ವಿದ್ಯಾರ್ಥಿವೇತನ ವಿಳಂಬ ನೀತಿ ಖಂಡಿಸಿ ಪ್ರತಿಭಟನೆ


Team Udayavani, Nov 29, 2020, 4:46 PM IST

ವಿದ್ಯಾರ್ಥಿವೇತನ ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಕಲಬುರಗಿ: ಶಾಲೆ, ಕಾಲೇಜು ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬ, ಅಲ್ಪಸಂಖ್ಯಾತ ಅಭ್ಯರ್ಥಿಗಳ ಫೆಲೋಷಿಪ್‌ಗೆ ನೀಡುವ ಪ್ರೋತ್ಸಾಹ ಧನ ಕಡಿತ ಮಾಡಿದ ಸರ್ಕಾರದ ಕ್ರಮ ಖಂಡಿಸಿ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆ ವತಿಯಿಂದ ನಗರದ ಸರ್ದಾರ್‌ ವಲ್ಲಭಾಭಾಯಿ ಪಟೇಲ್‌ ವೃತ್ತದಲ್ಲಿ ಪ್ರತಿಭಟನಾ ಪ್ರರ್ದಶನ ನಡೆಸಲಾಯಿತು.

ಸ್ಕಾಲರ್‌ಷಿಪ್‌ ಕೊಡಿ ರಾಜ್ಯ ವ್ಯಾಪಿ ಆಂದೋಲನ ಭಾಗವಾಗಿ ಪ್ರತಿಭಟನೆ ಕೈಗೊಂಡಿದ್ದ ಸಂಘಟನೆ ಸದಸ್ಯರು, ಕೋವಿಡ್ ದಿಂದ ಜನರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಪೋಷಕರು ಮಕ್ಕಳು ಪ್ರವೇಶ ಶುಲ್ಕ ಕಟ್ಟಲು ಪರದಾಡುವಂತಾಗಿದೆ. ಇನ್ನೊಂದೆಡೆ ಖಾಸಗಿ ಶಿಕ್ಷಣ ಸಂಸ್ಥೆಗಳು ಒಂದೇ ಕಂತಿನಲ್ಲಿ ಎಲ್ಲ ಶುಲ್ಕ ಕಟ್ಟುವಂತೆ ಒತ್ತಾಯಿಸುತ್ತಿವೆ. ಇದರ ಮಧ್ಯೆ ಸರ್ಕಾರದ ಸ್ಕಾಲರ್‌ಷಿಪ್‌ ವ್ಯವಸ್ಥೆಯೂ ಸರಿಯಾಗಿಲ್ಲ. ಇದರಿಂದ ವಿದ್ಯಾರ್ಥಿಗಳ ಬದುಕು ಚಿಂತಾಜನಕವಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಶಿಕ್ಷಣ ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ಪ್ರಿ-ಮೆಟ್ರಿಕ್‌, ಪೋಸ್ಟ್‌ ಮೆಟ್ರಿಕ್‌, ವಿದ್ಯಾಸಿರಿ, ಅರಿವು ಸೇರಿ ಮುಂತಾದ ಯೋಜನೆಗಳನ್ನು ಪ್ರಕಟಿಸಿದೆ. ಆದರೆ, ಅರ್ಜಿಯನ್ನು ಸಣ್ಣಪುಟ್ಟ ಕಾರಣವೊಡ್ಡಿ ವಿಲೇವಾರಿ ಮಾಡದೇಅನೂರ್ಜಿತ ಮಾಡಲಾಗುತ್ತಿದೆ. ಇದರಿಂದಶಿಷ್ಯವೇತನದಿಂದ ವಂಚನೆ ಮಾಡಲಾಗುತ್ತಿದೆ. ಕೆಲವರಿಗೆ ಮಂಜೂರಾದರೂ ಇದೂವರೆಗೆ ಖಾತೆಗೆ ಹಣ ಜಮೆ ಆಗಿಲ್ಲ. ವಿದ್ಯಾರ್ಥಿಗಳುಕಲಿಕೆ ಬಿಟ್ಟು ಇಲಾಖೆ ಕಚೇರಿಗಳಿಗೆ ಅಲೆಯುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಸರ್ಕಾರ ಈ ತಾಂತ್ರಿಕ ಸಮಸ್ಯೆ ಬಗೆಹರಿಸಿಲ್ಲ.ಮೇಲಾಗಿ ನ.9ರಂದು ಅಲ್ಪಸಂಖ್ಯಾತರ  ಇಲಾಖೆಯು ಪಿಎಚ್‌.ಡಿ ಮತ್ತು ಎಂμಲ್‌ ಫೆಲೋಷಿಪ್‌ ನೆರವನ್ನು ಕಡಿತಗೊಳಿಸಿದೆ. ತಿಂಗಳಿಗೆ ತಲಾ 25 ಸಾವಿರ ರೂ. ಪ್ರತಿ ವಿದ್ಯಾರ್ಥಿಗೆ ಪ್ರೋತ್ಸಾಹ ಧನ ಹಾಗೂ ವಾರ್ಷಿಕ 10 ಸಾವಿರ ರೂ. ನಿರ್ವಹಣಾ ವೆಚ್ಚ ನೀಡಲಾಗುತ್ತಿತ್ತು. ಇದೀಗ ಸರ್ಕಾರ ದಿಢೀರ್‌ ಆಗಿ ಪ್ರೋತ್ಸಾಹ ಧನವನ್ನು 10 ಸಾವಿರಕ್ಕೆ ಇಳಿಸಿದ್ದು, ವಾರ್ಷಿಕ ನಿರ್ವಹಣಾ ವೆಚ್ಚವನ್ನು ಸಂಪೂರ್ಣ ಹಿಂದಕ್ಕೆ ಪಡೆದಿದೆ. ಇದು ಉನ್ನತ ವ್ಯಾಸಂಗದ ಕನಸಿಗೆ ಪೆಟ್ಟು ನೀಡಿದೆ ಎಂದು ಆಳಲು ತೋಡಿಕೊಂಡಿದರು.

ಇದು ಸರ್ಕಾರದ ದುರುದ್ದೇಶದ ನಡೆಯಾಗಿದ್ದು, ಫೆಲೋಷಿಪ್‌ ಮುಂದುವರಿ ಸಬೇಕು. ಸ್ಕಾಲರ್‌ಷಿಪ್‌ನಲ್ಲಿ ಉಂಟಾಗಿರುವ ಅವ್ಯವಸ್ಥೆ ಸರಿಪಡಿಸಬೇಕು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸದಾಖತ್‌ ಷಾ, ಸಂಘಟನೆ ರಾಜ್ಯ ಸಮಿತಿ ಸದಸ್ಯ ಸಯ್ಯದ್‌ ಸಫìರಾಜ್‌, ಜಿಲ್ಲಾ ಘಟಕದ ಕಾರ್ಯದರ್ಶಿ ಶೇಖ್‌ ಝಹೀಮ್‌, ಸದಸ್ಯ ಶೇಖ್‌ ತಹಾ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.