ಬ್ರಿಟನ್ ನಲ್ಲಿ ನೂತನ ಕೋವಿಡ್ ಸೋಂಕು ಉಲ್ಬಣ: ಭಾರತ, ಬ್ರಿಟನ್ ವಿಮಾನ ಹಾರಾಟ ರದ್ದು
ಭಾರತದಿಂದ ಬ್ರಿಟನ್ ಗೆ ತೆರಳುವ ವಿಮಾನ ಸಂಚಾರವನ್ನೂ ಕೂಡಾ ಈ ಸಂದರ್ಭದಲ್ಲಿ ತಾತ್ಕಾಲಿಕ ಸ್ಥಗಿತ
Team Udayavani, Dec 21, 2020, 3:42 PM IST
ನವದೆಹಲಿ:ಬ್ರಿಟನ್ ನಲ್ಲಿ ರೂಪಾಂತರಗೊಂಡ ನೂತನ ವೈರಸ್ ಕ್ಷಿಪ್ರವಾಗಿ ಹರಡುತ್ತಿರುವುದರಿಂದ ಭಾರತ ಮುಂಜಾಗ್ರತಾ ಕ್ರಮವಾಗಿ ಬ್ರಿಟನ್ ನಿಂದ ಆಗಮಿಸುವ ಎಲ್ಲಾ ವಿಮಾನಗಳಿಗೆ ಡಿಸೆಂಬರ್ 31ರವರೆಗೆ ನಿರ್ಬಂಧ ವಿಧಿಸಿರುವುದಾಗಿ ವರದಿ ತಿಳಿಸಿದೆ.
ಬ್ರಿಟನ್ ನಲ್ಲಿ ಕೋವಿಡ್ ಹೊಸ ಪ್ರಬೇಧ ಕ್ಷಿಪ್ರವಾಗಿ ಹರಡುತ್ತಿದ್ದು, ದೇಶದಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನ ಸಂಚಾರವನ್ನು ಡಿಸೆಂಬರ್ 31ರವರೆಗೂ ನಿಷೇಧಿಸಲು ನಿರ್ಧಾರ ಕೈಗೊಂಡಿರುವುದಾಗಿ ಭಾರತ ಹೇಳಿದೆ.
ಭಾರತದಿಂದ ಬ್ರಿಟನ್ ಗೆ ತೆರಳುವ ವಿಮಾನ ಸಂಚಾರವನ್ನೂ ಕೂಡಾ ಈ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಬ್ರಿಟನ್ ನಿಂದ ನಾಳೆ ಮಧ್ಯರಾತ್ರಿ ಭಾರತಕ್ಕೆ ಆಗಮಿಸಲಿರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಆರ್ ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗುವುದು ಎಂದು ವಿವರಿಸಿದೆ.
ಇದನ್ನೂ ಓದಿ:ಬಾಕ್ಸಿಂಗ್ ಡೇ ಟೆಸ್ಟ್: ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಬದಲಾವಣೆ ಅನಿವಾರ್ಯ
ಕೋವಿಡ್ 19 ಕುರಿತ ಜಂಟಿ ಪರಿಶೀಲನಾ ತಂಡ ಬ್ರಿಟನ್ ನಲ್ಲಿ ವೇಗವಾಗಿ ಹರಡುತ್ತಿರುವ ಕೋವಿಡ್ ವೈರಸ್ ಕುರಿತು ಸೋಮವಾರ (ಡಿಸೆಂಬರ್ 21, 2020) ಬೆಳಗ್ಗೆ ಚರ್ಚೆ ನಡೆಸಿತ್ತು. ರೂಪಾಂತರಗೊಂಡ ನೂತನ ಸೋಂಕು ಹರಡುತ್ತಿದ್ದ ನಿಟ್ಟಿನಲ್ಲಿ ಬ್ರಿಟನ್ ನಿಂದ ಆಗಮಿಸುವ ವಿಮಾನಗಳಿಗೆ ಕೆನಡಾ, ಸೌದಿ ಅರೇಬಿಯಾ ಹಾಗೂ ಇತರ ಯುರೋಪ್ ದೇಶಗಳು ನಿರ್ಬಂಧ ವಿಧಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು