ಸಿಆರ್‌ಝಡ್‌ನ‌ಲ್ಲಿ ಮರಳುಗಾರಿಕೆ ಆರಂಭ

ಟನ್‌ಗೆ 500 ರೂ. ; ಸ್ಯಾಂಡ್‌ ಬಜಾರ್‌ ಆ್ಯಪ್‌ನಲ್ಲಿ ಮರಳು ಲಭ್ಯ

Team Udayavani, Nov 21, 2020, 7:45 AM IST

ಸಿಆರ್‌ಝಡ್‌ನ‌ಲ್ಲಿ ಮರಳುಗಾರಿಕೆ ಆರಂಭ

ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಮರುಆರಂಭ

ಮಂಗಳೂರು: ದ.ಕ. ಜಿಲ್ಲೆಯ ಸಿಆರ್‌ಝಡ್‌ ವಲಯದಲ್ಲಿ ಕಳೆದ 11 ತಿಂಗಳಿಂದ ಸ್ಥಗಿತಗೊಂಡಿದ್ದ ಮರಳುಗಾರಿಕೆ ಮರು ಆರಂಭಗೊಂಡಿದ್ದು, ಮರಳು ಸಮಸ್ಯೆಗೆ ಪರಿಹಾರ ದೊರಕಿದಂತಾಗಿದೆ. ಪ್ರತಿ ಟನ್‌ಗೆ 500 ರೂ. ದರವನ್ನು ಜಿಲ್ಲಾ ಮರಳು ಸಮಿತಿ ನಿಗದಿಪಡಿಸಿದೆ.

ಸಿಆರ್‌ಝಡ್‌ ವ್ಯಾಪ್ತಿಯೊಳಗೆ ಬರುವ ನೇತ್ರಾವತಿ ನದಿಯಲ್ಲಿ 8, ಗುರುಪುರ ನದಿಯಲ್ಲಿ 4 ಹಾಗೂ ಶಾಂಭವಿ ನದಿಯಲ್ಲಿ ಒಂದು ಬ್ಲಾಕ್‌ ಸಹಿತ 13 ಬ್ಲಾಕ್‌ಗಳಲ್ಲಿ (ದಿಬ್ಬ) ಈ ಬಾರಿ ಮರಳು ತೆರವಿಗೆ ಪರಿಸರ ಇಲಾಖೆಯಿಂದ ಅನುಮತಿ ಲಭಿಸಿದ್ದು ಪ್ರಥಮ ಹಂತದಲ್ಲಿ ಸಾಂಪ್ರದಾಯಿಕವಾಗಿ ಮರಳುಗಾರಿಕೆಯಲ್ಲಿ ತೊಡಗಿರುವ 80 ಮಂದಿಗೆ ಮರಳು ತೆಗೆಯಲು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಪರವಾನಿಗೆ ನೀಡಿದೆ.

ಸ್ಯಾಂಡ್‌ ಬಜಾರ್‌ ಆ್ಯಪ್‌’
ಜಿಲ್ಲೆಯಲ್ಲಿ ನಡೆಯುವ ಕಾಮಗಾರಿಗಳಿಗೆ ಹಾಗೂ ಸಾರ್ವಜನಿಕರಿಗೆ “ಸ್ಯಾಂಡ್‌ ಬಜಾರ್‌ ಆ್ಯಪ್‌’ ಮೂಲಕ ಮರಳು ಪೂರೈಸಬೇಕಾಗಿರುತ್ತದೆ. ಹಾಗಾಗಿ ಮರಳು ಸಾಗಾಣಿಕೆ ಮಾಡುವ ವಾಹನಗಳನ್ನು “ಸ್ಯಾಂಡ್‌ ಬಜಾರ್‌ ಆ್ಯಪ್‌’ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಈ ವಾಹನಗಳ ಮಾಲಕರು/ತಾತ್ಕಾಲಿಕ ಪರವಾನಿಗೆದಾರರು ನಗರದ ಮಲ್ಲಿಕಟ್ಟೆಯಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಸ್ಯಾಂಡ್‌ ಬಜಾರ್‌ ಆ್ಯಪ್‌ ಅನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಅನಾವರಣಗೊಳಿಸಲಾಗಿದೆ. ಮರಳನ್ನು ಪಡೆಯಲು ಗ್ರಾಹಕರು/ಸಾರ್ವಜನಿಕರು “ಸ್ಯಾಂಡ್‌ ಬಜಾರ್‌ ಆ್ಯಪ್‌’ ಬಳಸಬಹುದಾಗಿದೆ.

