ದತ್ತು ಶಾಲೆ ಪ್ರಗತಿ ಯೋಜನೆಗೆ ಸಿದ್ಧತೆ

27 ಶಾಲೆ ದತ್ತು ಸ್ವೀಕರಿಸಿದ ಒಂಭತ್ತು ಶಾಸಕರು, ಶಿಕ್ಷಣ ಇಲಾಖೆಯಿಂದ ಅಭಿವೃದ್ಧಿ ಮಾಹಿತಿ ಸಂಗ್ರಹ

Team Udayavani, Dec 24, 2020, 3:35 PM IST

gb-tdy-1

ಸಾಂದರ್ಭಿಕ ಚಿತ್ರ

ಕಲಬುರಗಿ: ಸರ್ಕಾರಿ ಶಾಲೆಗಳ ಅಭಿವೃದ್ಧಿ ನಿಟ್ಟಿನಲ್ಲಿ ದತ್ತು ಕಾರ್ಯಕ್ರಮದಡಿ ಜಿಲ್ಲೆಯ ಒಂಭತ್ತು ಶಾಸಕರು 27 ಶಾಲೆಗಳನ್ನು ದತ್ತು ಸ್ವೀಕರಿಸಿದ್ದಾರೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ ಮೂರು ಶಾಲೆಗಳನ್ನು ಶಾಸಕರು ದತ್ತು ಪಡೆದಿದ್ದಾರೆ. ಅಭಿವೃದ್ಧಿಗಾಗಿ ಸರ್ಕಾರಿ ಶಾಲೆಗಳು ಕಾಯುತ್ತಿವೆ.

ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಬಲಪಡಿಸಲು ಶಾಸಕರು ದತ್ತು ಪಡೆಯುವ ಕಾರ್ಯಕ್ರಮರೂಪಿಸಲಾಗಿದೆ. ದತ್ತು ಪಡೆಯುವ ಮೂಲಕಆಯಾ ಶಾಲೆಗಳಲ್ಲಿ ಆಗಬೇಕಾದ ಅಭಿವೃದ್ಧಿಕಾರ್ಯಗಳನ್ನು ಮಾಡಬೇಕೆಂದು ರಾಜ್ಯ ಸರ್ಕಾರಶಾಸಕರಿಗೆ ಸಲಹೆ ನೀಡಿದೆ. ಅದರಂತೆ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ಒದಗಿಸುವ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಬ್ಬ ಶಾಸಕರು ಮೂರು ಶಾಲೆಗಳನ್ನು ದತ್ತುಪಡೆದುಕೊಂಡಿದ್ದಾರೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿಬಳಸಿಕೊಂಡು ದತ್ತುಗಳ ಶಾಲೆಗಳ ಪ್ರಗತಿ ಯೋಜನೆ ಸಿದ್ಧ ಪಡಿಸಲಾಗುತ್ತಿದೆ.

ಜಿಲ್ಲೆಯ ಒಂಭತ್ತು ವಿಧಾನಸಭೆ ಕ್ಷೇತ್ರಗಳ ಶಾಸಕರುತಾವು ಪ್ರತಿನಿಧಿಸುವ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಮೂರು ಶಾಲೆಗಳ ದತ್ತು ಸ್ವೀಕಾರ ಪಟ್ಟಿಗೆ ಈಗಾಗಲೇಅನುಮೋದನೆ ಸಿಕ್ಕಿದೆ. ದತ್ತು ಸ್ವೀಕರಿಸಲಾದ ಶಾಲೆಗಳ ಅಭಿವೃದ್ಧಿ ಚಟುಚಟಿಕೆಗಳ ವಿವರ ಸಂಗ್ರಹಿಸಿ, ಅದಕ್ಕೆನಿಗದಿಪಡಿಸಿರುವ ಅಂದಾಜು ವೆಚ್ಚವನ್ನು ಲೆಕ್ಕ ಹಾಕಲಾಗಿದೆ.

