ರೈತರ ಸಮಸ್ಯೆಗೆ ಶೀಘ್ರ ಪರಿಹಾರ: ಸಿ.ಸಿ. ಪಾಟೀಲ

Team Udayavani, Jan 27, 2021, 3:09 PM IST

A quick solution to the farmers’ problem

ಗದಗ: ಕೇಂದ್ರ ಮತ್ತು ರಾಜ್ಯ ಸರಕಾರಗಳು ರೈತರ ಪರವಾಗಿದ್ದು, ಯಾವ ಸರಕಾರವೂ ರೈತರ ಹೋರಾಟವನ್ನು ಹತ್ತಿಕ್ಕುತ್ತಿಲ್ಲ. ರೈತರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಭರವಸೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರಕಾರ ಪ್ರಾರಂಭದಿದಂಲೂ ಸಾಕಷ್ಟು ಪ್ರಕೃತಿ ವಿಕೋಪಗಳನ್ನು ಎದುರಿಸಿ ಹಾನಿಗೊಳದ ರಸ್ತೆ, ತೊಂದರೆಗೊಳಗಾದ ಜನ ಹಾಗೂ ಪ್ರಾಣಿ ಸಂಕುಲಕ್ಕೆ ಸೂಕ್ತ ರಕ್ಷಣೆ ಕೊಡುವ ಕೆಲಸ ಮಾಡಿದೆ. ಅಧಿಕಾರ ವಹಿಸಿಕೊಂಡ ತಕ್ಷಣ ಭೀಕರ ಪ್ರವಾಹ, ಕೋವಿಡ್ ಮಾಹಾಮಾರಿ ಇವುಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ.

ಕೋವಿಡ್‌ ನಿಯಂತ್ರಣದಲ್ಲಿ ಎಲ್ಲ ಜನಪ್ರತಿನಿಧಿಗಳು, ಮುಖಂಡರು ಪಕ್ಷಭೇದವಿಲ್ಲದೆ ಕಾಲಕಾಲಕ್ಕೆ ಜಿಲ್ಲಾಡಳಿತಕ್ಕೆ ಮಾರ್ಗದರ್ಶನ ಸಲಹೆ ನೀಡಲಾಗಿದೆ. ಅದರ ಫಲವಾಗಿ ಕೊವೀಡ್‌-19 ಎದುರಿಸುವಲ್ಲಿ ಗದಗ ಜಿಲ್ಲೆಯು ಪ್ರಥಮ ಸ್ಥಾನದಲ್ಲಿದೆ. ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸಿದ ಕೊರೊನಾ ಸೇನಾನಿಗಳ ಸೇವೆ ಅಭಿನಂದನೀಯ ಎಂದರು.

ಕೆಲ ತಿಂಗಳ ಹಿಂದೆ ಉಂಟಾದ ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು, ಜಿಲ್ಲೆಯ ಮುಖ್ಯ ರಸ್ತೆಗಳನ್ನು

ರಾಜ್ಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆ ಹಂತದಲ್ಲಿವೆ. ಜಿಲ್ಲೆಯಲ್ಲಿ ನೀರಾವರಿಗಾಗಿ ಸಾವಿರ ಕೋಟಿ ರೂ. ಬಿಡುಗಡೆಯಾಗಿದ್ದು, ಟೆಂಡರ್‌ಪ್ರಕ್ರಿಯೆ ಆರಂಭವಾಗಿದೆ.

ಜಿಲ್ಲೆಯ ಬೆಣ್ಣಿಹಳ್ಳದ ಪ್ರವಾಹ ಪ್ರತಿವರ್ಷ ಬರುತ್ತಿದ್ದು, ಈ ಭಾಗದ ಜನರಿಗೆ ಸಮಸ್ಯೆಯಾಗುತ್ತಿದೆ. ಅದರ ಸ್ವತ್ಛತಾ ಕಾರ್ಯಕ್ಕೆ ಹಣವನ್ನು ಬಿಡುಗಡೆ ಮಾಡಲು ನೀರಾವರಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೆಣ್ಣಿಹಳ್ಳ ತೆರವುಗೊಳಿಸುವ ಪ್ರಸ್ತಾವನೆ ಈಗಾಗಲೇ ನೀರಾವರಿ ನಿಗಮಕ್ಕೆ ಸಲ್ಲಿಸಲಾಗಿದೆ. ನೀರಾವರಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಬೆಣ್ಣಿಹಳ್ಳದ ಒತ್ತುವರಿಯನ್ನು ತೆರವುಗೊಳಿಸಿ, ಸ್ವತ್ಛತಾ ಕಾರ್ಯಗಳನ್ನು ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಟ್ರ್ಯಾಕ್ಟರ್‌ ಪರೇಡ್‌ ಬೆಂಬಲಿಸಿ ಪ್ರತಿಭಟನೆ

ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡ “ಎ’ ಮತ್ತು “ಬಿ’ ವಿಭಾಗದ ಮನೆಗಳಿಗೆ ಸರಕಾರ 5 ಲಕ್ಷ ರೂ. ನೆರವು ನೀಡಲಿದೆ. ಮೊದಲನೆ ಹಂತದ ಪ್ಲಿಂತ ಲೆವಲ್‌ ಮಟ್ಟದಲ್ಲಿರುವ ಮನೆಗಳಿಗೆ ಲಕ್ಷ ರೂ. ನೀಡಲಾಗಿದೆ. ಈಗ ಮುಂದಿನ ಹಂತದ ನಕ್ಷೆಗಳನ್ನು ದಾಖಲೆಗಳನ್ನು ಜಿಪಿಎಸ್‌ ಮೂಲಕ ಅಪ್‌ಲೋಡ್‌ ಮಾಡಿದರೆ, ಎರಡನೇ ಕಂತಿನ ಹಣ ಬಿಡುಗಡೆಯಾಗುತ್ತದೆ. ಅದಕ್ಕಾಗಿ ಫಲಾನುಭವಿಗಳು ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು ಎಂದು ಇದೇ ವೇಳೆ ಮನವಿ ಮಾಡಿದರು.

ಶಾಸಕ ಎಚ್‌.ಕೆ. ಪಾಟೀಲ, ಮಾಜಿ ಸಚಿವ ಎಸ್‌. ಎಸ್‌. ಪಾಟೀಲ, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ, ಜಿ.ಪಂ. ಅಧ್ಯಕ್ಷ ಈರಪ್ಪ ನಾಡಗೌಡ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರು, ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಮತ್ತಿತರರು ಇದ್ದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.