ಹೈಕೋರ್ಟ್‌ನಲ್ಲಿ ಸಿಕ್ತು ಲೆಕ್ಕ ಶಾಸ್ತ್ರಕ್ಕೆ  ಶೇ. 100 ಅಂಕ!

ರಾಜ್ಯ ಹೈಕೋರ್ಟ್‌ ಆದೇಶಿಸಿದ ಕಾರಣ ಪಿ.ಯು.ಬೋರ್ಡ್‌ ಎಣಿಕೆ ಸರಿಪಡಿಸಿ ಲೆಕ್ಕಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ನೀಡಿದೆ.

Team Udayavani, Jan 23, 2021, 6:54 PM IST

A22dharini

ಹೊಸನಗರ: ಹೊಸನಗರ ಸರ್ಕಾರಿ ಜ್ಯೂನಿಯರ್‌ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ವಾಣಿಜ್ಯ ವಿಭಾಗದಲ್ಲಿ ಶೇ. 96 ಅಂಕ ಪಡೆದ ಧಾರಿಣಿ ಎಚ್‌. ಆರ್‌. ಅವರಿಗೆ ಲೆಕ್ಕಶಾಸ್ತ್ರದಲ್ಲಿ ಎಣಿಕೆ ತಪ್ಪಾಗಿರುವುದನ್ನು ಸರಿಪಡಿಸುವಂತೆ ರಾಜ್ಯ ಹೈಕೋರ್ಟ್‌ ಆದೇಶಿಸಿದ ಕಾರಣ ಪಿ.ಯು.ಬೋರ್ಡ್‌ ಎಣಿಕೆ ಸರಿಪಡಿಸಿ ಲೆಕ್ಕಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ನೀಡಿದೆ.

ಇದನ್ನೂಓದಿ·ಗೋಲ್ಡನ್‌ ಟೆಂಪಲ್… ಇಂಥ “ಅಮೃತ’ವನ್ನು ಸವಿಯಲು ಹಿಂದೆಮುಂದೆ ನೋಡಬೇಕಿಲ್ಲ!

ಕಳೆದ ಮಾರ್ಚ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಲೆಕ್ಕಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ನಿರೀಕ್ಷಿಸಿ 99 ಅಂಕ ಪಡೆದಿದ್ದ ಧಾರಿಣಿ ಒಂದು ಅಂಕ ಎಲ್ಲಿ ತಪ್ಪಾಗಿದೆ ನೋಡಬೇಕೆಂಬ ಕಾರಣಕ್ಕೆ ಹಣ ಕಟ್ಟಿ ಉತ್ತರ ಪತ್ರಿಕೆ ತರಿಸಿದ್ದಳು. ಉತ್ತರ ಪತ್ರಿಕೆ ನೋಡಿದಾಗ ಹೆಚ್ಚುವರಿ ಪ್ರಶ್ನೆಗಳಿಗೆ ಉತ್ತರ ಬರೆದಲ್ಲಿ ಹೆಚ್ಚು ಅಂಕ ಬಂದ ಉತ್ತರವನ್ನು ಪರಿಗಣಿಸಬೇಕೆಂಬ ನಿಯಮಕ್ಕೆ ಬದಲಾಗಿ ಕಡಿಮೆ ಅಂಕವನ್ನು ಪರಿಗಣಿಸಿದ ಪರಿಣಾಮ ನೂರರ ಬದಲು 99 ಅಂಕ ಬಂದಿತ್ತು. ಇದನ್ನು ಉಲ್ಲೇಖೀಸಿ ಸರಿಪಡಿಸುವಂತೆ ಕಾಲೇಜಿನ ಮೂಲಕವೇ ಪಿ.ಯು.ಬೋರ್ಡ್ ಮನವಿ ಮಾಡಲಾಗಿತ್ತು. ಎರಡನೇ ಬಾರಿ ನೂರರ ಬದಲು 88 ಅಂಕ ಬಂದಿತ್ತು. ಇದನ್ನು ನೋಡಿದಾಗ ಒಂದು ಉತ್ತರವನ್ನೇ ಪರಿಗಣಿಸದ ಕಾರಣ ಮತ್ತೆ ಪಿ.ಯು.ಬೋರ್ಡ್‌ಗೆ ಮನವಿ ಮಾಡಲಾಗಿತ್ತು. ಆಗಲೂ 88 ಅಂಕವೇ ಬಂತು. ಇದರ ಕುರಿತು ಕೇಳಿದಾಗ ಎರಡನೇ ಬಾರಿ ಮೂರು ಜನ ತಜ್ಞರು ಎಣಿಕೆ ಮಾಡಿದ್ದು ಅದನ್ನು ಬದಲಾಯಿಸುವಂತಿಲ್ಲವೆಂಬ ಉತ್ತರ ಬಂತು. ತೀವ್ರ ಕೋವಿಡ್‌ ಆತಂಕದ ಆ ದಿನಗಳಲ್ಲೂ ವಾಹನ ಮಾಡಿಕೊಂಡು ಬೆಂಗಳೂರಿಗೆ ಹೋಗಿ ಪಿ.ಯು. ಬೋರ್ಡಿಗೆ ಸಂಬಂಧಿಸಿದ ಅಧಿ ಕಾರಿಗಳನ್ನೆಲ್ಲ ಭೇಟಿ ಆದರೂ ಎರಡನೇ ಬಾರಿ ಎಣಿಕೆ ಮಾಡಿದ ನಂತರ ಮತ್ತೆ ಬದಲಾಯಿಸಲು ಕಾನೂನಿನಲ್ಲಿ ಅವಕಾಶ ಇಲ್ಲವೆಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.

