ಸರ್ಕಾರಿ ಕಚೇರಿಗಳಿಗೆ 50 ಮಹಡಿಯ ಅವಳಿ ಗೋಪುರ

8.50 ಎಕರೆ ಪ್ರದೇಶದಲ್ಲಿ ಸುಸಜ್ಜಿತ 50 ಮಹಡಿಗಳ ಅವಳಿ ಗೋಪುರ: ಡಿಸಿಎಂ ಗೋವಿಂದ ಕಾರಜೋಳ

Team Udayavani, Dec 12, 2020, 12:34 PM IST

ಸರ್ಕಾರಿ ಕಚೇರಿಗಳಿಗೆ 50 ಮಹಡಿಯ ಅವಳಿ ಗೋಪುರ

ಬೆಂಗಳೂರು: ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವಸದುದ್ದೇಶದಿಂದ ನಗರದ ಆನಂದರಾವ್‌ ವೃತ್ತದಬಳಿ ಇರುವ ಲೋಕೋಪಯೋಗಿ ಇಲಾಖೆಯ 8.50 ಎಕರೆ ಪ್ರದೇಶದಲ್ಲಿ 1,250 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ 50 ಮಹಡಿಗಳಅವಳಿಗೋಪುರವನ್ನು ನಿರ್ಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದರು.

ಕಾಮಗಾರಿ ಉದ್ದೇಶಿತ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹಲವು ಸರ್ಕಾರಿ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುವ ಜತೆಗೆ ಸಕಾಲದಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಕಷ್ಟವಾಗುತ್ತಿದೆ. ಹೀಗಾಗಿ2020-21ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಅವಳಿ ಗೋಪುರಗಳನಿರ್ಮಾಣವನ್ನು ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ (ಎನ್‌ಬಿಸಿಸಿ) ಸಹ ಯೋಗದೊಂದಿಗೆ 1,250 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.

30 ವರ್ಷಗಳಿಗೆ ಲೀಸ್‌: ವಾರ್ಷಿಕ 150 ಕೋಟಿ ರೂ.ಗಳನ್ನು ಸರ್ಕಾರಿ ಕಚೇರಿಗಳಿಗೆ ಬಾಡಿಗೆ ನೀಡುತ್ತಿದ್ದೇವೆ. ಈ ಅವಳಿ ಕಟ್ಟಡ ಪೂರ್ಣವಾದ ನಂತರ 250 ಕೋಟಿಗೂ ಅಧಿಕ ರೂ. ವಾರ್ಷಿಕ ಉಳಿತಾಯವಾಗಲಿದೆ. ಈ ಕಟ್ಟಡದಲ್ಲಿ ಶೇ.60ರಷ್ಟು ರಾಜ್ಯ ಸರ್ಕಾರ ಹಾಗೂ ಶೇ.40ರಷ್ಟು ಎನ್‌ಬಿಸಿಸಿ ಬಳಸಿಕೊಳ್ಳಲಿದೆ. ಕಟ್ಟಡವು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಆಗಲಿರುವುದರಿಂದ 30ವರ್ಷಗಳಿಗೆ ಎನ್‌ಬಿಸಿಸಿಗೆ ಲೀಸ್‌ ಮೇಲೆ ನೀಡಲಿದ್ದೇವೆ ಎಂದು ಹೇಳಿದರು.

8.50 ಎಕರೆ ಸರ್ಕಾರಿ ನಿವೇಶನ: ಕಳೆದ ಸಚಿವಸಂಪುಟದಲ್ಲಿ ಈ ಪ್ರಸ್ತಾವನೆಗೆ ಅನುಮೋದನೆನೀಡಲಾಗಿದೆ. ವಿಧಾನಸೌಧ, ವಿಕಾಸಸೌಧ, ಮೆಜೆಸ್ಟಿಕ್‌, ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣಕ್ಕೂ ಈ ಪ್ರದೇಶ ಸಮೀಪವಿದ್ದು, ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ.8.50 ಎಕರೆ ಸರ್ಕಾರಿ ನಿವೇಶನದಲ್ಲಿ 23.94 ಲಕ್ಷ ಚದುರ ಅಡಿ ವಿಸ್ತೀರ್ಣದಲ್ಲಿ ಈ ಬೃಹತ್‌ ಕಟ್ಟಡವನ್ನು ಮುಂದಿನ ಎರಡು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ. ಈ ಸಂಬಂಧ ಶೀಘ್ರವೇ ಎನ್‌ಬಿಸಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಿದ್ದೇವೆ ಎಂದರು. ಈ ನಿವೇಶನದಲ್ಲಿ 1940ಕ್ಕಿಂತಲೂ ಹಿಂದೆ ನಿರ್ಮಿಸಲಾದ ಲೋಕೋಪಯೋಗಿ ಇಲಾಖೆಯ ಕಟ್ಟಡಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಟ್ಟಡಗಳು ಸೇರಿದಂತೆ ವಿವಿಧ ಇಲಾಖೆಗಳ ಕಟ್ಟಡಗಳಿವೆ. ಇವುಗಳನ್ನು ಶೀಘ್ರವಾಗಿ ಬೇರೆಡೆಗೆ ಸ್ಥಳಾಂತರಿಸಲಾಗುತ್ತದೆ. ಬಿಎಂಟಿಸಿಕಟ್ಟಡಕ್ಕೆ ಸ್ಥಳಾಂತರಿಸಲು ಈಗಾಗಲೇ ಮಾತುಕತೆನಡೆಸಿದ್ದೇವೆ. ಈ ಹಿಂದೆ400ಕೋಟಿರೂ. ವೆಚ್ಚದಲ್ಲಿಈ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಲಾಗಿತ್ತು. ಈಗ ಅದನ್ನು 1250 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಿದ್ದೇವೆ. ಈಗ ಇರುವ ಗ್ರಾಮೀಣ ಭವನ ಹಾಗೇ ಉಳಿದುಕೊಳ್ಳಲಿದ್ದು, ಅದರ ಸುತ್ತಲೂ ಹೊಸ ಕಟ್ಟಡ ನಿರ್ಮಾಣ ಆಗಲಿದೆ ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್‌ ಗೋಯಲ್‌, ಮುಖ್ಯಅಭಿಯಂತರ ‌ ಶಿವಯೋಗಿ ಹಿರೇಮಠ, ಅಧೀಕ್ಷಕ ಅಭಿಯಂತರ ಎಲ್‌. ಶ್ರೀಧರಮೂರ್ತಿ, ಕಾರ್ಯನಿರ್ವಾಹಕ ಅಭಿಯಂತರ ಜಿ.ಡಿ.ಕುಮಾರ್‌ ಇತರರು ಇದ್ದರು.

ಲೋಕೋಪಯೋಗಿ ಇಲಾಖೆಯಲ್ಲಿ ಸುಮಾರು 5,500 ಕೋಟಿ ರೂ.ಗಳ ಬಿಲ್‌ ಬಾಕಿಯಿದೆ.ಕೋವಿಡ್ ದಿಂದ ಆರ್ಥಿಕ ಪರಿಸ್ಥಿತಿಯಲ್ಲಿ ಸ್ವಲ್ಪ ಏರುಪೇರಾಗಿರುವುದರಿಂದ ಬಿಲ್‌ ಪಾವತಿ ವಿಳಂಬವಾಗಿದೆ. ಈಗ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ ದಿನೇದಿನೆ ಬಿಲ್‌ ಪಾವತಿ ಮಾಡುತ್ತಿದ್ದೇವೆ. ಗೋವಿಂದ ಎಂ.ಕಾರಜೋಳ, ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.