ಪಚ್ಚನಾಡಿ ಸಂತ್ರಸ್ತರಿಗೆ ಪರಿಹಾರ ನೀಡದ ಪಾಲಿಕೆ : ಹೈಕೋರ್ಟ್‌ ಅಸಮಾಧಾನ

Team Udayavani, Jan 29, 2021, 6:10 AM IST

ಪಚ್ಚನಾಡಿ ಸಂತ್ರಸ್ತರಿಗೆ ಪರಿಹಾರ ನೀಡದ ಪಾಲಿಕೆ : ಹೈಕೋರ್ಟ್‌ ಅಸಮಾಧಾನ

ಬೆಂಗಳೂರು: ಘನತ್ಯಾಜ್ಯ ಭೂಭರ್ತಿ ಘಟಕದಿಂದ ಉಂಟಾದ ಅನಾಹುತದಲ್ಲಿ ಸಂಕಷ್ಟಕ್ಕೊಳಗಾದ ಸಂತ್ರಸ್ತರಿಗೆ ನ್ಯಾಯಾಲಯದ ನಿರ್ದೇಶನದಂತೆ ಪರಿಹಾರ ವಿತರಿಸದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಪಚ್ಚನಾಡಿ, ಮಂದಾರ ಪ್ರದೇಶಗಳಲ್ಲಿ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಉಂಟಾಗಿರುವ ಅನಾಹುತದ ವಿಚಾರವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಈ ವೇಳೆ ಪಾಲಿಕೆ ಸಲ್ಲಿಸಿದ್ದ ವರದಿ ಪರಿಶೀಲಿಸಿದ ನ್ಯಾಯಪೀಠ ಆಯುಕ್ತರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಘಟನೆಯಲ್ಲಿ ನಷ್ಟ ಅನುಭವಿಸಿರುವ ಸಂತ್ರಸ್ತರಿಗೆ ಪರಿಹಾರ ನೀಡಲು ನ್ಯಾಯಾಲಯ ಜ. 21ರಂದು ಆದೇಶಿಸಿದೆ. ಆದರೂ, ಆಯುಕ್ತರು ಪರಿಹಾರ ವಿತರಿಸಿಲ್ಲ. ಪರಿಹಾರ ಪಡೆದುಕೊಳ್ಳಬೇಕಿರುವ ಸಂತ್ರಸ್ತರ ಕುರಿತೂ ಸ್ಪಷ್ಟ ಮಾಹಿತಿ ನೀಡಿಲ್ಲ. ಈ ರೀತಿ ನಡೆದುಕೊಳ್ಳುವುದನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಲಕ್ಷ ರೂ. ದಂಡದ ಎಚ್ಚರಿಕೆ
ಇದೇ ವೇಳೆ ಅರ್ಜಿದಾರರ ಪರ ವಕೀಲ ಶ್ರೀಧರ ಪ್ರಭು ನ್ಯಾಯಪೀಠಕ್ಕೆ ಮಾಹಿತಿ ನೀಡಿ, ಸಂತ್ರಸ್ತರಿಗೆ ಈವರೆಗೂ ಪರಿಹಾರ ನೀಡಿಲ್ಲ. ಪರಿಹಾರ ನೀಡುವ ಕುರಿತು ನಮ್ಮೊಂದಿಗೆ ಚರ್ಚಿಸಿಲ್ಲ ಎಂದರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ಪಾಲಿಕೆ ಪರ ವಕೀಲರಿಗೆ ಸೂಚನೆ ನೀಡಿ, ನಿಮ್ಮ ಆಯುಕ್ತರಿಗೆ ಕರೆ ಮಾಡಿ ಇಂದು ಅಥವಾ ನಾಳೆಯೊಳಗೆ ಪರಿಹಾರ ವಿತರಿಸುವ ಕುರಿತು ನಿಲುವು ಪಡೆದು ತಿಳಿಸಿ. ಉದಾಸೀನವಾಗಿ ವರ್ತಿಸಿದರೆ ನ್ಯಾಯಾಲಯ 1 ಲಕ್ಷ ರೂ. ದಂಡ ವಿಧಿಸಲಿದೆ ಎಂದು ಎಚ್ಚರಿಕೆ ನೀಡಿ, ಕೆಲ ಕಾಲ ವಿಚಾರಣೆ ಮುಂದೂಡಿತು.

ಮತ್ತೆ ವಿಚಾರಣೆ ಆರಂಭವಾದಾಗ ಪಾಲಿಕೆ ಪರ ವಕೀಲರು ಪರಿಹಾರ ವಿತರಿಸುವ ಭರವಸೆ ನೀಡಿದರು. ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಘಟನೆಯಲ್ಲಿ 102 ಮಂದಿ ಸಂತ್ರಸ್ತರಿದ್ದು ಪಾಲಿಕೆ ಸಂತ್ರಸ್ತರಿಗೆ ಪರಿಹಾರ ನೀಡಿ ಆ ಕುರಿತ ದಾಖಲೆಗಳನ್ನು ಅರ್ಜಿದಾರರಾದ ಕಾನೂನು ಸೇವಾ ಸಮಿತಿಗೆ ಸಲ್ಲಿಸಲಿ. ಈ ದಾಖಲೆಗಳನ್ನು ಅರ್ಜಿದಾರರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು ಪರಿಶೀಲಿಸಿ, ಪರಿಹಾರ ನೀಡಿರುವ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿ ಎಂದು ನಿರ್ದೇಶಿಸಿತು.

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.