7597 ಮತದಾರರಿಗೆ ಕಾರ್ಡ್‌ ವಿತರಣೆ

ಅತ್ಯುತ್ತಮ ಕಾರ್ಯನಿರ್ವಹಿಸಿದ ಇಎಲ್‌ಸಿ ಶಾಲೆ ಮತ್ತು ಕಾಲೇಜುಗಳನ್ನು ಸನ್ಮಾನಿಸಲಾಗುತ್ತಿದೆ.

Team Udayavani, Jan 25, 2021, 6:34 PM IST

7597 ಮತದಾರರಿಗೆ ಕಾರ್ಡ್‌ ವಿತರಣೆ

ಯಾದಗಿರಿ: ಭಾರತ ಚುನಾವಣಾ ಆಯೋಗವು ಪ್ರತಿ ವರ್ಷ ಜ.25ಕ್ಕೆ ರಾಷ್ಟ್ರೀಯ ಮತದಾರರ ದಿನವನ್ನು ಜಿಲ್ಲಾ ಹಂತ, ತಾಲೂಕು ಹಾಗೂ ಎಲ್ಲ ಮತಗಟ್ಟೆಗಳಲ್ಲಿ ಆಚರಿಸಲಾಗುತ್ತಿದ್ದು, ಬೆಳಗ್ಗೆ 11 ಗಂಟೆಗೆ ಚುನಾವಣಾ ಆಯೋಗ ಸಿದ್ಧಪಡಿಸಿರುವ ಪ್ರತಿಜ್ಞಾ ವಿಧಿಯನ್ನು ಸರ್ಕಾರದ ಎಲ್ಲ ಇಲಾಖೆಗಳ ಸಿಬ್ಬಂದಿ ಮತ್ತು ಅಧಿಕಾರಿಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಸ್ವೀಕರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್‌. ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ ಅಂತಿಮ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ 18 ವರ್ಷ
ತುಂಬಿದ 7597 ಯುವ ಮತದಾರರು ಪ್ರಥಮವಾಗಿ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವುದರಿಂದ ಜಿಲ್ಲಾ ಮತ್ತು ತಾಲೂಕು ಹಂತದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಎಪಿಕ್‌ ಕಾರ್ಡ್‌ಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಸ್ವೀಪ್‌ ಚಟುವಟಿಕೆಗಳ ಮೂಲಕ ಶಾಲಾ- ಕಾಲೇಜುಗಳಲ್ಲಿ ಮತದಾನದ ಮಹತ್ವ ಮತ್ತು ಜಾಗೃತಿಗಾಗಿ ಕೈಗೊಂಡ ತಾಲೂಕು-ಜಿಲ್ಲಾ ಹಂತದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು.

ಪ್ರತಿ ವಿಧಾನಸಭಾ ಕ್ಷೇತ್ರವಾರು ಉತ್ತಮವಾಗಿ ಕಾರ್ಯನಿರ್ವಹಿದ ಬಿಎಲ್‌ಒ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಬೇಕಾಗಿರುವುದರಿಂದ ಮತಕ್ಷೇತ್ರವಾರು ಒಬ್ಬ ಉತ್ತಮ ಕೆಲಸ ನಿರ್ವಹಿಸಿದ ಬಿಎಲ್‌ಒ ಅವರಿಗೆ ಹಾಗೂ ಅತ್ಯುತ್ತಮ ಕಾರ್ಯನಿರ್ವಹಿಸಿದ ಇಎಲ್‌ಸಿ ಶಾಲೆ ಮತ್ತು ಕಾಲೇಜುಗಳನ್ನು ಸನ್ಮಾನಿಸಲಾಗುತ್ತಿದೆ. ಚುನಾವಣಾ ಆಯೋಗ ಆಧುನಿಕ ಚುನಾವಣಾ ಪರಿಸರ ವ್ಯವಸ್ಥೆಯತ್ತ, ಒಂದು ಹೆಜ್ಜೆ ಮುಂದಿಟ್ಟುಕೊಂಡು ಆಯೋಗವು ಹೊಸದಾಗಿ ದಾಖಲಾಗಿರುವ ಮತದಾರರು ತಮ್ಮ ಇ-ಎಪಿಕ್‌  ಕಾರ್ಡ್‌ನ್ನು ಜ.25ರಿಂದ 31ರವರೆಗೆ ಹಾಗೂ ಫೆ.1 ರಿಂದ ಎಲ್ಲ ಮತದಾರರು ಮೊಬೈಲ್‌ ಮೂಲಕ ECI/CEO website
ನಲ್ಲಿ ಸೃಜಿಸಲಾಗಿರುವ ಇ-ಎಪಿಕ್‌ನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಅಥವಾ ಕಂಪ್ಯೂಟರ್‌ನಲ್ಲಿ ಇ-ಎಪಿಕ್‌ನ್ನು ಸ್ವಯಂ ಮುದ್ರಿಸಿಕೊಳ್ಳಬಹುದು ಎಂದು
ತಿಳಿಸಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.