ಭರದ ಕಾಮಗಾರಿ: ಫೆಬ್ರವರಿ 15ರೊಳಗೆ ಪೂರ್ಣ ಸಾಧ್ಯತೆ

ಇಡೂರು ಕುಂಜ್ಞಾಡಿಯ ಯಮಗುಂಡಿ ಹೊಳೆಗೆ ಸೇತುವೆ

Team Udayavani, Jan 12, 2021, 2:20 AM IST

ಭರದ ಕಾಮಗಾರಿ: ಫೆಬ್ರವರಿ 15ರೊಳಗೆ ಪೂರ್ಣ ಸಾಧ್ಯತೆ

ಕುಂದಾಪುರ: ಇಡೂರು ಕುಂಜ್ಞಾಡಿ ಗ್ರಾಮದ ಯಮಗುಂಡಿ ಹೊಳೆಗೆ ಸೇತುವೆ ಮಂಜೂರಾಗಿ, ಅನುದಾನ ಮೀಸಲಿಟ್ಟಿದ್ದರೂ ಕೋವಿಡ್ ದಿಂದಾಗಿ ಕಾಮಗಾರಿ ಆರಂಭ ವಿಳಂಬವಾಗಿತ್ತು. ಕೊನೆಗೂ ಈ ಯಮಗುಂಡಿ ಹೊಳೆಗೆ ಸೇತುವೆ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು ಕಾಮಗಾರಿ ಭರದಿಂದ ಸಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಸಾಗಿದರೆ ಫೆಬ್ರವರಿ 15ರೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆಯಿದೆ.

ಕಳೆದ ವರ್ಷವೇ ಕಾಮಗಾರಿ ಆರಂಭಕ್ಕೆ ಎಲ್ಲ ತಯಾರಿ ನಡೆದಿದ್ದರೂ, ಇನ್ನೇನು ಕಾಮಗಾರಿಗೆ ಚಾಲನೆ ನೀಡಬೇಕು ಅನ್ನುವಷ್ಟರಲ್ಲಿ ಕೊರೊನಾ ಬಂದು ಲಾಕ್‌ಡೌನ್‌ ಘೋಷಣೆಯಾಗಿದ್ದರಿಂದ ಆ ಪ್ರಸ್ತಾವ ನನೆಗುದಿಗೆ ಬಿದ್ದಿತ್ತು. ಈಗ ಕಾಮಗಾರಿ ಆರಂಭಗೊಂಡಿದ್ದು ಈ ಭಾಗದ ಜನರ ದಶಕಕ್ಕೂ ಹೆಚ್ಚು ಕಾಲದ ಬೇಡಿಕೆಯೊಂದು ಈಡೇರುವ ಕಾಲ ಸನ್ನಿಹಿತವಾಗಿದೆ.

ಬೈಂದೂರು ವಿಧಾನಸಭಾ ಕ್ಷೇತ್ರದ ಇಡೂರು- ಕುಂಜ್ಞಾಡಿಯ ಮುಖ್ಯರಸ್ತೆಯಿಂದ ಕುಂಜ್ಞಾಡಿಗೆ ಹೋಗಲು ಯಮಗುಂಡಿ ಹೊಳೆ ದಾಟಿ ಹೋಗಬೇಕು. ಕುಂಜ್ಞಾಡಿ ಜನ ಮಳೆಗಾಲದಲ್ಲಿ ಸಂಪರ್ಕ ಕಡಿತದಿಂದ ಉದುರುಬೈಲು- ಮರಬೇರು ಸೇತುವೆ ಮೂಲಕ ಇಡೂರು ಸೇರಿ ಅಲ್ಲಿಂದ ಬೇರೆಡೆಗೆ ಸಂಚರಿಸಬೇಕಾಗಿದೆ. ಇದಲ್ಲದೆ ಇಡೂರು – ಕುಂಜ್ಞಾಡಿ ಸುತ್ತಮುತ್ತಲಿನ ಜನ ನಾಗೂರು, ಕಿರಿಮಂಜೇಶ್ವರ, ಕಾಲ್ತೋಡಿಗೆ ಸಂಚರಿಸಲು ಈ ಸೇತುವೆಯಾದರೆ ಬಹಳಷ್ಟು ಹತ್ತಿರವಾಗಲಿದೆ.

