ಗ್ರಾಪಂ ಚುನಾವಣೆ: ಕೋವಿಡ್ ಮುಂಜಾಗ್ರತೆ


Team Udayavani, Dec 21, 2020, 4:52 PM IST

ಗ್ರಾಪಂ ಚುನಾವಣೆ: ಕೋವಿಡ್ ಮುಂಜಾಗ್ರತೆ

ಕಲಬುರಗಿ: ಜಿಲ್ಲೆಯಲ್ಲಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಮತದಾರರು ಕೊರೊನಾ ಸೋಂಕಿಗೆಹೆದರದೆ ಎಲ್ಲ ಮತದಾರರು ಮಾಸ್ಕ್ ಅಥವಾ ಫೇಸ್‌ ಸಿಲ್ಡ್‌ ಧರಿಸಿ, ಸ್ಯಾನಿಟೈಸರ್‌ ಬಳಸಿ ಸುರಕ್ಷತೆ ಕ್ರಮ ಅನುಸರಿಸಿ ಮತದಾನ ಕೇಂದ್ರಕ್ಕೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಚುನಾವಣೆ ಆಯೋಗ ಕೆಲವು ನಿರ್ದೇಶನ ನೀಡಿದೆ. ಅದರಂತೆ ಜಿಲ್ಲಾಡಳಿತಹಾಗೂ ತಾಲೂಕು ಆಡಳಿತ ಸಾಕಷ್ಟು ಮುಂಜಾಗೃತಾ ಕ್ರಮ ಕೈಗೊಂಡಿವೆ. ಚುನಾವಣೆ ಪಕ್ಷ ರಹಿತ ಆಗಿರುವುದರಿಂದ ಹಾಗೂ ಕ್ಷೇತ್ರದ ವ್ಯಾಪ್ತಿಯು ಬಹಳ ಚಿಕ್ಕದಿರುವುದರಿಂದ ಅಭ್ಯರ್ಥಿಗಳ ಪ್ರಚಾರವು ಕ್ಷೇತ್ರಕ್ಕೆ ಸೀಮಿತವಾಗಿರುತ್ತದೆ. ಕಡಿಮೆಬೆಂಬಲಿಗರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡುಮನೆ-ಮನೆಗೆ ಭೇಟಿ ನೀಡಿ ಪ್ರಚಾರ ಮಾಡಬಹುದಾಗಿದೆ. ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಕಡ್ಡಾಯವಾಗಿ ಫೇಸ್‌ ಮಾಸ್ಕ್ ಧರಿಸಬೇಕೆಂದು ಸೂಚಿಸಿದ್ದಾರೆ. ಆದಷ್ಟು ಎಲೆಕ್ಟ್ರಾನಿಕ್‌ ಮೀಡಿಯಾದಲ್ಲೂ ಪ್ರಚಾರ ಮಾಡಬಹುದು. ಅಭ್ಯರ್ಥಿಗಳು ಪ್ರಚಾರಕ್ಕಾಗಿನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚಬಹುದು. ಕರಪತ್ರ ಹಂಚುವವರು ಸಹ ಕಡ್ಡಾಯವಾಗಿ ಫೇಸ್‌ ಮಾಸ್ಕ್,ಹ್ಯಾಂಡ್‌ ಗ್ಲೌಸ್‌ ಧರಿಸಬೇಕು. ಹ್ಯಾಂಡ್‌ ಸ್ಯಾನಿಟೈಸರ್‌ಉಪಯೋಗಿಸಬೇಕು. ಗುಂಪು-ಗುಂಪಾಗಿ ಪ್ರಚಾರ ಮಾಡುವಂತಿಲ್ಲ. ಕೋವಿಡ್ ಪಾಸಿಟಿವ್‌ ಅಭ್ಯರ್ಥಿಗಳು ಎಲೆಕ್ಟ್ರಾನಿಕ್‌ ಮಾಧ್ಯಮದಲ್ಲಿ ಪ್ರಚಾರ ಮಾಡಬಹುದಾಗಿದೆ. ಖುದ್ದಾಗಿ ಸಾಮಾನ್ಯ ಜನರೊಂದಿಗೆ, ಸಮುದಾಯದಲ್ಲಿ ಪ್ರಚಾರ ಮಾಡಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಮತಚಲಾವಣೆ: ಮತದಾರರು ಚಲಾಯಿಸಲು ಕೊಠಡಿಗೆ ಪ್ರವೇಶಿಸುವ ಮುಂಚಿತವಾಗಿ ಕೋವಿಡ್ ಮುಂಜಾಗ್ರತಾ ಕ್ರಮ ಕೈಗೊಂಡಿರಬೇಕು. ಮತದಾನ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ಮತದಾರರಿಗೆ ಪ್ರತ್ಯೇಕ ಸರತಿ ಸಾಲುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ನಿಲ್ಲಿಸಬೇಕು. ಮತದಾರನ ಗುರುತು ಪರಿಶೀಲಿಸಿದ ನಂತರ ಅವರು ತಂದಿರುವ ಗುರುತಿನ ಚೀಟಿ ಡಬ್ಬದಲ್ಲಿ ಹಾಕುವಂತೆ ತಿಳಿಸಬೇಕು. ಮತದಾರರ ಬೆರಳಿಗೆ ಅಳಿಸಲಾಗದ ಶಾಯಿ ಹಾಕಬೇಕು. ಸೋಂಕಿನ ವ್ಯಕ್ತಿಗಳೂ ಮತ ಚಲಾಯಿಸಲು ಹಕ್ಕುಳ್ಳವರಾಗಿದ್ದು, ಇವರಿಗೆ ಅಂಚೆ ಮತಪತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಪೋಲಿಂಗ್‌ ಅಧಿಕಾರಿ ಮತದಾರರಿಗೆ ಮತಪತ್ರ ವಿತರಿಸಬೇಕು. ಕೌಂಟರ್‌ ಫೈಲ್‌ನಲ್ಲಿ ಸಹಿ ಅಥವಾ ಹೆಬ್ಬೆರಳಿನ ಗುರುತು ಪಡೆಯಬೇಕು. ನಂತರ ಮತಪೆಟ್ಟಿಗೆಯಲ್ಲಿ ಮತ ಹಾಕಬೇಕು. ಮತಪೆಟ್ಟಿಗೆಯನ್ನು ಮತದಾರರು ಮುಟ್ಟಲುಅವಕಾಶ ನೀಡಬಾರದು. ಮತದಾನ ಮುಕ್ತಾಯವಾದ ಕೂಡಲೇ ಮತಪೆಟ್ಟಿಗೆ ಸೀಲ್‌ ಮಾಡಿ ಅಗತ್ಯ ದಾಖಲಾತಿ ಸಿದ್ಧಪಡಿಸಿಕೊಂಡು, ಭದ್ರತಾ ಕೊಠಡಿಗೆ ಕೊಂಡೊಯ್ಯಬೇಕು. ಈ ಚುನಾವಣೆ ಮತಪತ್ರದಲ್ಲಿ ನೋಟಾಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಕೋವಿಡ್ ಸೋಂಕಿತರಿಗೂ ಮತದಾನಕ್ಕೆ  ಅವಕಾಶ ;

