ಜಿಲ್ಲೆಯಲ್ಲಿ 5 ಸಾವಿರ ಜನರಿಗೆ ಕೋವಿಡ್ ಲಸಿಕೆ

Team Udayavani, Feb 1, 2021, 12:42 PM IST

Covid vaccine for 5 thousand people in the district

ಬಾಗಲಕೋಟೆ: ಮಹಾಮಾರಿ ಕೋವಿಡ್ ಸೋಂಕಿಗಾಗಿ ವ್ಯಾಕ್ಸಿನ್‌ ಹಾಕುವ ಅಭಿಯಾನ ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಈವರೆಗೆ ವ್ಯಾಕ್ಸಿನ್‌ ತೆಗೆದುಕೊಂಡವರು 2ನೇ ಬಾರಿಯ ವ್ಯಾಕ್ಸಿನ್‌ಗೆ ಸಜ್ಜಾಗಿದ್ದಾರೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಪ್ರಾಯೋಗಿಕವಾಗಿ 7 ಕಡೆ ಮಾತ್ರ ಕೊರೊನಾ ವ್ಯಾಕ್ಸಿನ್‌ ಹಾಕಲಾಗುತ್ತಿತ್ತು. ಇದೀಗ ಜಿಲ್ಲೆಯ 9 ತಾಲೂಕು ವ್ಯಾಪ್ತಿಯ ಒಟ್ಟು 60 ಸ್ಥಳದಲ್ಲಿ ವ್ಯಾಕ್ಸಿನ್‌ ಹಾಕಲಾಗುತ್ತಿದೆ. ಗುರುವಾರ ಸಂಜೆಯವರೆಗೆ 4897 ಜನ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಅಡ್ಡ ಪರಿಣಾಮ ಇಲ್ಲ: ಕೋವಿಡ್ ವ್ಯಾಕ್ಸಿನ್‌ ಹಾಕಿಸಿಕೊಂಡರೆ ಅಡ್ಡ ಪರಿಣಾಮ ಬೀರುತ್ತದೆ ಎಂಬ ತಪ್ಪು ಕಲ್ಪನೆ ಬಹಳಷ್ಟು ಜನರಲ್ಲಿತ್ತು. ಹೀಗಾಗಿ ಆರಂಭದಲ್ಲಿ ಬಹುಕೇತ ಆರೋಗ್ಯ ಸಿಬ್ಬಂದಿ, ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದರು. ಇದೀಗ ನಾನೂ ವ್ಯಾಕ್ಸಿನ್‌ ಹಾಕಿಸಿಕೊಂಡೇ ಎಂಬ ಮಾತು ಬೇರೊಬ್ಬರಿಂದ ಕೇಳಿದ ಬಳಿಕ ಅವರಿಂದ ಮಾಹಿತಿ ಪಡೆದು ತಾವೂ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಮುಂದೆ ಬರುತ್ತಿದ್ದಾರೆ.

