670 ಮತಗಳ ಭಾರೀ ಅಂತರದಿಂದ ಗೆದ್ದ 24 ವರ್ಷದ ಯುವಕ

Team Udayavani, Dec 31, 2020, 3:03 PM IST

A 24-year-old young man who won by a huge margin of 670 votes

 ಲಕ್ಷ್ಮೇಶ್ವರ: ಹುಲ್ಲೂರ ಗ್ರಾಪಂ ವ್ಯಾಪ್ತಿಯ ನೆಲೂಗಲ್‌ ಗ್ರಾಮದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ 24 ವರ್ಷದ ದೇವೇಂದ್ರ ಲಮಾಣಿ 670 ಮತಗಳ ಹೆಚ್ಚಿನ ಅಂತರದ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ನೇರಾನೇರ ಸ್ಪರ್ಧೆ ಏರ್ಪಟ್ಟು 770 ಮತದಾನವಾಗಿದ್ದು, ಅದರಲ್ಲಿ 670 ಮತ ಈತನ ಪಾಲಾಗಿವೆ.

ಕೃಷಿ ಕುಟುಂಬದವರಾಗಿದ್ದು ಐಟಿಐ ಓದಿರುವ ಈತ ಸಾಮಾಜಿಕ ಸೇವೆ ಮಾಡುವ ಮನೋಭಾವ ಹೊಂದಿ ಚುನಾವಣೆಗೆ ಸ್ಪರ್ಧಿಸಿದ್ದ. ಇನ್ನು ಬಾಲೇಹೊಸೂರ ಗ್ರಾಪಂನಲ್ಲಿ ಸಹೋದರ ಸಂಬಂಧಿಗಳಾದ ನೀಲಪ್ಪ ಮಾಯಕೊಂಡ ಮತ್ತು ಶಿವಪುತ್ರಪ್ಪ ಮಾಯಕೊಂಡ ನಡುವೆ ನೇರ ಸ್ಪರ್ಧೆಏರ್ಪಟ್ಟು ನೀಲಪ್ಪ ಮಾಯಕೊಂಡ 2 ಮತಗಳ ಅಂತರದ ಗೆಲುವಾಗಿದೆ.

ಶಿಗ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಮತ್ತೂಬ್ಬ ಸದಸ್ಯರು 4 ಮತಗಳ ಅಂತರದ ಗೆಲುವು ಸಾಧಿಸಿದರು. ಇದನ್ನು ಪ್ರಶ್ನಿಸಿದ ಪ್ರತಿಸ್ಪರ್ಧಿಗಳು ಮರು ಎಣಿಕೆಗೆ ಒತ್ತಾಯಿಸಿದರು. ಆದರೆ ತಹಶೀಲ್ದಾರ್‌ ಸೇರಿ ಚುನಾವಣಾಧಿಕಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಲಿಲ್ಲ.

ಇದನ್ನೂ ಓದಿ:ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆ ಹತ್ಯೆ

ಶಿಗ್ಲಿ ಬಸ್ಯಾನ ಪತ್ನಿಗೆ ಗೆಲುವು: ಆಗಾಗ ರಾಜ್ಯದ ಜನರ ಗಮನ ಸೆಳೆಯುವ ಶಿಗ್ಲಿ ಬಸ್ಯಾ (ಬಸವರಾಜ್‌ ಗಡ್ಡಿ) ಅವರ ಮಡದಿ ಎರಡು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶಿಗ್ಲಿ ಗ್ರಾಪಂನ 1ನೇ ವಾರ್ಡ್‌ನಿಂದ ಪತ್ನಿ ಗುಲ್ಜಾರಾಬಾನು ಶೇಖ್‌ ಅವರನ್ನು ಕಣಕ್ಕಿಳಿಸಿದ್ದರು. ಯಾವ ಪಕ್ಷದವರೂ ಬೆಂಬಲ ನೀಡದ್ದರಿಂದ ಕಬ್ಬಿನ ರೈತ ಚಿತ್ರದಡಿ ಪಕ್ಷೇತರರಾಗಿ ಸ್ಪರ್ಧಿ ಗೆಲುವಿಗಾಗಿ ಮತಯಾಚನೆ ಮಾಡಿದ್ದರು. ಈ ವಾರ್ಡ್‌ನ ಮಹಿಳಾ ಅ ವರ್ಗದ ಮೀಸಲಾತಿಯಡಿ ಒಂದು ಸದಸ್ಯ ಸ್ಥಾನಕ್ಕೆ 3 ಜನ ಪ್ರತಿಸ್ಪರ್ಧಿಗಳಿದ್ದರು. ಕೇವಲ 2 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.