ಕೋವಿಡ್ ಸೋಂಕಿತರು ಹಾಗೂ ಮತದಾನದ ದಿನ ತಪಾಸಣೆಯಿಂದ ಪತ್ತೆಯಾದ ಶಂಕಿತರು ಮತಗಟ್ಟೆಗಳಿಗೆ ತೆರಳಿ ಖುದ್ದು ಮತದಾನ ಮಾಡಲು ಇಚ್ಛಿಸಿದಲ್ಲಿ ಈ ಬಗ್ಗೆ ರಿಟರ್ನಿಂಗ್‌ ಅಧಿ ಕಾರಿಗಳು ಅಥವಾ ಆರೋಗ್ಯ ಅಧಿಕಾರಿಗಳಿಗೆ ಲಿಖೀತ ಮನವಿ ಸಲ್ಲಿಸಬೇಕು. ಆರೋಗ್ಯ ಅಧಿ ಕಾರಿಗಳು ಮತದಾನ ಮಾಡಲು ಸಮ್ಮತಿ ನೀಡಿದಲ್ಲಿ ಸೋಂಕಿತರು ಹಾಗೂ ಶಂಕಿತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸಂಬಂಧಪಟ್ಟ ಮತಗಟ್ಟೆಗಳಿಗೆ ಕೊನೆಯ ಒಂದು ಗಂಟೆ ಅವಧಿಯಲ್ಲಿ ಆರೋಗ್ಯ ಸಿಬ್ಬಂದಿ ಮತದಾನ ಮಾಡಿಸಬೇಕು. ನಂತರ ಸ್ವಸ್ಥಾನಕ್ಕೆ ಮರಳಿ ಕರೆದುಕೊಂಡು ಹೋಗಬೇಕು. ಪ್ರತಿ ಮತಗಟ್ಟೆ ಹೊರಗಡೆ ಆರೋಗ್ಯ ಇಲಾಖೆ ಸಿಬ್ಬಂದಿ ಮತದಾರರನ್ನು ಥರ್ಮಲ್‌ ಸ್ಕ್ಯನರ್‌ ಮೂಲಕ ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.