ಸರಕಾರಿ ಪ್ರೌಢಶಾಲೆ ಸಮಗ್ರ ಅಭಿವೃದ್ಧಿಗೆ ಯತ್ನ


Team Udayavani, Jan 24, 2021, 12:45 PM IST

Attempts at holistic development Government High School

ಮಹಾಲಿಂಗಪುರ: ತೇರದಾಳ ಶಾಸಕ ಸಿದ್ದು ಸವದಿ ಮಹಾಲಿಂಗಪುರ ಸರಕಾರಿ ಪ್ರೌಢಶಾಲೆಯ ಸಮಸ್ಯೆಯನ್ನು ನನ್ನ ಗಮನಕ್ಕೆ ತಂದಿದ್ದಾರೆ. ಈ ಸರಕಾರಿ ಪ್ರೌಢಶಾಲೆಗೆ ಅವಶ್ಯವಿರುವ ಅಗತ್ಯ ಅಭಿವೃದ್ಧಿ ಕಾರ್ಯ ಶೀಘ್ರ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶಕುಮಾರ ಹೇಳಿದರು.

ಪಟ್ಟಣದ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಶಾಸಕ ಸಿದ್ದು ಸವದಿಯವರಿಂದ ಸಮಸ್ಯೆ ಆಲಿಸಿ ಮಾತನಾಡಿದ ಅವರು, ವಾರದೊಳಗೆ ಶಿಕ್ಷಣ ಇಲಾಖೆ ಆಯುಕ್ತರು ಶಾಲೆಗೆ ಭೇಟಿ ನೀಡಿ, ಇಲ್ಲಿನ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಪಡೆದುಕೊಳ್ಳುತ್ತಾರೆ. ನಂತರ ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಶಾಲೆಗೆ ಕಾಂಪೌಂಡ್‌, ಹೆಚ್ಚುವರಿ ಕೊಠಡಿ, ಶೌಚಾಲಯ, ಸುಸಜ್ಜಿತ ಬಿಸಿಯೂಟದ ಕೊಠಡಿ ಸೇರಿದಂತೆ ಶಾಲೆಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

ಶಾಸಕ ಸಿದ್ದು ಸವದಿ ಮಾತನಾಡಿ, ಶಾಲೆಯಲ್ಲಿ ಒಟ್ಟು 600ಕ್ಕೂ ಅಧಿ ಕ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಶಾಲೆಗೆ ಸುಮಾರು 10 ಕೊಠಡಿಗಳ ಕೊರತೆ ಹಾಗೂ ಶಿಕ್ಷಕರ ಕೊರತೆ ಇದ್ದು, ಮಳೆಗಾಲದಲ್ಲಿ ಶಾಲಾ ಆವರಣವು ಜವಳು ನೀರಿನಿಂದ ತುಂಬಿ ಮಕ್ಕಳ ಆಟಕ್ಕೆ ತೊಂದರೆಯಾಗುತ್ತಿದೆ. ಶಾಲೆಗೆ ಕಾಂಪೌಂಡ್‌ ಇಲ್ಲದ ಕಾರಣ ಕಾರಣ ಖಾಸಗಿ ವಾಹನಗಳ ನಿಲುಗಡೆ ಸೇರಿದಂತೆ ಅನೈತಿಕ ಚಟುವಟಿಕೆಗಳಿಗೆ ತಾಣವಾಗುತ್ತಿದೆ. ಜತೆಗೆ ಚರಂಡಿಯ ಪಕ್ಕದಲ್ಲೇ ಇರುವ ಶೌಚಾಲಯ ಕಟ್ಟಡವನ್ನೇ ಬಿಸಿಯೂಟದ ಕೊಠಡಿಯಾಗಿ ಮಾರ್ಪಡಿಸಿದ ಕಾರಣ, ಅಲ್ಲಿ ಗಬ್ಬೆದ್ದು ವಾಸನೆ ಬರುತ್ತಿರುವ ಕಾರಣ ಮಕ್ಕಳು ಬಿಸಿಯೂಟ ಸವಿಯಲು ಹಿಂಜರಿಯುತ್ತಿರುವ ಕಾರಣ, ಸಚಿವರು ಸುಸಜ್ಜಿತ ಬಿಸಿಯೂಟ ಕೊಠಡಿ ಮತ್ತು ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಬೇಕು ಎಂದರು.

ಸರಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಚಂದ್ರವ್ವ ಗೌಡರ ಸಚಿವರಿಗೆ ಮನವಿ ಸಲ್ಲಿಸಿ, ಅಮಾನತುಗೊಂಡ ಶಾಲೆಯ ಹಿಂದಿನ ಮುಖ್ಯಶಿಕ್ಷಕ ಎಸ್‌.ವೈ. ರಾಠೊಡ ಅವರು ಶಾಲೆಯ ಅನುದಾನವನ್ನು ದುರ್ಬಳಕೆ ಮತ್ತು ಮಕ್ಕಳಿಂದ ಹೆಚ್ಚಿನ ಹಣ ವಸೂಲಿ ಮಾಡಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಈ ಪ್ರಕರಣವನ್ನು ಶಿಕ್ಷಣ ಇಲಾಖೆಯ ಅಧಿ ಕಾರಿಗಳು ಈ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಅಮಾನತುಗೊಂಡ ಎಸ್‌.ವೈ.ರಾಠೊಡ ಅವರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಒಳಪಡಿಸಲು ಒತ್ತಾಯಿಸಿದರು.

ಇದನ್ನೂ ಓದಿ:ದೆಹಲಿಯ ಖಾನ್ ಮಾರ್ಕೇಟ್ ಬಳಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ದೇಶದ್ರೋಹಿಗಳು

ಶಿಕ್ಷಣ ಇಲಾಖೆಯ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಡಿಡಿಪಿಐ ಎಸ್‌.ಎಸ್‌.ಬಿರಾದರ, ವಿಷಯ ಪರಿವೀಕ್ಷಕ ಬಾಳಿಕಾಯಿ, ಶಿಕ್ಷಣ ಸಂಯೋಜಕ ಎಸ್‌.ಎಸ್‌.ತಾರಾಪುರಮಠ, ಸಿಆರ್‌ಪಿ ಎಸ್‌. ಎನ್‌.ಬ್ಯಾಳಿ, ಜಿಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ, ಬಸನಗೌಡ ಪಾಟೀಲ, ಪ್ರಕಾಶ ಅರಳಿಕಟ್ಟಿ, ಅಶೋಕಗೌಡ ಪಾಟೀಲ, ಜಿ.ಎಸ್‌.ಗೊಂಬಿ, ಈರಪ್ಪ ದಿನ್ನಮನಿ, ಶಂಕರಗೌಡ ಪಾಟೀಲ, ಶಿವಬಸು ಗೌಂಡಿ, ಪ್ರಶಾಂತ ಮುಕ್ಕೆನ್ನವರ, ಪುರಸಭೆ ಮುಖ್ಯಾ ಧಿಕಾರಿಎಚ್‌.ಎಸ್‌.ಚಿತ್ತರಗಿ, ಸದಸ್ಯರಾದ ರವಿ ಜವಳಗಿ, ಬಸವರಾಜ ಹಿಟ್ಟಿನಮಠ, ಶೇಖರ ಅಂಗಡಿ, ಶಾಲೆಯ ಮುಖ್ಯಶಿಕ್ಷಕಿ ಎನ್‌.ಎಂ. ಚೌರ ಇದ್ದರು.

 

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.