ಕಬ್ಬಿನ ಆಸೆಗೆ ಪ್ರಾಣ ಕಳೆದುಕೊಂಡ ಬಾಲಕ


Team Udayavani, Jan 30, 2021, 1:37 PM IST

A boy who lost his life to sugar cane

ಕೊಳ್ಳೇಗಾಲ: ಕಬ್ಬಿನ ಆಸೆಗಾಗಿ ಬಾಲಕ ಪ್ರಾಣವನ್ನೇ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ವಿಜಯ್‌ ಕುಮಾರ್‌ ಶೆಟ್ಟಿ (8) ಮೃತ ದುರ್ದೈವಿ. ಬಾಲಕನ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸಿದಾಗ, ಟ್ರ್ಯಾಕ್ಟರ್‌ ಹರಿಸಿದ್ದರಿಂದ ಆತ ಮೃತಪಟ್ಟಿರುವುದು ದೃಢಪಟ್ಟಿದೆ.

ಘಟನೆ ವಿವರ: ಕುಮಾರ್‌ ಶೆಟ್ಟಿ ಸೇರಿದಂತೆ ಮೂವರು ಬಾಲಕರು ಟ್ರ್ಯಾಕ್ಟರ್‌ವೊಂದರಲ್ಲಿ ತುಂಬಿದ್ದ ಕಬ್ಬನ್ನು ತೆಗೆದುಕೊಳ್ಳಲು ಹೋಗಿದ್ದರು. ಈ ಸಂದರ್ಭದಲ್ಲಿ ಬಾಲಕರು ಇರುವುದನ್ನು ಗಮನಿಸದೇ ಚಾಲಕ ಟ್ರ್ಯಾಕ್ಟರ್‌ ಚಾಲನೆ ಮಾಡಿದ್ದಾನೆ. ಆಗ ಕುಮಾರ್‌ ಶೆಟ್ಟಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದರಿಂದ ಗಾಬರಿಗೊಂಡ ಚಾಲಕ ಈ ಅಪಘಾತ ಪ್ರಕರಣವನ್ನು ಮುಚ್ಚಿಹಾಕಲು ಬಾಲಕನ ಶವವನ್ನು ಪಕ್ಕದಲ್ಲೇ ಇದ್ದ ಕೆರೆಗೆ ಬಿಸಾಡಿ ತೆರಳಿದ್ದನು.

ತಂದೆ ಮಹದೇವ ಶೆಟ್ಟಿ  ತಮ್ಮ ಪುತ್ರ ಮನೆಗೆ ಬಂದಿಲ್ಲವೆಂದು ಹುಡುಕಾಟ ನಡೆಸಿದ ಬಳಿಕ ಕೆರೆಯಲ್ಲಿ ಶವವೊಂದು ಪತ್ತೆಯಾಗಿತ್ತು. ಈ ಶವ ಬಾಲಕ ವಿಜಯ್‌ ಕುಮಾರ್‌ ಶೆಟ್ಟಿ ಎಂಬುದು ದೃಢಪಟ್ಟಿದ್ದು, ದೇಹದ ಮೇಲೆ ಗಂಭೀರ ಗಾಯಗಳಾಗಿರುವುದು ಕಂಡು ಬಂದಿದೆ. ಯಾರೋ ಮಗನನ್ನು ಕೊಲೆಗೈದು ಕೆರೆಗೆ ಬಿಸಾಡಿದ್ದಾರೆ ಎಂದು ತಂದೆ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ:ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆಯ ಆರೋಪದಲ್ಲಿ ಸಿಲುಕಿಕೊಂಡ ಅಮೆಜಾನ್

ತನಿಖೆ ಕೈಗೊಂಡ ಪೊಲೀಸರು, ಮೃತ ಬಾಲಕನ ಇಬ್ಬರು ಸ್ನೇಹಿತರನ್ನು ವಿಚಾರಿಸಿದಾಗ, ಟ್ರ್ಯಾಕ್ಟರ್‌ನಲ್ಲಿ ತುಂಬಿದ್ದ ಕಬ್ಬನ್ನು ತರಲು ಹೋಗಿದ್ದ ವಿಷಯನ್ನು ತಿಳಿಸಿದ್ದಾರೆ. ಆ ಟ್ರ್ಯಾಕ್ಟರ್‌ ಯಾರದ್ದು ಎಂದು ಪೊಲೀಸರು ಪತ್ತೆ ಹಚ್ಚಿ ಚಾಲಕ ಬಸವರಾಜುನನ್ನು ವಿಚಾರಣೆ ನಡೆಸಿದಾಗ, “ಟ್ರ್ಯಾಕ್ಟರ್‌ ಚಲಿಸಿದಾಗ ಚಕ್ರಕ್ಕೆ ಸಿಲುಕು ಬಾಲಕ ಸಾವನ್ನಪ್ಪಿದ್ದನು. ಯಾರಿಗೂ ಕಾಣಬಾರದೆಂದು ಶವವನ್ನು ತಾನೇ ಕೆರೆಗೆ ಬಿಸಾಡಿದ್ದೆ’ ಎಂದು ಆತ ತಪ್ಪೊಪ್ಪಿಕೊಂಡಿದ್ದಾನೆ. ಪೊಲೀಸರು ಚಾಲಕ ಬಸವರಾಜುನನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.