ಜ.1ರಿಂದ ಸರ್ಕಾರಿ ಶಾಲೆ ಪುನಾರಂಭ: ಜಿಲ್ಲಾಧಿಕಾರಿ

Team Udayavani, Dec 25, 2020, 3:29 PM IST

ಜ.1ರಿಂದ ಸರ್ಕಾರಿ ಶಾಲೆ ಪುನಾರಂಭ: ಜಿಲ್ಲಾಧಿಕಾರಿ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಜ.1ರಿಂದ ಸರ್ಕಾರಿ ಶಾಲೆಗಳ ಎಸ್ಸೆಸ್ಸೆಲ್ಸಿ ತರಗತಿಗಳು ಪ್ರಾರಂಭವಾಗಲಿದ್ದು, ಕೋವಿಡ್‌-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಜತೆಗೆ ಪ್ರತಿಯೊಂದು ಶಾಲೆಗಳ ಕೊಠಡಿಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್‌ ಮಾಡ  ಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ, ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣ ದಲ್ಲಿ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪಠ್ಯಕ್ರಮದಸಿದ್ಧತೆ ಹಾಗೂ ಜನವರಿ 1ರಿಂದ ಶಾಲೆಗಳಪ್ರಾರಂಭ ಸಂಬಂಧ ಗುರುವಾರ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರೊಂದಿಗೆ ನಡೆದ ಕಾರ್ಯಾಗಾರದಲ್ಲಿ ಮಾತನಾಡಿ, ಆಯಾ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರುಪ್ರತಿಯೊಂದು ಮಗುವಿನ ಆರೋಗ್ಯದ ಬಗ್ಗೆಕಾಳಜಿ ವಹಿಸಬೇಕು. ಇದು ಆಯಾ ಶಾಲೆಗಳ ಜವಾಬ್ದಾರಿಯಾಗಿದೆ ಎಂದರು. ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮಸ್ಥಾನವನ್ನು ಹಾಗೆಯೇ ಉಳಿಸಿಕೊಳ್ಳಬೇಕು ಎಂದು ಸೂಚಿಸಿದರು.

ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡಿ: ಜಿಪಂ ಸಿಇಒ ಪಿ.ಶಿವಶಂಕರ್‌ ಮಾತನಾಡಿ, ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಸ್ಥಾನ ಉಳಿಸಿಕೊಳ್ಳುವುದು ಸವಾಲಿನ ಕೆಲಸ. ಇದನ್ನು ಶಾಲೆಗಳ ಮುಖ್ಯಸ್ಥರು ಬದ್ಧತೆಯಿಂದ ಮಾಡಿದರೆ ಮಾತ್ರ ಆ ಗೌರವ ಉಳಿಸಿಕೊಳ್ಳಲು ಸಾಧ್ಯ. ಜನವರಿಯಿಂದ ತರಗತಿಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದರು.

ಕಾರ್ಯಾಗಾರದಲ್ಲಿ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸುವ ಸಂಬಂಧ ಇಲಾಖೆ ರೂಪಿಸಿದ ವಿಷಯವಾರು ವಿಷಯ ಮಂಡಿಸಿದರು. ಇದೇ ಸಂದರ್ಭದಲ್ಲಿ ಗುಡಿಬಂಡೆ ತಾಲೂಕಿನ ಇಬ್ಬರು ಹಾಗೂಗೌರಿಬಿದನೂರು ತಾಲೂಕಿನ ಒಬ್ಬ ವಿದ್ಯಾರ್ಥಿ ನಿಯರಿಗೆ ಲ್ಯಾಪ್‌ಟಾಪ್‌ ವಿತರಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿ ರ್ದೇಕ ಎಸ್‌.ಜಿ.ನಾಗೇಶ್‌, ಜಿಲ್ಲೆಯ ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ತಜ್ಞರು, ಪರಿವೀಕ್ಷಕರು ಹಾಗೂ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

ಶಾಲೆಗೆ ಬರುವ ವಿದ್ಯಾರ್ಥಿಗಳ ಜೊತೆಗೆ ಎಲ್ಲಾ ಶಿಕ್ಷಕರೂ ಕೂಡ ಕೋವಿಡ್ ಟೆಸ್ಟ್‌ಮಾಡಿಸಿಕೊಳ್ಳಬೇಕು. ನೆಗೆಟಿವ್‌ವರದಿ ಬಂದವರು ಮಾತ್ರ ಶಾಲೆಗೆಹಾಜರಾಗಬೇಕು. ಮಕ್ಕಳ ಪೋಷಕರಿಂದ ಶಾಲೆಗೆ ಕಳುಹಿಸುವ ಬಗ್ಗೆ ಒಪ್ಪಿಗೆ ಪತ್ರ ಪಡೆದುಕೊಳ್ಳಬೇಕು. ಆರ್‌.ಲತಾ, ಜಿಲ್ಲಾಧಿಕಾರಿ

ಡಿಸೆಂಬರ್‌ 28, 29ರೊಳಗೆ ಎಲ್ಲಾ ಶಿಕ್ಷಕರು ಕೋವಿಡ್‌ಪರೀಕ್ಷೆ ಮಾಡಿಸಿಕೊಳ್ಳಬೇಕು. ಆನಂತರವಷ್ಟೇ ತರಗತಿಗಳಿಗೆ ಹಾಜರಾಗಬೇಕು. ಶಾಲೆಗಳಲ್ಲಿ ಸೋಂಕು ಪ್ರಕರಣಗಳು ಕಂಡುಬರದ ಹಾಗೆ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಪಿ.ಶಿವಶಂಕರ್‌, ಜಿಪಂ ಸಿಇಒ

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.