ಎತ್ತಿನಹೊಳೆ ಕಾಮಗಾರಿ ಸ್ಥಳಕ್ಕೆ ಸಚಿವದ್ವಯರ ಭೇಟಿ

Team Udayavani, Jan 23, 2021, 8:16 PM IST

Minister’s visit to the etthinhole works place

ಸಕಲೇಶಪುರ: ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆ ಕಾಮಗಾರಿ ಸ್ಥಳಕ್ಕೆ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ, ಸಣ್ಣ ನೀರಾವರಿ ಸಚಿವ ಸಿ.ಪಿ.ಯೋಗೀಶ್ವರ್‌ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ತಾಲೂಕಿನ ಮೂಗಲಿ ಗ್ರಾಮದಲ್ಲಿರುವ ಶಂಕರನಾರಾಯಣ ಕನಕ್ಷನ್‌ (ಪ್ರೈ) ಕಂಪನಿ ಆಡಳಿತ ಕಚೇರಿಗೆ ಭೇಟಿ ನೀಡಿದ ಸಚಿವದ್ವಯರು ಈ ಸಂದರ್ಭದಲ್ಲಿ ಯೋಜನೆಯ ರೂಪುರೇಷೆ, ಸಾಧಕ-ಬಾಧಕಗಳ ಬಗ್ಗೆ ಅಧಿಕಾರಿಗಳ ಬಳಿ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡರು.

ನಂತರ ಹೆಬ್ಬನಹಳ್ಳಿ ಗ್ರಾಮದ ಸಮೀಪವಿರುವ ಯೋಜನೆಯ ಸುರಂಗ ಮಾರ್ಗದ ಬಳಿ ತೆರಳಿ ವೀಕ್ಷಣೆ ನಡೆಸಿದರು. ಇದೇ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಭುವನಾಕ್ಷ ಸಚಿವರಿಗೆ ಮನವಿ ಸಲ್ಲಿಸಿ ಎತ್ತಿನಹೊಳೆ ಯೋಜನೆಯ ಕಾಮಗಾರಿ ನಡೆಸುವ ವೇಳೆ ಡೈನಮೆಟ್‌ ಬಳಸಿ ಬಂಡೆ ಸಿಡಿಸಲಾಗುತ್ತಿದೆ. ಇದರಿಂದ 30 ಮನೆಗಳ ಗೋಡೆ ಬಿರುಕು ಬಿಟ್ಟು, ಕುಸಿಯುವ ಸ್ಥಿತಿಯಲ್ಲಿವೆ. ಆದ್ದರಿಂದ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಾರಕಿಹೊಳಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸೂಕ್ತ ಪರಿಹಾರ ನೀಡುವ ಬಗ್ಗೆ ಚಿಂತಿಸಲಾಗುವುದು ಎಂದು ಭರವಸೆ ನೀಡಿದರು.

ತಾ.ಪಂ ಸದಸ್ಯ ಸಿಮೆಂಟ್‌ ಮಂಜು ಮಾತನಾಡಿ, ಎತ್ತಿನಹೊಳೆ ಯೋಜನೆ ಹಾದು ಹೋಗುವ ಕುಂಬರ್ಡಿ, ನಡೆಹಳ್ಳಿ, ಮುಂತಾದ ಕಡೆ ಹಲವು ಬಡವರ ಮನೆಗಳಿಗೆ ದಾಖಲೆ ಇಲ್ಲ. ಅವರು ಇತ್ತ ಮನೆ ಖಾಲಿ ಮಾಡಲಾಗದೆ, ಅತ್ತ ಪರಿಹಾರ ಸಿಗದೆ ಪರದಾಡುತ್ತಿದ್ದಾರೆ. ಯೋಜನೆವ್ಯಾಪ್ತಿಯ ಕೆಲವು ಗ್ರಾಮಗಳಿಗೆ ಮೂಲ ಸೌಕರ್ಯ  ಇನ್ನೂ ಒದಗಿಸಿಲ್ಲ ಎಂದರು.

ಇದನ್ನೂ ಓದಿ:ಉಡುಪಿ ಜಿಲ್ಲೆಯಲ್ಲಿ ತುರ್ತು ಸೇವೆಗೆ 112ಕ್ಕೆ ಕರೆ ಮಾಡಿ : ಪೊಲೀಸ್‌ ವರಿಷ್ಠಾಧಿಕಾರಿ ಸೂಚನೆ

ಈ ಕುರಿತು ಪ್ರತಿಕ್ರಿಯಿಸಿದ ಜಲ ಸಂಪನ್ಮೂಲ ಸಚಿವರು, ಈ ಕುರಿತು ಕೂಡಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಯೋಜನೆಯ ಅಭಿಯಂತರ ಜಯಣ್ಣಗೆ ಆದೇಶಿಸಿದರು. ಮಾಜಿ ಶಾಸಕ ಎಚ್‌.ಎಂ ವಿಶ್ವನಾಥ್‌, ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌, ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಕಾರ್ಯಪಾಲಕ ಎಂಜಿನಿಯರ್‌ ಜಯಣ್ಣ,ಡಿವೈಎಸ್‌ಪಿ ಬಿ.ಆರ್‌.ಗೋಪಿ, ಯೋಜನೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.