ಜಿಪಿಎಸ್‌ ವ್ಯವಸ್ಥೆ
ಮರಳು ದಿಬ್ಬಗಳನ್ನು ತೆರವುಗೊಳಿಸಲು ಬಳಸುವ ದೋಣಿಗಳಿಗೆ ಹಾಗೂ ಮರಳು ಸಾಗಾಣಿಕ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್‌ ಅಳವಡಿಸಬೇಕಾಗಿದೆ. ಆದುದರಿಂದ ಕಿಯೋನಿಕ್ಸ್‌ ನಿಗದಿಪಡಿಸಿದ ಸಂಸ್ಥೆಯಿಂದ ಜಿಪಿಎಸ್‌ ಅಳವಡಿಸಿಕೊಳ್ಳಲು ಕ್ರಮ ವಹಿಸಬೇಕು. ಜಿಪಿಎಸ್‌ ಅಳವಡಿಸಿದ ಬಗ್ಗೆ ದಾಖಲೆಯನ್ನು ಮರಳು ತಾತ್ಕಾಲಿಕ ಪರವಾನಿಗೆದಾರರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಕಳೆದ ಸಾಲಿನಲ್ಲಿ ಸಿಆರ್‌ಝಡ್‌ ವಲಯದಲ್ಲಿ 22 ದಿಬ್ಬಗಳ ಪೈಕಿ 12 ಮರಳು ದಿಬ್ಬಗಳ ಮರಳುಗಾರಿಕೆ ಅ.15ಕ್ಕೆ ಹಾಗೂ 10 ದಿಬ್ಬಗಳಲ್ಲಿ ಮರಳುಗಾರಿಕೆ ಡಿ.26ಕ್ಕೆ ಕೊನೆಗೊಂಡಿತ್ತು. ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಮರು ಆರಂಭಗೊಳ್ಳದ ಪರಿಣಾಮ ನಿರ್ಮಾಣ ಚಟುವಟಿಕೆಗಳಿಗೆ ಮರಳಿನ ತೀವ್ರ ಸಮಸ್ಯೆ ಉಂಟಾಗಿತ್ತು.

ಟನ್‌ಗೆ 500 ರೂ.
ಸಿಆರ್‌ಝಡ್‌ ವಲಯದ ಮರಳಿಗೆ ಈ ಬಾರಿ ಪ್ರತಿ ಟನ್‌ಗೆ 500 ರೂ. ದರ ವಿಧಿಸಲಾಗಿದೆ. ಇದರಂತೆ 10 ಟನ್‌ ಮರಳಿಗೆ 5,000 ರೂ. ದರವಿರುತ್ತದೆ. ಲಾರಿ ಬಾಡಿಗೆ 20 ಕಿ.ಮಿ.ವರೆಗೆ 2000 ರೂ. ನಿಗದಿಪಡಿಸಿದ್ದು ಒಟ್ಟಾರೆಯಾಗಿ ಮರಳಿಗೆ ಬೇಡಿಕೆ ಸಲ್ಲಿಸುವರ ಮನೆ ಬಾಗಿಲಿಗೆ 7000 ರೂ.ಗೆ ಮರಳು ತಲುಪಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮರಳು ಸಮಿತಿಯ ಅಧ್ಯಕ್ಷ ಡಾ| ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.