ಸಮ್ಮೇಳನದಲ್ಲಿ ಮಹಿಳಾ ಸುರಕ್ಷತೆ ಮುಖ್ಯ


Team Udayavani, Jan 29, 2021, 6:13 PM IST

Women’s safety is important at the conference

ಹಾವೇರಿ: ಹಾವೇರಿಯಲ್ಲಿ ಫೆ. 26 ರಿಂದ ಮೂರು ದಿನಗಳ ಕಾಲ ಜರುಗಲಿರುವ 86ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳೆಯರು ಸಕ್ರಿಯವಾಗಿ ಭಾಗವಹಿಸಿ ಮಹಿಳಾ ಸುರಕ್ಷತೆ, ಮಹಿಳೆಯರ ಸೌಲಭ್ಯಗಳ ಕುರಿತಂತೆ ಜಾಗೃತಿ ವಹಿಸಬೇಕೆಂದು ಸಮ್ಮೇಳನದ ಮಹಿಳಾ ಸಮಿತಿ ಅಧ್ಯಕ್ಷೆ ಹಾಗೂ ಜಿಪಂ ಉಪಾಧ್ಯಕ್ಷೆ ರಾಜೇಶ್ವರಿ ಕಲ್ಲೇರ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಾಹಿತ್ಯ ಸಮ್ಮೇಳನದ ಮಹಿಳಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಸತಿ ಪ್ರದೇಶ, ಊಟದ ಪ್ರದೇಶಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವಂತೆ ಸಲಹೆ ನೀಡಿದರು. ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸದಸ್ಯರು ಮಾತನಾಡಿ, ಸಮ್ಮೇಳನದ ಗೋಷ್ಠಿಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯ ಮಹಿಳಾ ಸಾಹಿತಿಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕು.

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹಿಳೆಯರಿಗೆ ಸಮ್ಮೇಳನದಲ್ಲಿ ಸನ್ಮಾನಕ್ಕೆ ಅವಕಾಶ ಕಲ್ಪಿಸಬೇಕೆಂದರು. ರಾಜ್ಯದ ವಿವಿಧ ಭಾಗಗಳಿಂದ ಸಮ್ಮೇಳನಕ್ಕೆ ಆಗಮಿಸುವ ಮಹಿಳೆಯರಿಗೆ ಹೆಚ್ಚಿನ ಸುರಕ್ಷತೆಯ ಜೊತೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಉತ್ತಮ ವಸತಿ ಸೌಕರ್ಯ, ಉತ್ತಮ ಸಾರಿಗೆ ವ್ಯವಸ್ಥೆ, ಸುರಕ್ಷತೆಗೆ ಮಹಿಳಾ ಪೊಲೀಸ್‌ ಪೇದೆಗಳ ನೇಮಕ, ಪ್ರತ್ಯೇಕ ಊಟದ ಕೌಂಟರ್‌ಗಳನ್ನು ತೆರೆಯುವುದು, ಮಹಿಳಾ ಗೋಷ್ಠಿಗಳನ್ನು ಬೆಳಗಿನ ವೇಳೆಯಲ್ಲಿ ಆಯೋಜಿಸುವುದು, ಸಂಜೆಯೊಳಗಾಗಿ ಮಹಿಳೆಯರು ಭಾಗವಹಿಸುವ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸುವುದು ಸೇರಿದಂತೆ ಹಲವು ಸಲಹೆ ನೀಡಿದರು.

ಇದನ್ನೂ ಓದಿ:ಬೇಡಿಕೆ ಈಡೇರಿಕೆಗೆ ಕಾಫಿ ಬೆಳೆಗಾರರ ಒತ್ತಾಯ

ಸಮ್ಮೇಳನದ ಕಾರ್ಯಕರ್ತರಾಗಿ ಮಹಿಳಾ ಸ್ವಯಂ ಸೇವಕರನ್ನು ಬಳಸಿಕೊಳ್ಳಬೇಕು. ಎನ್‌ಎಸ್‌ಎಸ್‌, ಎನ್‌ ಸಿಸಿ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಬೇಕು. ತಾಲೂಕುವಾರು ಮಹಿಳಾ ತಂಡಗಳನ್ನು ರಚಿಸಬೇಕು. ಕಾರ್ಯಕ್ರಮಗಳನ್ನು ಹಂಚಿಕೆ ಮಾಡಿ ಉಪ ಸಮಿತಿಗಳನ್ನು ರಚಿಸಿ ಸಕ್ರಿಯವಾಗಿ ಮಹಿಳೆಯರು ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಮಹಿಳಾ ಸಮಿತಿ ಸದಸ್ಯ ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಣ್ಣನವರ,  ಹಿರೇಕೆರೂರು ತಹಶೀಲ್ದಾರ್‌ ಉಮಾ, ಕಸಾಪ ತಾಲೂಕು ಅಧ್ಯಕ್ಷ ಯಲ್ಲಪ್ಪ ಆಲದಕಟ್ಟಿ ಇತರರಿದ್ದರು.

ಟಾಪ್ ನ್ಯೂಸ್

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.