ಇದನ್ನು ಪ್ರಶ್ನಿಸಿ ಧಾರಿಣಿಯ ತಂದೆ ಹನಿಯ ರವಿ ಅವರು ರಾಜ್ಯ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಹೈಕೋರ್ಟ್‌ ಪೂರ್ಣ ಪರಿಶೀಲನೆಯ ನಂತರ ಎರಡು ವಾರಗಳೊಳಗೆ ಸರಿಪಡಿಸುವಂತೆ ಆದೇಶಿಸಿ ತಪ್ಪಿದ್ದಲ್ಲಿ ನಿಗದಿತ ದಿನದ ನಂತರ ವಾರಕ್ಕೆ ತಲಾ ಎರಡು ಸಾವಿರ ರೂ ನಂತೆ ಅರ್ಜಿದಾರರಿಗೆ ದಂಡ ನೀಡಬೇಕೆಂದು ಆದೇಶಿಸಿತು. ಈ ಪ್ರಕಾರ ಪಿ.ಯು. ಬೋರ್ಡ್‌ ಅಂಕವನ್ನು ಸರಿಪಡಿಸಿ ಧಾರಿಣಿಗೆ ಲೆಕ್ಕಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ನೀಡಿ ಹೊಸ ಅಂಕಪಟ್ಟಿ ನೀಡಲು ಅಣಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಧಾರಿಣಿ ನ್ಯಾಯಾಲಯ ನ್ಯಾಯ ಒದಗಿಸಿದ್ದಕ್ಕಾಗಿ ಸಂತೋಷ ವ್ಯಕ್ತಪಡಿಸಿ ತನಗೆ ಅಂಕ ವ್ಯತ್ಯಾಸ ಆದುದಕ್ಕೆ ಬೇಸರವಿಲ್ಲ. ಆದರೆ ಈ ರೀತಿ ಹೋರಾಟ ಮಾಡಲು ಸಾಧ್ಯವಾಗದ ಎಷ್ಟೋ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವಂತಾಗಬೇಕೆಂದರು.

ಅರ್ಜಿದಾರ ಹನಿಯರವಿ ಪ್ರತಿಕ್ರಿಯಿಸಿ ತನ್ನ ಮಗಳಿಗೆ ಅಂಕ ಹೆಚ್ಚು ಕಮ್ಮಿಯಾದರೆ ವಿದ್ಯಾಭ್ಯಾಸಕ್ಕೆ ಭಾರೀ ವ್ಯತ್ಯಾಸವೇನೂ ಆಗದು. ಆದರೆ ತಪ್ಪನ್ನು ಸರಿಪಡಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಅಧಿಕಾರಿಗಳ ಮಾತಿಗೋಸ್ಕರ ನ್ಯಾಯಾಲಯಕ್ಕೆ ಹೋಗಬೇಕಾಯಿತು. ಕೆಲವೇ ಕೆಲವು ಮೌಲ್ಯಮಾಪಕರ ಬೇಜವಾಬ್ದಾರಿಯಿಂದ ಎಷ್ಟೋ ಪ್ರತಿಭಾವಂತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಸರ್ಕಾರ ಈಗಲಾದರೂ ಈ ವಿಷಯದ ಕುರಿತು ಗಂಭೀರ ಚಿಂತನೆ ನಡೆಸಬೇಕೆಂದರು. ಅರ್ಜಿದಾರರ ಪರವಾಗಿ ಬಿ.ಎಸ್‌. ಪ್ರಸಾದ್‌ ಹನಿಯ ವಾದಿಸಿದ್ದರು.

ಇದನ್ನೂಓದಿಧರ್ಮಸ್ಥಳ ಗ್ರಾಮಾಭಿವೃದ್ಧಿ ಜನಸೇವಾ ಯೋಜನೆ·:

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.