ಗ್ರಾಪಂ ಫೈಟ್‌: ರಂಗೇರುತ್ತಿದೆ ಅಖಾಡ

ರಾಜಕೀಯ ಪಕ್ಷಗಳಲ್ಲಿ ಸಿದ್ಧತೆ ಬಲು ಜೋರು ,ಹಲವೆಡೆ ಚುನಾವಣೆ ಬಹಿಷ್ಕಾರದ ಕೂಗು

Team Udayavani, Dec 3, 2020, 5:48 PM IST

ಗ್ರಾಪಂ ಫೈಟ್‌: ರಂಗೇರುತ್ತಿದೆ ಅಖಾಡ

ಚಿಕ್ಕಮಗಳೂರು: ಖಾಂಡ್ಯ ಹೋಬಳಿಯಲ್ಲಿ ಚುನಾವಣೆ ಬಹಿಷ್ಕಾರದ ಫ್ಲೆಕ್ಸ್‌ ಅಳವಡಿಸಿರುವುದು.

ಚಿಕ್ಕಮಗಳೂರು: ಗ್ರಾಮ ಪಂಚಾಯತ್‌ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ದಿನಾಂಕನಿಗದಿಪಡಿಸಿದ್ದು, ಗ್ರಾಮೀಣ ಪ್ರದೇಶದಲ್ಲಿ ಚುನಾವಣೆ ರಂಗೇರುತ್ತಿದೆ. ಕೆಲವು ಗ್ರಾಮ ಪಂಚಾಯತ್‌ವ್ಯಾಪ್ತಿಯಲ್ಲಿ ಅಭ್ಯರ್ಥಿಗಳನ್ನು ನಿಗದಿಪಡಿಸಿ ಚುನಾವಣಾ ಪ್ರಚಾರ ಕಾರ್ಯವೂ ಭರದಿಂದ ನಡೆಯುತ್ತಿದೆ.

ಜಿಲ್ಲೆಯ 226 ಗ್ರಾಪಂಗಳಲ್ಲಿ 209 ಗ್ರಾಪಂಗಳಿಗೆ ಚುನಾವಣೆ ನಿಗದಿಯಾಗಿದ್ದು, ಅಭ್ಯರ್ಥಿಆಕಾಂಕ್ಷಿಗಳು ತಮಗೆ ಮತ ನೀಡುವಂತೆ ಮತದಾರರಮನವೊಲಿಕೆಯಲ್ಲಿ ನಿರತರಾಗಿದ್ದಾರೆ. ಅಭ್ಯರ್ಥಿ, ಅಭ್ಯರ್ಥಿಗಳ ನಡುವೆ ಸ ರ್ಧೆ ಏರ್ಪಟ್ಟಿರುವ ಕ್ಷೇತ್ರಗಳಲ್ಲಿ ಎದುರಾಳಿ ಸ್ಪರ್ಧಿಯ ಮನವೊಲಿಕೆ ಕಾರ್ಯವೂ ಭರದಿಂದ ಸಾಗುತ್ತಿದೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷೆ ಹೊಂದಿರುವ ಅಭ್ಯರ್ಥಿಗಳು ಚುನಾವಣೆ ಆಯೋಗಕ್ಕೆ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿಟ್ಟುಕೊಳ್ಳು ತಾಪಂಗೆ ಮುಗಿಬಿದ್ದಿದ್ದಾರೆ. ಮತದಾರರಿಗೆ ಆಮಿಷ ಒಡ್ಡುವ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿವೆ.ಸೋಲು ಗೆಲುವಿನ ಲೆಕ್ಕಚಾರ ಜೋರಾಗಿಯೇ ನಡೆಯುತ್ತಿದೆ. ಗ್ರಾಮ ಪಂಚಾಯತ್‌ ಚುನಾವಣೆ ಯಾವುದೇರಾಜಕೀಯ ಪಕ್ಷದ ಚಿಹ್ನೆಯಡಿ ನಡೆಯದಿದ್ದರು ರಾಜಕೀಯ ಹಸ್ತಕ್ಷೇಪ ಇಲ್ಲದೆ ಚುನಾವಣೆನಡೆಯುವುದಿಲ್ಲ ಎಂಬ ಸತ್ಯ ಎಲ್ಲರಿಗೂ ಗೊತ್ತಿರುವ ವಿಚಾರವೇ. ಹಾಗಾಗಿ, ಪರೋಕ್ಷವಾಗಿ ಬಿಜೆಪಿ,ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷ ಚುನಾವಣೆ ಅಖಾಡಕ್ಕೆ ಇಳಿದಿವೆ.

