ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್‌ ನೀಡಿ

Team Udayavani, Dec 4, 2020, 12:40 PM IST

ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್‌ ನೀಡಿ

ತುರುವೇಕೆರೆ: ರಾಜ್ಯ ಖಾಸಗಿ ಶಾಲಾ ಶಿಕ್ಷಕರಿಗೆ ಸರ್ಕಾರ ವಿಶೇಷ ಪ್ಯಾಕೇಜ್‌ ನೀಡದಿದ್ದರೆ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದ ವೇಳೆ ಉಪವಾಸ ಸತ್ಯಾಗ್ರಹ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಬಳಗದ ರಾಜ್ಯಧ್ಯಕ್ಷ ಸಿ. ಎಂ.ನಾಗೇಶ್‌ ಹೇಳಿದರು.

ಪಟ್ಟಣದ ರೋಟರಿ ಭವನದಲ್ಲಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಬಳಗದಿಂದ ತಾಲೂಕು ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್‌ನಿಂದಾಗಿ ರಾಜ್ಯದ 345ಕ್ಕೂಹೆಚ್ಚು ಖಾಸಗಿ ಶಾಲಾ ಶಿಕ್ಷಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು,ಈಸಂಬಂಧ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರನ್ನು ಭೇಟಿ ಮಾಡಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿ ಸುವುದಾಗಿ ಹೇಳಿದ್ದರೂ ಇಲ್ಲಿಯವರೆಗೂ ಸರ್ಕಾರದಿಂದ ನಯಾಪೈಸೆ ಸಿಕ್ಕಿಲ್ಲವೆಂದು ವಿಷಾದ ವ್ಯಕ್ತಪಡಿಸಿದರು.

ಧಾರವಾಡ ನ್ಯಾಯಾಲಯ ಪ್ರಾಥಮಿಕ ಶಾಲಾ ಖಾಸಗಿ ಶಿಕ್ಷಕರಿಗೆ 26,300 ಮತ್ತು ಪ್ರೌಢ ಶಾಲಾ ಖಾಸಗಿ ಶಿಕ್ಷಕರುಗಳಿಗೆ 33,300 ರೂ.ಗಳ ಮೂಲ ವೇತನವನ್ನು ಕೊಡಬೇಕೆಂದು ವಿಶೇಷ ಪ್ರಕರಣವೊಂದರಲ್ಲಿ ನ್ಯಾಯಾಲಯ ಆದೇಶ ಹೊರಡಿಸಿದ್ದರೂ ಇಲ್ಲಿಯವರೆಗೆ ಯಾವ ಸರ್ಕಾರ ಗಳು ಪಾಲನೆಮಾಡಿಲ್ಲ ಎಂದು ದೂರಿದರು.

ಶಿಕ್ಷಕರ ‌ ಕಲ್ಯಾಣ ನಿಧಿಗೆಖಾಸಗಿ ಶಾಲಾ ಶಿಕ್ಷಕರು ವಂತಿಗೆ ಹಣ ನೀಡುತ್ತಾ ಬಂದಿದ್ದರೂ ಅದರಿಂದ ನಮಗೆ ಯಾವುದೇ ಪ್ರಯೋಜನವಿಲ್ಲ. ಖಾಸಗಿ ಶಿಕ್ಷಕರಿಗೆ ಸೇವಾ ಭದ್ರತೆಯಿಲ್ಲದ್ದರಿಂದ ನಿವೃತ್ತಿಯ ನಂತರಅವರಬದುಕುಅತಂತ್ರವಾಗಲಿಎಂದರು. ಕರ್ನಾಟಕ ರಾಜ್ಯಖಾಸಗಿ ಶಾಲಾ ಶಿಕ್ಷಕರ ಬಳಗದ ರಾಜ್ಯ ಕಾರ್ಯದರ್ಶಿ ಅಮರೇಂದ್ರ ಮಾತನಾಡಿ,

ಪುಸ್ತಕ ಹಿಡಿದ ಶಿಕ್ಷಕನ ಬದುಕು ಅನಾಥವಾಗಿದ್ದು ಸಂಘಟನೆ, ಹೋರಾಟದ ಮೂಲಕ ನಮ್ಮ ಹಕ್ಕು ಬಾಧ್ಯತೆಗಳನ್ನು ಪಡೆಯಬೇಕಿದೆ ಎಂದರು. ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಬಳಗದ ಜಿಲ್ಲಾಧ್ಯಕ್ಷ ಲಕ್ಷ್ಮಣನಾಯಕ್‌ ಮಾತನಾಡಿ, ನಮ್ಮ ಸಂಘಕ್ಕೆ ರಾಜ್ಯಾದ್ಯಂತ 15 ಸಾವಿರಕ್ಕೂ ಹೆಚ್ಚುಶಿಕ್ಷಕರು ನೋಂದಣಿಯಾಗಿದ್ದಾರೆ. ನಮ್ಮ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೈತಿಕ ಬೆಂಬಲ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ತಾಲೂಕು ಗೌರವಾಧ್ಯಕ್ಷ ತುಕಾರಾಂ, ಅಧ್ಯಕ್ಷ ಸಿ.ವಿ.ಮೋಹನ್‌ಕುಮಾರ್‌,ಕಾರ್ಯದರ್ಶಿ ಹೇಮಂತ್‌, ಉಪನ್ಯಾಸಕರ ಸಂಘದ ಡಾ.ಚಂದ್ರಯ್ಯ, ಶ್ರೀನಿವಾಸ್‌, ಶಶಿಕುಮಾರ್‌, ನರಸಿಂಹಮೂರ್ತಿ, ಪ್ರಕಾಶ್‌, ಸುರೇಂದ್ರಕುಮಾರ್‌ ಇದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.