7-8 ವರ್ಷಗಳಿಂದ ಮನವಿ :

ಕಳೆದ 7-8 ವರ್ಷಗಳಿಂದ ಈ ಭಾಗದ ಜನರು ಸೇತುವೆಗಾಗಿ ಬೇಡಿಕೆ ಸಲ್ಲಿಸುತ್ತಲೇ ಇದ್ದರು. 2019ರ ನವೆಂಬರ್‌ನಲ್ಲಿ ಇಲ್ಲಿಗೆ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಮುತುವರ್ಜಿಯಲ್ಲಿ 1 ಕೋ.ರೂ. ವೆಚ್ಚದಲ್ಲಿ ವಾರಾಹಿ ಯೋಜನೆಯಡಿ ಸೇತುವೆ ಹಾಗೂ ರಸ್ತೆ ಮಂಜೂರಾಗಿತ್ತು.

ಕುಂಜ್ಞಾಡಿ ನಿವಾಸಿ, ಉದ್ಯಮಿಯಾಗಿರುವ ಆನಂದ ಶೆಟ್ಟಿ 8 ವರ್ಷದಿಂದ ಪ್ರತಿ ಸಲ ಇಲ್ಲಿ ಮಳೆಗಾಲದಲ್ಲಿ ಹೊಳೆ ದಾಟಲು 12ರಿಂದ 18 ಸಾವಿರ ರೂ. ಖರ್ಚು ಮಾಡಿ ಮೋರಿಯನ್ನು ಹಾಕುತ್ತಿದ್ದರು. ಆದರೆ ಕಳೆದ ಸಲ ಹಾಕಿರುವ ಮೋರಿ ಈ ಬಾರಿ ಕೊಚ್ಚಿಕೊಂಡು ಹೋಗಿದ್ದು, ಇದರಿಂದ ಮಳೆಗಾಲದಲ್ಲಿ ಇಲ್ಲಿನ ಜನರು ಕೇವಲ ಒಂದೂವರೆ ಕಿ.ಮೀ. ಸಂಚಾರಕ್ಕೆ 4 ಕಿ.ಮೀ. ದೂರ ಸುತ್ತು ಬಳಸಿ ಸಂಚರಿಸುವಂತಾಗಿತ್ತು.

ಸುದಿನ ವರದಿ :

ಯಮಗುಂಡಿ ಹೊಳೆಗೆ ಸೇತುವೆ ಮಂಜೂರಾಗಿದ್ದರೂ ಕಾಮಗಾರಿ ಆರಂಭಗೊಳ್ಳುವುದು ವಿಳಂಬವಾದ ಬಗ್ಗೆ “ಉದಯವಾಣಿ ಸುದಿನ’ವು ಕಳೆದ ವರ್ಷದ ಜು. 14ರಂದು “ಯಮಗುಂಡಿ ಹೊಳೆಗೆ ಇನ್ನೂ ದೊರಕದ ಸೇತುವೆ ಭಾಗ್ಯ’ ಎನ್ನುವ ವಿಶೇಷ ವರದಿಯನ್ನು ಪ್ರಕಟಿಸಿತ್ತು.

ಡಿಸೆಂಬರ್‌ 20ರ ಅನಂತರ ಕಾಮಗಾರಿ ಆರಂಭಗೊಂಡಿದ್ದು, ಜನವರಿ ಕೊನೆ ಅಥವಾ ಫೆಬ್ರವರಿ 15 ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. 5 ಮೀ. ಅಗಲ ಹಾಗೂ 9 ಮೀ. ಉದ್ದದ ಸೇತುವೆಯೊಂದಿಗೆ 600 ಮೀ. ಉದ್ದದ ಕಾಂಕ್ರೀಟ್‌ ರಸ್ತೆ ಕೂಡ ನಿರ್ಮಾಣವಾಗಲಿದೆ. ಕಿರಣ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ವಾರಾಹಿ ನೀರಾವರಿ ನಿಗಮ

ಇಡೂರು – ಕುಂಜ್ಞಾಡಿ ಭಾಗದ ಬಹು ವರ್ಷಗಳ ಬೇಡಿಕೆ ಇದಾಗಿದ್ದು, ಕಳೆದ ಚುನಾವಣೆ ಸಂದರ್ಭ ಇಲ್ಲಿಗೆ ಭೇಟಿ ಕೊಟ್ಟಾಗ ಸೇತುವೆಯ ಭರವಸೆ ನೀಡಿದ್ದೆ. ಅದೀಗ ಸಾಕಾರಗೊಳ್ಳುತ್ತಿದೆ. ಈ ವರ್ಷದಲ್ಲಿ ಸೇತುವೆ ಹಾಗೂ ರಸ್ತೆ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಮುಕ್ತವಾಗಲಿದೆ. ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.