ಶರಣ ಮೇಳದಲ್ಲಿ ಹೆಚ್ಚು ಜನರು ಪಾಲ್ಗೊಳ್ಳಿ : ಗಂಗಾದೇವಿ

Team Udayavani, Dec 27, 2020, 5:11 PM IST

ಶರಣ ಮೇಳದಲ್ಲಿ ಹೆಚ್ಚು ಜನರು ಪಾಲ್ಗೊಳ್ಳಿ : ಗಂಗಾದೇವಿ

ಬೀದರ: ಬಸವಾದಿ ಶರಣರ ವಿಚಾರಗಳನ್ನು ಅರಿಯಲು ಪ್ರತಿಯೊಬ್ಬ ಬಸವ ಭಕ್ತರುಕೂಡಲಸಂಗಮದಲ್ಲಿ ಜ.12ರಿಂದ ಮೂರುದಿನಗಳ ಕಾಲ ನಡೆಯಲಿರುವ 34ನೇ ಶರಣ ಮೇಳದಲ್ಲಿ ಪಾಲ್ಗೊಳ್ಳಬೇಕು ಎಂದುಕೂಡಲಸಂಗಮ ಬಸವ ಧರ್ಮ ಪೀಠಾಧ್ಯಕ್ಷೆ ಜಗದ್ಗುರು ಮಾತೆ ಡಾ| ಗಂಗಾದೇವಿ ಹೇಳಿದರು.

ಶರಣ ಮೇಳದ ಪ್ರಚಾರಾರ್ಥ ನಗರದ ಬಸವ ಮಂಟಪದಲ್ಲಿ ನಡೆದ ಸಭೆಯಸಾನ್ನಿಧ್ಯವಹಿಸಿ ಮಾತನಾಡಿದ ಅವರು, ಶರಣರಒಂದೊಂದು ವಚನದಲ್ಲೂ ಅದ್ಭುತ ಜ್ಞಾನ ಅಡಗಿದೆ. ಆ ಜ್ಞಾನವನ್ನು ಪಡೆದುಕೊಂಡಾಗಲೇ ಶರಣನಾಗಲು ಸಾಧ್ಯವಿದೆ ಎಂದು ನುಡಿದರು.

33 ವರ್ಷಗಳಿಂದ ಶರಣ ಮೇಳಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗಿದೆ. ಈ ಬಾರಿಯ ಮೇಳಕ್ಕೆ ಕೊರೊನಾ ತೊಡಕಾಗಿದೆ. ಆದರೆ, ಬಸವಕಲ್ಯಾಣದಲ್ಲಿ ಈಗಾಗಲೇ ಕಲ್ಯಾಣ ಪರ್ವ ಕಾರ್ಯಕ್ರಮವನ್ನು ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಸರ್ಕಾರದನಿಯಮಗಳನ್ನು ಪಾಲಿಸುವ ಜತೆಗೆ ಶರಣಮೇಳವನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.  ಷಟ್‌ಸ್ಥಲ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ದಿ| ಮಾತೆಮಹಾದೇವಿ ಅವರ ನೇತೃತ್ವದಲ್ಲಿ 32 ಶರಣ ಮೇಳಗಳು ಅರ್ಥಪೂರ್ಣವಾಗಿ ನಡೆದಿವೆ. ಈ ಬಾರಿಯ ಮೇಳ ಮಾತೆ ಡಾ| ಗಂಗಾದೇವಿಅವರ ನೇತೃತ್ವದಲ್ಲಿ ನಡೆಯುತ್ತಿರುವ ಎರಡನೇ ಮೇಳವಾಗಿದೆ. ಪ್ರತಿ ಬಸವ ಭಕ್ತರು ಒಬ್ಬರು ಹೊಸಬರನ್ನು ಮೇಳಕ್ಕೆ ಕರೆದುಕೊಂಡು ಬರಬೇಕು ಎಂದು ಹೇಳಿದರು.

12ನೇ ಶತಮಾನದ ಶರಣ ಪರಂಪರೆಯನ್ನು 21ನೇ ಶತಮಾನದ ಜನಾಂಗಕ್ಕೆ ತಲುಪಿಸುವಲ್ಲಿ ಮಾತೆ ಮಹಾದೇವಿ ಅವರ ಕೊಡುಗೆ ಅನನ್ಯವಾಗಿದೆ. ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಸವ ತತ್ವ ಪ್ರಚಾರ ಮಾಡಿದ ಹಿರಿಮೆ ಅವರದ್ದಾಗಿದೆ. ಮಾತೆ ಡಾ|ಗಂಗಾದೇವಿ ಅವರು ಕೂಡ ಅವರದೇ ಮಾರ್ಗದಲ್ಲಿ ಸಾಗುತ್ತಿದ್ದಾರೆ. ಬಸವ ತತ್ವ ಪ್ರಚಾರಕ್ಕೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಶರಣ ಮೇಳವು ಪ್ರತಿ ವರ್ಷ ಶರಣ ಸಂಸ್ಕೃತಿ ಕುರಿತ ಚಿಂತನ ಮಂಥನಕ್ಕೆ ವೇದಿಕೆ ಒದಗಿಸುತ್ತಿದೆ. ವರ್ಷದಿಂದ ವರ್ಷಕ್ಕೆ ತನ್ನ ಖ್ಯಾತಿಯನ್ನು ಹೆಚ್ಚಿಸಿಕೊಳ್ಳುತ್ತಲೇ ನಡೆದಿದೆ. ಈ ಬಾರಿಯ ಮೇಳ ಕೂಡ ಸರ್ವ ರೀತಿಯಿಂದಲೂ ಯಶಸ್ವಿಯಾಗುವ ಸಂಪೂರ್ಣ ವಿಶ್ವಾಸ ಇದೆ ಎಂದು ಹೇಳಿದರು.

ಡಾ| ಮಹೇಶ ಬಿರಾದಾರ ಸಭೆಯನ್ನು ಉದ್ಘಾಟಿಸಿದರು. ಮಾತೆ ಸತ್ಯದೇವಿ, ಕುಶಾಲರಾವ್‌ ಪಾಟೀಲ ಖಾಜಾಪುರ, ಶೀಲಾ ಪಾಟೀಲ, ಶಿವರಾಜ ಪಾಟೀಲ ಅತಿವಾಳ,ಡಾ| ಶರಣಪ್ಪ ಜಹೀರಾಬಾದ್‌, ಶಂಕರೆಪ್ಪ ಪಾಟೀಲ ಜಹೀರಾಬಾದ್‌, ರಾಜೇಂದ್ರ ಜೊನ್ನಿಕೇರಿ, ವಕೀಲ ಗಂಗಶೆಟ್ಟಿ ಪಾಟೀಲ ಇದ್ದರು. ಕಲ್ಪನಾ ಸಾವಳೆ ಸ್ವಾಗತಿಸಿದರು. ಸುರೇಶಕುಮಾರ ಸ್ವಾಮಿ ನಿರೂಪಿಸಿದರು. ಮಹಾಲಿಂಗ ಸ್ವಾಮಿ ಚಟ್ನಳ್ಳಿ ವಂದಿಸಿದರು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.