ಶಾಲೆಗಳ ಆಯ್ಕೆ ಹೇಗೆ?: ಶಿಕ್ಷಕರು ತಮ್ಮ ಶಾಲೆಗಳಲ್ಲಿನ ಅಭಿವೃದ್ಧಿ ಕಾರ್ಯಗಳು ಹಾಗೂ ಬೋಧನಾ ಸಲಕರಣೆಗಳ ಕೊರತೆಬಗ್ಗೆ ಮೇಲಾಧಿಕಾರಿಗಳಾದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿ, ಸರ್ಕಾರದಗಮನ ಸೆಳೆಯುವ ಕೆಲಸ ಮಾಡಿದ್ದಾರೆ. ಅಲ್ಲದೇ, ಸ್ವತಃಶಿಕ್ಷಣ ಇಲಾಖೆಯೇ ಮುಖ್ಯ ಶಿಕ್ಷಕರಿಂದ ಆಗಬೇಕಾದಅಭಿವೃದ್ಧಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಹೀಗೆಕಲೆ ಹಾಕಿದ ಶಾಲೆಗಳ ಮಾಹಿತಿ ಆಧರಿಸಿ ಅಥವಾಶಾಸಕರೇ ತಮ್ಮ ಮತಕ್ಷೇತ್ರ ವ್ಯಾಪ್ತಿಯ ಮೂರು ಶಾಲೆಗಳನ್ನು ಹೆಸರಿಸಿ ಆಯ್ಕೆ ಮಾಡಿಕೊಂಡಿದ್ದಾರೆ.

ಶಾಲೆಗಳ ಕೊಠಡಿ ನಿರ್ಮಾಣ, ಚಾವಣಿ ದುರಸ್ತಿ, ಕಾಂಪೌಂಡ್‌ ನಿರ್ಮಾಣ ಮಾಡುವುದು, ಕಂಪ್ಯೂಟರ್‌ ಒದಗಿಸುವುದು, ವಿಜ್ಞಾನ ಪ್ರಯೋಗಾಲಯ,ಸಲಕರಣೆ ಕೊಡಿಸುವುದು, ಆಟದ ಮೈದಾನ ಅಭಿವೃದ್ಧಿ, ಪಾಠೊಪಕರಣ ಖರೀದಿ, ಶೌಚಾಲಯ ಮತ್ತಿತರ ಕಾಮಗಾರಿಗಳನ್ನು ಮಾಡಿಕೊಡಲು ಶಾಸಕರು ಮುಂದಾಗಿದ್ದಾರೆ.

ಕೆಪಿಎಸ್‌ ಶಾಲೆ ಕಡ್ಡಾಯ: ಶಾಸಕರ ದತ್ತು ಪಡೆದ ಮೂರು ಶಾಲೆಗಳಲ್ಲಿ ಒಂದು ಕರ್ನಾಟಕ ಪಬ್ಲಿಕ್‌ಶಾಲೆ (ಕೆಪಿಎಸ್‌) ಸೇರುವುದು ಕಡ್ಡಾಯವಾಗಿದೆ. ಒಂದರಿಂದ ಪದವಿ ಪೂರ್ವ ಕಾಲೇಜು ವರೆಗೆ ಒಂದೇ ಆವರಣದಲ್ಲಿ ಕೆಪಿಎಸ್‌ ಶಾಲೆ ಇರುತ್ತದೆ.ಆ ಶಾಲೆಯ ಪ್ರಾಥಮಿಕ,ಪ್ರೌಢ ಹಾಗೂ ಪೂರ್ವ ಪದವಿ ವಿಭಾಗದಲ್ಲಿ ಆಗಬೇಕಾದ ಅಭಿವೃದ್ಧಿಕಾರ್ಯಗಳನ್ನು ಶಾಸಕರು ಮಾಡಬೇಕು. ಉಳಿದ ಎರಡು ಶಾಲೆಗಳಲ್ಲಿ ಒಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಸೇರಿರುತ್ತದೆ.

ದತ್ತು ಪಡೆದು ಅಭಿವೃದ್ಧಿ ಪಡಿಸುವುದರಜೊತೆಗೆ ಮೂರ್‍ನಾಲ್ಕು ತಿಂಗಳೊಗೊಮ್ಮೆ ಶಾಸಕರು ಆ ಶಾಲೆಗಳಿಗೆ ಭೇಟಿ ಕೊಡಬೇಕು. ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಚರ್ಚಿಸಬೇಕೆಂದು ಶಾಸಕರಿಗೆ ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ.

ಶಾಸಕರು ತಮ್ಮ ವಿಧಾನಸಭೆ ಕ್ಷೇತ್ರದ ಮೂರು ಶಾಲೆಗಳನ್ನು ಸ್ವತಃ ಆಯ್ಕೆ ಮಾಡಿಕೊಡು ದತ್ತು ಪಡೆದಿದ್ದಾರೆ. ದತ್ತು ಪಡೆದ ಶಾಲೆಗಳ ಅಭಿವೃದ್ಧಿ ಚಟುವಟಿಕೆಗಳನ್ನು ಪಟ್ಟಿ ಮಾಡಿ, ಅದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಿಯಾಯೋಜನೆ ರೂಪಿಸಿದ್ದಾರೆ. ಎಸ್‌.ಪಿ. ಬಾಡಗಂಡಿ, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ

ರಂಗಪ್ಪ ಗಧಾರ

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.