ಸಾವಿನ ವಾರ್ಡ್‌ಗೆ ಅವಿರೋಧ ಆಯ್ಕೆ

| ಆಳಂದ ತಾಲೂಕಿನ ಯಳಸಂಗಿ ಗ್ರಾಪಂ ವಾರ್ಡ್‌ ಮೂರು | 10 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್‌

Team Udayavani, Dec 15, 2020, 4:23 PM IST

ಸಾವಿನ ವಾರ್ಡ್‌ಗೆ ಅವಿರೋಧ ಆಯ್ಕೆ

ಕಲಬುರಗಿ: ಸಾವಿನ ವಾರ್ಡ್‌ ಎಂದೇ ಕುಖ್ಯಾತಿ ಪಡೆದಿದ್ದ ಜಿಲ್ಲೆಯ ಆಳಂದ ತಾಲೂಕಿನ ಯಳಸಂಗಿ ಗ್ರಾಪಂನ ವಾರ್ಡ್‌ 3ಕ್ಕೆ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಯಳಸಂಗಿ ಗ್ರಾಪಂನ ವಾರ್ಡ್‌ ಮೂರಕ್ಕೆ ಆಯ್ಕೆಯಾಗುವ ಸದಸ್ಯರಲ್ಲಿ ಒಬ್ಬರ ಸಾವನ್ನಪ್ಪುತ್ತಾರೆ ಎಂಬ ಭಯದ ಹಿನ್ನೆಲೆಯಲ್ಲಿ ಕೇವಲ ಮೂವರೇ ಹೆದರುತ್ತಾ ನಾಮಪತ್ರ ಸಲ್ಲಿಸುತ್ತಿದ್ದರು. ಆದರೆ ಪ್ರಸ್ತುತ 2015-20ರ ಅವಧಿಯಲ್ಲಿ ಆಯ್ಕೆಯಾದ ಸದಸ್ಯರಲ್ಲಿ ಯಾರೊಬ್ಬರು ಜೀವಕ್ಕೆ ಹಾನಿಯಾಗದ ಹಿನ್ನೆಲೆಯಲ್ಲಿ ಈ ಸಲ 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಆದರೆ ನಾಮಪತ್ರ ವಾಪಸಾತಿ ಕಡೆ ದಿನವಾದ ಸೋಮವಾರ 10 ಅಭ್ಯರ್ಥಿಗಳು ನಾಮಪತ್ರ ವಾಪಸಾತಿ ಪಡೆದಿದ್ದರಿಂದ ಮೂವರು ಅವಿರೋಧವಾಗಿ ಆಯ್ಕೆಯಾದರು.

ಒಟ್ಟಾರೆ ವಾರ್ಡ್‌ ನಂಬರ್‌ ಮೂರರಲ್ಲಿ ನಿವೃತ್ತ ಸಹಾಯಕ ಅಭಿಯಂತರ ಎಸ್‌.ಎಸ್‌. ಪಾಟೀಲ್‌, ಮಹಾದೇವಿ ಶಿವಶರಣಪ್ಪ ಸಿಂಧೆ, ವಸಂತ ಪ್ರಿಯಾ ಶಿವಲಿಂಗಪ್ಪ ಪಟ್ಟಣ ಎನ್ನುವರೇ ಅವಿರೋಧವಾಗಿ ಆಯ್ಕೆಯಾದ ಸದಸ್ಯರಾಗಿದ್ದಾರೆ.

ಉಳಿದಂತೆ ವಾರ್ಡ್‌ ನಂ. ಒಂದರಲ್ಲಿ 13, 2ರಲ್ಲಿ 14, 4ರಲ್ಲಿ 6, 5ರಲ್ಲಿ 13, ಹಾಗೂ 6ರಲ್ಲಿ 10 ಅಭ್ಯರ್ಥಿಗಳು ಕಣದಲ್ಲುಳಿದಿದ್ದಾರೆ. ಒಟ್ಟಾರೆ 16 ಸ್ಥಾನಗಳಿಗೆ 56 ಅಭ್ಯರ್ಥಿಗಳು ಕಣದಲ್ಲಿ ಉಳಿದಂತಾಗಿದೆ. 1993 ರಿಂದ 2015ರ ಅವಧಿಯಲ್ಲಿ ವಾರ್ಡ್‌ ಮೂರರಲ್ಲಿ ಆಯ್ಕೆಯಾದ ಗ್ರಾಪಂ ಸದಸ್ಯರಲ್ಲಿ ಅವಧಿ ಮುಗಿಯುವ ಮುಂಚೆಯೇ ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ಒಟ್ಟಾರೆ 9 ಜನ ಸಾವನ್ನಪ್ಪಿದ್ದಾರೆ. ಕಡ್ಡಾಯ ಎನ್ನುವಂತೆ ಉಪಚುನಾವಣೆ ನಡೆಯುತ್ತಲೇ ಇರುತ್ತಿತ್ತು.

ಆದರೆ ಉಪ ಚುನಾವಣೆಯಲ್ಲಿ ಗೆದ್ದವರಲ್ಲಿ ಒಬ್ಬರೂ ಮೃತಪಟ್ಟಿಲ್ಲ. ಉಪ ಚುನಾವಣೆಗೆ ಭಾರೀ ಪೈಪೋಟಿ ನಡೆಯುತ್ತಿತ್ತು. 2015-20ರ ಅವಧಿ ಯಲ್ಲಿ ಯಾರೊಬ್ಬರು ಮೃತಪಡದ ಹಿನ್ನೆಲೆಯಲ್ಲಿ ಒಮ್ಮೆಲೆ 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರಿಂದ ಈ ಸಲ ಜಿದ್ದಾಜಿದ್ದಿನ ಚುನಾವಣೆ ನಡೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸಾವಿನ ಭಯದ ಹಿನ್ನೆಲೆಯಲ್ಲಿ ಮತ್ತೆ ಅವಿರೋಧವಾಗಿ ಆಯ್ಕೆ ನಡೆದಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.