತ್ತಿದೆ. ನಿರಂತರ ಕಾಮಗಾರಿಗಳಲ್ಲದೇ ಬೇರೆ ಬೇರೆ ಉದ್ದೇಶಗಳಿಗೂ ಕೆಕೆಆರ್‌ಡಿಬಿ ಹಣ ಬಳಸಿಕೊಳ್ಳಲಾಗುತ್ತಿತ್ತು. ಐಐಐಟಿ ಸಂಸ್ಥೆಗೆ ಅನಿವಾರ್ಯವಾಗಿ ಬೇಕಿದ್ದ ಕಾರಣ ವಿಶೇಷ ಪರವಾನಗಿ ಪಡೆದು ಐದು ಕಾಮಗಾರಿಗಳನ್ನು ಮಾತ್ರ ಈ ಸಾಲಿನಲ್ಲಿ ಆರಂಭಿಸಲಾಗಿದೆ.

ಕೆಕೆಆರ್‌ಡಿಬಿಯಡಿ ಹಳೆ ಕಾಮಗಾರಿ ಕೈಗೊಳ್ಳಲು ಯಾವುದೇ ನಿರ್ಬಂಧ ಇಲ್ಲ. ಹೊಸ ಕಾಮಗಾರಿಗೆ ಅವಕಾಶ ಇಲ್ಲ ಎಂದು ಸರ್ಕಾರ ತಿಳಿಸಿದೆ. 2020-21ನೇ ಸಾಲಿನ ಕ್ರಿಯಾಯೋಜನೆ ಸಲ್ಲಿಸಿದ್ದು, ಅನುಮೋದನೆ ಸಿಕ್ಕಿಲ್ಲ. ಐಐಐಟಿಗಾಗಿ ಕೆಲವೊಂದು ಕಾಮಗಾರಿ ಕೈಗೊಳ್ಳಬೇಕಾದ ಅನಿವಾರ್ಯತೆ ಇತ್ತು.ಹೀಗಾಗಿ ವಿಶೇಷ ಪರವಾನಗಿ ಪಡೆದು ಕೆಲಸ ನಡೆಸುತ್ತಿದ್ದೇವೆ. -ಆರ್‌.ವೆಂಕಟೇಶಕುಮಾರ, ಜಿಲ್ಲಾಧಿಕಾರಿ, ರಾಯಚೂರು

ಕೋವಿಡ್‌-19 ಕಾರಣಕ್ಕೆ ತಡೆ ಹಿಡಿಯಲಾಗಿದ್ದ 2019-20ನೇ ಸಾಲಿನ 1270 ಕಾಮಗಾರಿಗಳಿಗೆ ಈಗ ಚಾಲನೆ ನೀಡಲಾಗಿದೆ. ಈ ಸಾಲಿನಲ್ಲೂ ಸರ್ಕಾರ 1100 ಕೋಟಿ ರೂ. ಮಂಡಳಿಗೆ ಬಿಡುಗಡೆ ಮಾಡಲಿದ್ದು, ವಾರದೊಳಗೆ ಅನುಮೋದನೆ ಸಿಗಬಹುದು. ಈ ಸಾಲಿನಲ್ಲಿ ಕೈಗೊಳ್ಳಬೇಕಿದ್ದ ಕಾಮಗಾರಿಗಳ ಕ್ರಿಯಾಯೋಜನೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಸಲ್ಲಿಕೆಯಾಗಿಲ್ಲ. -ದತ್ತಾತ್ರೇಯ ಪಾಟೀಲ ರೇವೂರ, ಅಧ್ಯಕ್ಷ, ಕೆಕೆಆರ್‌ಡಿಬಿ

-ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.