ಲಸಿಕೆಗಳ ಅಭಿವೃದ್ಧಿ ಅಡ್ಡಿ ಸೃಷ್ಟಿಯಾಗದಿರಲಿ

Team Udayavani, Nov 24, 2020, 5:30 AM IST

ಲಸಿಕೆಗಳ ಅಭಿವೃದ್ಧಿ ಅಡ್ಡಿ ಸೃಷ್ಟಿಯಾಗದಿರಲಿ

ಕೋವಿಡ್‌-19 ಸಾಂಕ್ರಾಮಿಕದ ಸಮಯದಲ್ಲಿ ಜಗತ್ತಿನ ಆರೋಗ್ಯ ವಲಯ, ವೈಜ್ಞಾನಿಕ ವಲಯ ಆರ್ಥಿಕತೆ ಮತ್ತು ರಾಜಕೀಯ ವ್ಯವಸ್ಥೆಗಳು ಹಿಂದೆಂದೂ ಕಾಣದ ರೀತಿಯಲ್ಲಿ ಒಟ್ಟುಗೂಡಿ ಹೆಜ್ಜೆ ಹಾಕುವಂಥ ಸನ್ನಿವೇಶ ನಿರ್ಮಾಣವಾಗಿದೆ. ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನೆಯ ನಿಟ್ಟಿನಲ್ಲಿ ಬಹುತೇಕ ರಾಷ್ಟ್ರಗಳು ಈಗ ಗಮನಾರ್ಹ ಹೆಜ್ಜೆಯಿಡುತ್ತಿವೆ. ಜಾಗತಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಅನೇಕ ಲಸಿಕೆಗಳಲ್ಲಿ ಕೆಲವು ಶೇ.90, ಶೇ.95ರ ವರೆಗೆ ಪರಿಣಾಮಕಾರಿತ್ವ ತೋರುತ್ತಿರುವ ವರದಿಗಳು ಬರುತ್ತಿವೆ.

ಫೈಜರ್‌, ಮಾಡರ್ನಾ, ಆಕ್ಸ್‌ ಫ‌ರ್ಡ್‌ ಲಸಿಕೆಗಳು ಜಾಗತಿಕ ಆರೋಗ್ಯ ವ್ಯವಸ್ಥೆ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿವೆ.
ಇನ್ನೇನು ಕೆಲವು ತಿಂಗಳಲ್ಲೇ ಭಾರತದಲ್ಲೂ ಲಸಿಕೆಗಳು ಜನೋಪಯೋಗಕ್ಕೆ ಬರುವ ಸಾಧ್ಯತೆಗಳು ಗೋಚರಿಸುತ್ತಿವೆ. ಆದರೆ ಲಸಿಕೆ ಅಭಿವೃದ್ಧಿಯಷ್ಟೇ ಮುಖ್ಯವಾದದ್ದು, ಅವುಗಳ ಡೋಸ್‌ಗಳ ಉತ್ಪಾದನೆ, ಶೇಖರಣೆ ಮತ್ತು ಹಂಚಿಕೆ. ಈ ವಿಚಾರವಾಗಿ ಮಾತನಾಡಿರುವ ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್‌, ಭಾರತವು ಮೊದಲ ಹಂತದ ಭಾಗವಾಗಿ ದೇಶದ 25ರಿಂದ 30 ಕೋಟಿ ಜನರಿಗೆ ಲಸಿಕೆ ಒದಗಿಸುವ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.

ಪ್ರತೀ ರಾಜ್ಯದಲ್ಲೂ ಲಸಿಕೆಯ ಹಂಚಿಕೆಗಾಗಿ ವಿಶೇಷ ತಂಡಗಳನ್ನು, ಶೇಖರಣಾ ಘಟಕಗಳನ್ನು ಸ್ಥಾಪಿಸಲೂ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಜ್ಜಾಗಿವೆ. ಸೀರಂ ಇನ್ಸ್‌ಟಿಟ್ಯೂಟ್‌ ಆಫ್ ಇಂಡಿಯಾದಂಥ ಖಾಸಗಿ ಕಂಪೆನಿಗಳೂ ಬೃಹತ್‌ ಪ್ರಮಾಣದಲ್ಲಿ ಡೋಸ್‌ಗಳ ಉತ್ಪಾದನೆಯ ಭರವಸೆಯನ್ನೂ ನೀಡಿವೆ. ಅನ್ಯ ದೇಶಗಳ ಲಸಿಕೆಗಳ ಉತ್ಪಾದನೆಯ ಒಡಂಬಡಿಕೆಗಳ ಜತೆ ಜತೆಗೇ ಪ್ರಯೋಗ ಹಂತದಲ್ಲಿರುವ ಲಸಿಕೆಗಳ ಅಭಿವೃದ್ಧಿಗೂ ಭಾರತ ಒತ್ತು ನೀಡುತ್ತಿದೆ.