ಚುನಾವಣೆಯನ್ನು ಮೂರೂ ಪಕ್ಷಗಳು ಗಂಭೀರವಾಗಿ ಪರಿಗಣಿಸಿದ್ದು, ಮೂರೂ ಪಕ್ಷಗಳಿಗೂ ಇದು ಪ್ರತಿಷ್ಠೆಯ ಕಣವಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವದಲ್ಲಿದ್ದು, ಬಿಜೆಪಿ ಜಿಲ್ಲೆಯಲ್ಲಿ ಈ ಹಿಂದೆನಡೆದ ಎಲ್ಲಾ ಚುನಾವಣೆಗಳಲ್ಲೂ ಗೆದ್ದು ಬೀಗಿದೆ. ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಗೆದ್ದುಬೀಗಿ ತನ್ನ ಪ್ರಬಾಲ್ಯವನ್ನು ಮತ್ತೂಮ್ಮೆ ಪ್ರದರ್ಶಿಸುವ ಅನಿವಾರ್ಯತೆ ಎದುರಾಗಿದೆ.

ಈ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸೋಲುಂಡಿದ್ದು, ಈ ಚುನಾವಣೆಯಲ್ಲಿತನ್ನ ಅಸ್ಥಿತ್ವ ಪ್ರದರ್ಶಿಸಬೇಕಾದ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೂರೂ ಪಕ್ಷಗಳು ಈಗಾಗಲೇ ಕಾರ್ಯಪ್ರವೃತ್ತವಾಗಿದ್ದು, ತಮ್ಮ ಪಕ್ಷದಬೆಂಬಲಿತ ಅಭ್ಯರ್ಥಿಯ ಗೆಲುವಿಗೆ ಮತದಾರರ ಸೆಳೆಯುವ ಕಾರ್ಯದಲ್ಲಿ ತಲ್ಲೀನರಾಗಿವೆ. ಒಟ್ಟಾರೆಕೋವಿಡ್‌-19 ನಡುವೆಯೂ ಗ್ರಾಮ ಪಂಚಾಯತ್‌ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ಚುನಾವಣೆ ಬಹಿಷ್ಕಾರ ಕೂಗು: ಒಂದು ಕಡೆ ಗ್ರಾ.ಪಂ. ಚುನಾವಣೆ ರಂಗೇರುತ್ತಿದ್ದರೆ ಮತ್ತೂಂದು ಕಡೆಚುನಾವಣೆ ಬಹಿಷ್ಕಾರದ ಮಾತುಗಳು ಕೇಳಿ ಬರುತ್ತಿವೆ. ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅಂತಹವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಮಗಳೂರು ತಾಲೂಕು ಖಾಂಡ್ಯ ಹೋಬಳಿನಾಲ್ಕು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜನರು ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದು, ಅಲ್ಲಲ್ಲಿಚುನಾವಣೆ ಬಹಿಷ್ಕಾರದ ಫ್ಲೆಕ್ಸ್‌ಗಳನ್ನು ಅಳವಡಿಸಿದ್ದಾರೆ.ಈ ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಮುಖ್ಯಕಾರಣ ಮಲೆನಾಡಿಗೆ ಮಾರಕವಾಗಿರುವ ಹುಲಿ ಯೋಜನೆ, ಬಫರ್‌ ಝೋನ್‌, ಕಸ್ತೂರಿ ರಂಗನ್‌ವರದಿ, ಪರಿಸರ ಸೂಕ್ಷ¾ ವಲಯ ಯೋಜನೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಬುಧವಾರ ಮತದಾನ ಬಹಿಷ್ಕಾರದ ಫ್ಲೆಕ್ಸ್‌ ತೆರವಿಗೆ ಬಂದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ. ನೀವು ಸಂಬಳಕ್ಕಾಗಿ ಹೋರಾಡ್ತಿರಾ, ನಾವು ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಕಂದಾಯ ನಿರೀಕ್ಷಕ ಮತ್ತು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

