ಕಂಬಳವನ್ನು ಅಂತಾರಾಷ್ಟ್ರೀಯ ಕ್ರೀಡೆಯಾಗಿ ರೂಪಿಸಬೇಕು: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Team Udayavani, Jan 31, 2021, 7:55 AM IST

ಕಂಬಳವನ್ನು ಅಂತಾರಾಷ್ಟ್ರೀಯ ಕ್ರೀಡೆಯಾಗಿ ರೂಪಿಸಬೇಕು: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಪುಂಜಾಲಕಟ್ಟೆ: ಕಂಬಳ ಕ್ರೀಡೆಗೆ ಹೆಚ್ಚಿನ ಪ್ರಚಾರ ನೀಡಿ ಅದನ್ನು ಅಂತಾರಾಷ್ಟ್ರೀಯ ಕ್ರೀಡೆಯಾಗಿ ರೂಪಿಸಬೇಕಾಗಿದೆ. ಇದಕ್ಕೆ ಸರಕಾರದ ಬೆಂಬಲವೂ ಇದೆ ಎಂದು ರಾಜ್ಯ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದರು.

ಅವರು ಶನಿವಾರ ಮಹಿಷಮರ್ದಿನಿ ಕಂಬಳ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಹೊಕ್ಕಾಡಿಗೋಳಿಯಲ್ಲಿ ನಡೆದ ವೀರ-ವಿಕ್ರಮ ಜೋಡುಕರೆ ಕಂಬಳದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕೋಣದ ಜೊತೆ ಓಡುವುದು ಸಾಮಾನ್ಯ ಕಾರ್ಯವಲ್ಲ. ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಸಮಾನರಾದ ಕ್ರೀಡಾಪಟುಗಳು ಕಂಬಳ ಕ್ಷೇತ್ರದಲ್ಲಿದ್ದಾರೆ.  ಕಂಬಳದ ಓಟಗಾರರನ್ನು ಸಮ್ಮಾನಿಸುವ ಅವಕಾಶ ಸಿಕ್ಕಿರುವುದು ಖುಷಿ ಕೊಟ್ಟಿದೆ ಎಂದರು.

ಇದನ್ನೂ ಓದಿ:ಬಲಾ ಬೊಲ್ಲ.. ಬಲಾ ಕಾಟಿ… ಮತ್ತೆ ಮೊಳಗಲು ಸಿದ್ದವಾಗಿದೆ ಕಂಬಳದ ಕಹಳೆ

ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಸಮಯದ ಮಿತಿ ನಿಗದಿ ಪಡಿಸುವುದು ಸರಿಯಲ್ಲ, ಕೋವಿಡ್ ಸೋಂಕು 10 ಗಂಟೆಯವರೆಗೆ ಬರುತ್ತದೆ, ಬಳಿಕ ಬರುವುದಿಲ್ಲ ಎನ್ನುವ ಮೂಢನಂಬಿಕೆ ಬೇಡ. ಬೆಳಗ್ಗೆವರೆಗೆ ಕಂಬಳ ನಡೆಯಲಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಅವರು ತಿಳಿಸಿದರು.

ಲಕ್ಷಾಂತರ ಜನರು ವೀಕ್ಷಿಸುವ ಕಂಬಳಾಭಿಮಾನಿಗಳಿಗೆ ಸರಕಾರ ಹಾಗೂ ಅಧಿಕಾರಿಗಳಿಗೆ ನಿರಾಸೆ ಮಾಡುವುದಿಲ್ಲ. ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಮುಂದಿನ ಕಂಬಳಕ್ಕೆ ಸರಕಾರದಿಂದ ಸಹಾಯಧನ ಕೊಡಿಸುವುದಾಗಿ ಭರವಸೆ ನೀಡಿದ ಅವರು ವೈಯಕ್ತಿಕವಾಗಿ 11 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದರು.

ಶಾಸಕರಾದ ಕುಮಾರ್ ಬಂಗಾರಪ್ಪ, ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಕಿಯೋನಿಕ್ಸ್ ಅಧ್ಯಕ್ಷ  ಹರಿಕೃಷ್ಣ ಬಂಟ್ವಾಳ್, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಜಿ. ಪಂ. ಸದಸ್ಯ ತುಂಗಪ್ಪ ಬಂಗೇರ, ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಶಶಿಕಾಂತ್ ಸವದಿ, ಧೀರಜ್ ಪ್ರಸಾದ್,  ಕ.ನ.ಸ. ಒಳಚರಂಡಿ ಮಂಡಳಿಯ ನಿರ್ದೇಶಕಿ ಸುಲೋಚನಾ ಭಟ್, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಂಬಳ ಕ್ಷೇತ್ರದಲ್ಲಿ ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ರಾದ ಶ್ರೀನಿವಾಸ ಗೌಡ, ಸುರೇಶ್ ಎಂ. ಶೆಟ್ಟಿ, ಪ್ರವೀಣ್ ಕೋಟ್ಯಾನ್ ಅವರನ್ನು ಸಚಿವರು ಸಮ್ಮಾನಿಸಿದರು.

ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಸ್ವಾಗತಿಸಿದರು. ಗುಣಪಾಲ ಕಡಂಬ ಪ್ರಾಸ್ತಾವಿಕವಾಗಿ ಮಾತನಾಡಿದರು.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.