ಪರಿಣತರ ಪ್ರಕಾರ, ವ್ಯಾಕ್ಸಿನೇಷನ್‌ ವಿಚಾರದಲ್ಲಿ ಭಾರತ, ಚೀನದಂಥ ರಾಷ್ಟ್ರ ಗಳ ಅನುಭವ ಬಲಿಷ್ಠವಾಗಿರುವುದರಿಂದ, ಈ ವಲಯದಲ್ಲಿನ ನೆಟ್ ವರ್ಕ್‌ ಕೂಡ ಉತ್ತಮವಾಗಿದ. ಅನ್ಯ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಲಸಿಕಾಕರಣ ಪ್ರಕ್ರಿಯೆಯ ಬಗ್ಗೆ ಆತಂಕ ಪಡುವ ಅಗತ್ಯ ಅಷ್ಟಾಗಿ ಇಲ್ಲ. ಆದರೂ ಆರಂಭದಲ್ಲಿ ಕೆಲವು ಸಮಸ್ಯೆಗಳು ಖಂಡಿತ ಎದುರಾಗುತ್ತವೆ. ಅತೀ ಕಡಿಮೆ ಅವಧಿಯಲ್ಲೇ ದೇಶಾದ್ಯಂತ ಲಸಿಕೆ ವಿತರಿಸಬೇಕೆಂದರೆ ಲಸಿಕೆಯ ಶೇಖರಣೆ, ಸಾಗಣೆಯ ವಿಚಾರದಲ್ಲಿ ಹಲವು ವಿಘ್ನಗಳು ಎದುರಾಗಬಹುದು.

ಅಂಥ ಸಮಸ್ಯೆಗಳ ನಿವಾರಣೆಗೆ ರಾಜ್ಯ ಸರಕಾರಗಳು ಕೇಂದ್ರದ ಜತೆಗೆ ಹೆಚ್ಚು ಸಕ್ರಿಯವಾಗಿ ಜವಾಬ್ದಾರಿ ವಹಿಸಿಕೊಳ್ಳಬೇಕಾಗುತ್ತದೆ. ಇನ್ನು ಕೇವಲ ಒಂದೇ ಲಸಿಕೆ ಬರುತ್ತದೆಯೇ ಅಥವಾ ಹಲವು ಕಂಪೆನಿಗಳ ಲಸಿಕೆಗಳು ಬರುತ್ತವಾ ಎನ್ನುವ ಪ್ರಶ್ನೆಯೂ ಸಾರ್ವಜನಿಕರಿಗಿದೆ. ಲಸಿಕೆಯ ಬೆಲೆಯ ವಿಚಾರದಲ್ಲೂ ಗೊಂದಲ ಉಂಟಾಗಬಹುದಾದ ಸಾಧ್ಯತೆ ಇದೆ. ಈ ಕಾರಣಕ್ಕಾಗಿಯೇ, ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ಲಸಿಕೆ ಸಿಗುವಂತೆ ಮಾಡಲು ಸರಕಾರಗಳು ಖಾಸಗಿ ಕಂಪೆನಿಗಳ ಜತೆಗೆ ಒಡಂಬಡಿಕೆ ಮಾಡಿಕೊಳ್ಳಬೇಕು. ಇದರಿಂದ ಸರಕಾರದ ಬೊಕ್ಕಸದ ಮೇಲೆ ಹೊರೆ ಉಂಟಾಗಬಹುದಾದರೂ, ದೇಶವಾಸಿಗಳ ಸ್ವಾಸ್ಥ್ಯ ಸುಧಾರಣೆಯು, ದೇಶದ ಆರ್ಥಿಕತೆಯ ಸ್ವಾಸ್ಥ್ಯವನ್ನೂ ಸುಧಾರಿಸುತ್ತದೆ ಎನ್ನುವುದರಲ್ಲಿ ಸಂಶಯವಿಲ್ಲ. ಇನ್ನು ಯಾವ ಲಸಿಕೆಯು ಐಚ್ಛಿಕ ಯಾವುದು ಅತ್ಯವಶ್ಯಕ ಎನ್ನುವ ವಿಚಾರದಲ್ಲೂ ಗೊಂದಲ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕಿದೆ.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.