17 ಗ್ರಾಪಂ ಚುನಾವಣೆ ಇಲ್ಲ: ಚಿಕ್ಕಮಗಳೂರು ತಾಲೂಕಿನ ಬೆಳವಾಡಿ, ಈಶ್ವರಹಳ್ಳಿ, ಕಳಸಾಪುರ, ಕೆ.ಬಿ.ಹಾಳ್‌, ಮಾಚೇನಹಳ್ಳಿ, ಸಿಂ ಗೆರೆ ಹಾಗೂ ಕಡೂರು ತಾಲೂಕಿನ ದೇವನೂರು, ಚಿಕ್ಕದೇವನೂರು, ನಿಡಘಟ್ಟ, ಎಸ್‌.ಬಿದರೆ, ನಾಗರಾಳು ಕರಗಡ ಯೋಜನೆ ಪೂರ್ಣಗೊಳಿಸುವಂತೆ ಒತ್ತಾಯಿಸಿ ಚುನಾವಣೆ ಬಹಿಷ್ಕರಿಸಿದ ಪರಿಣಾಮ 1ವರ್ಷ ತಡವಾಗಿ ಚುನಾವಣೆಯಾಗಿದ್ದು, ಅವಧಿ ಮುಗಿಯದ ಕಾರಣ ಚುನಾವಣೆ ನಡೆಯುತ್ತಿಲ್ಲ. ಮೀಸಲಾತಿ ವಿಚಾರವಾಗಿ ನ್ಯಾಯಾಲಯದ ಮೆಟ್ಟಿಲೇರಿ 1ವರ್ಷ ತಡವಾಗಿ ಚುನಾವಣೆ ನಡೆದು ಅವಧಿ ಮುಗಿಯದ ಮೂಡಿಗೆರೆ ತಾಲೂಕಿನ ಕುಂದೂರು, ಬಣಕಲ್‌, ತರುವೆ ತರೀಕೆರೆ ತಾಲೂಕು ಕೆಂಚಿಕೊಪ್ಪ, ಕೊಪ್ಪ ತಾಲೂಕು ಹೇರೂರು, ಅಜ್ಜಂಪುರ ತಾಲೂಕು ಬುಕ್ಕಾಂಬುದಿ ಗ್ರಾಪಂಗಳ ಅವಧಿ ಮುಗಿಯದ ಕಾರಣ ಚುನಾವಣೆ ನಡೆಯುತ್ತಿಲ್ಲ.

ಬಿಜೆಪಿ ಕಾರ್ಯಕರ್ತರು ಗ್ರಾಪಂಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದು, ಸಿದ್ಧತೆ ನಡೆಸಲಾಗುತ್ತಿದೆ. ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ.  ಸಿ.ಟಿ.ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ

ಗ್ರಾಪಂ ಚುನಾವಣೆಗೆ ಒಂದು ತಿಂಗಳಿಂದ ಎಲ್ಲಾ ಸಿದ್ಧತೆ ನಡೆಸಲಾಗುತ್ತಿದೆ. ಈ ಹಿಂದಿನಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲುವು ಸಾಧಿಸಿದ್ದೆವು. ಈ ಬಾರಿಯೂ ಅದಕ್ಕಿಂತ ಹೆಚ್ಚಿನ ಸ್ಥಾನ ಗೆಲ್ಲಲಿದ್ದೇವೆ. –ಕಲ್ಮುರುಡಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ

ಚುನಾವಣೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಕ್ಷದ ನಾಯಕರ ಸೂಚನೆಗೆ ಕಾಯುತ್ತಿದ್ದೇವೆ. ಅವರ ಸೂಚನೆಯಂತೆ ಚುನಾವಣೆ ಎದುರಿಸುತ್ತೇವೆ.  ರಂಜನ್‌ ಅಜೀತ್‌ಕುಮಾರ್‌, ಜೆಡಿಎಸ್‌ ಜಿಲ್ಲಾಧ್ಯಕ್ಷ

ಚುನಾವಣೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು, ಈಗಾಗಲೇ ಗ್ರಾಮೀಣ ಮಟ್ಟದಲ್ಲಿ ಕಾರ್ಯಕರ್ತರಸಭೆ ನಡೆಸಲಾಗಿದೆ. ಮುಖಂಡರ ನೇತೃತ್ವದಲ್ಲಿ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಿದ್ದೇವೆ.  ಅಂಶುಮಂತ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

 

ಸಂದೀಪ ಜಿ.ಎನ್‌.ಶೇಡ್ಗಾರ್‌

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.