ನೂತನ ಕೋವಿಡ್ ಎಫೆಕ್ಟ್: ಅಂತಾರಾಷ್ಟ್ರೀಯ ವಿಮಾನ ಸಂಚಾರ ಸ್ಥಗಿತಗೊಳಿಸಿದ ಸೌದಿಅರೇಬಿಯಾ
ಭೂ ಹಾಗೂ ಸಮುದ್ರದ ಮೂಲಕವೂ ಸೌದಿ ಅರೇಬಿಯಾಕ್ಕೆ ಒಂದು ವಾರಗಳ ಕಾಲ ಪ್ರವೇಶ ನಿರ್ಬಂಧ
Team Udayavani, Dec 21, 2020, 11:33 AM IST
ರಿಯಾದ್:ಬ್ರಿಟನ್ ನಲ್ಲಿ ನೂತನ ಕೋವಿಡ್ ಸೋಂಕು ಕ್ಷಿಪ್ರವಾಗಿ ಹರಡುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಒಂದು ವಾರಗಳ ಕಾಲ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದೆ.
ಅಪರೂಪದ ಘಟನೆ ಹೊರತುಪಡಿಸಿ ಇನ್ನುಳಿದಂತೆ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳನ್ನು ತಾತ್ಕಾಲಿಕವಾಗಿ ಇನ್ನೂ ಒಂದು ವಾರಗಳ ಕಾಲ ಸಂಚಾರ ನಿಷೇಧಿಸಲಾಗಿದೆ ಎಂದು ಸೌದಿ ಪ್ರೆಸ್ ಏಜೆನ್ಸಿ ತಿಳಿಸಿದೆ.
ಭೂ ಹಾಗೂ ಸಮುದ್ರದ ಮೂಲಕವೂ ಸೌದಿ ಅರೇಬಿಯಾಕ್ಕೆ ಒಂದು ವಾರಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ. ಬ್ರಿಟನ್ ನಲ್ಲಿ ನೂತನ ಕೋವಿಡ್ ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸೌದಿ ಆಂತರಿಕ ಸಚಿವಾಲಯ ಹೇಳಿದೆ.
ಇದನ್ನೂ ಓದಿ:ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಶ್ರೀಧರ್ ಡಿ.ಎಸ್ ಗೆ ಪಾರ್ತಿಸುಬ್ಬ ಪ್ರಶಸ್ತಿ
ಈ ನಿಷೇಧ ಸರಕು ಸಾಗಣೆ ವಿಮಾನ ಸಂಚಾರಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ. ಬ್ರಿಟನ್ ನಲ್ಲಿ ನೂತನ ಕೋವಿಡ್ ಸೋಂಕು ಪತ್ತೆಯಾದ ನಿಟ್ಟಿನಲ್ಲಿ ಹಲವು ಯುರೋಪ್ ದೇಶಗಳು ಬ್ರಿಟನ್ ಪ್ರಜೆಗಳು ಪ್ರವೇಶ ನಿಷೇಧಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್