ಮೊದಲ ಹಂತದಲ್ಲಿ ಜಿಲ್ಲೆಯ ಸರ್ಕಾರಿ, ಖಾಸಗಿ ವೈದ್ಯರು, ಆರೋಗ್ಯ ಸಿಬ್ಬಂದಿ ಸೇರಿದಂತೆ 17 ಸಾವಿರ ಜನರಿಗೆ ವ್ಯಾಕ್ಸಿನ್‌ ಹಾಕಲು ಗುರಿ ಹಾಕಿಕೊಳ್ಳಲಾಗಿದೆ. ಅದರಲ್ಲಿ ಈಗಾಗಲೇ 5 ಸಾವಿರ ಜನ ಲಸಿಕೆ ಪಡೆದಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ನಿತ್ಯ 300 ಜನರು ವ್ಯಾಕ್ಸಿನ್‌ ಪಡೆಯುತ್ತಿದ್ದಾರೆ. ಲಸಿಕೆ ಹಾಕುವ ವಿಷಯದಲ್ಲಿ ಜಿಲ್ಲೆಯಲ್ಲಿ ಶಿಸ್ತುಬದ್ಧ ಕಾರ್ಯ ನಿರ್ವಹಣೆ ನಡೆಯುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಅನಂತ ದೇಸಾಯಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಮೈ-ಕೈ ನೋವು-ಜ್ವರ ಸಾಮಾನ್ಯ: ಮೊದಲ ಬಾರಿಗೆ ಕೊರೊನಾ ವ್ಯಾಕ್ಸಿನ್‌ ಪಡೆದ ಬಾಗಲಕೋಟೆ ತಾಲೂಕು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿ ಬಸವರಾಜ ಹೊಸಳ್ಳಿ ಅವರು ಹೇಳುವಂತೆ, ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ಯಾರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆಯೋ ಅವರಿಗೆ ಯಾವ ಸಮಸ್ಯೆಯೂ ಇಲ್ಲ. ವ್ಯಾಕ್ಸಿನ್‌ ಪಡೆದ ಬಳಿಕ ಒಂದು ದಿನ ಮನೆಯಲ್ಲಿ ವಿಶ್ರಾಂತಿ ಪಡೆದರೆ ಸಾಕು. ಕೆಲವೇ ಕೆಲವರಿಗೆ ಮೈ-ಕೈ ನೋವು, ಕೆಲವರಿಗೆ ಜ್ವರ ಬರುತ್ತದೆ. ಅದಕ್ಕಾಗಿ ವ್ಯಾಕ್ಸಿನ್‌ ಪಡೆದ ದಿನವೇ ಜ್ವರ-ಮೈ-ಕೈ ನೋವಿಗೆ ಮಾತ್ರೆ ಪಡೆಯಬೇಕು. ಇದರಿಂದ ಯಾವ ಸಮಸ್ಯೆಯೂ ಆಗುವುದಿಲ್ಲ. ನಾನು ವ್ಯಾಕ್ಸಿನ್‌ ತೆಗೆದುಕೊಂಡ ಮರುದಿನ ಮೈ-ಕೈ ನೋವು ಮಾತ್ರ ಬಂದಿತ್ತು. ಒಂದು ದಿನ ವಿಶ್ರಾಂತಿ ಪಡೆದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದೇನೆ. 2ನೇ ಬಾರಿಯ ವ್ಯಾಕ್ಸಿನ್‌ 28 ದಿನಗಳ ಬಳಿಕ ಬರಲಿದೆ. ಅದಕ್ಕಾಗಿ ಹೆಸರು ನೋಂದಾಯಿಸಿದವರಿಗೆ ನೇರವಾಗಿ ಮೊಬೈಲ್‌ ಸಂದೇಶ, ಕರೆ ಬರುತ್ತದೆ. ಯಾವ ಸ್ಥಳದಲ್ಲಿ ವ್ಯಾಕ್ಸಿನ್‌ ಪಡೆಯಬೇಕು ಎಂಬ ವಿವರ ಕೊಡುತ್ತಾರೆ ಎಂದರು.

ಇದನ್ನೂ ಓದಿ:ಈ ಬಜೆಟ್ ನಲ್ಲಿ ರೈಲ್ವೆಗೆ ಸಿಕ್ಕಿದೆಷ್ಟು? ಬೆಂಗಳೂರು ಮೆಟ್ರೋಗೆ 14 ಸಾವಿರ ಕೋಟಿ ರೂ.

ಖಾಸಗಿ ವೈದ್ಯ ಸಿಬ್ಬಂದಿಯೇ ಹಿಂದೇಟು: ಈವರೆಗೆ ಕೊರೊನಾ ವ್ಯಾಕ್ಸಿನ್‌ಗಾಗಿ ಹೆಸರು  ನೋಂದಾಯಿಸಿದವರಲ್ಲಿ ಸರ್ಕಾರಿ ವೈದ್ಯರು, ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿ ಪಡೆಯುತ್ತಿದ್ದಾರೆ. ಕೆಲವೇ ಕೆಲವರು ನಿರಂತರ ಔಷಧ ಪಡೆಯುತ್ತಿದ್ದರೆ, ಬೇರೆ ಬೇರೆ ಕಾಯಿಲೆಗಳಿದ್ದರೆ ಅಂತವರು ವ್ಯಾಕ್ಸಿನ್‌ ಪಡೆದಿಲ್ಲ. ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿಗೂ ವ್ಯಾಕ್ಸಿನ್‌ಗಾಗಿ ಹೆಸರು ನೋಂದಾಯಿಸಿದ್ದು, ಒಂದೊಂದು ಕಡೆ 100 ವ್ಯಾಕ್ಸಿನ್‌ ಕೊಟ್ಟರೂ ಕೇವಲ25ರಿಂದ 30 ಜನ ಮಾತ್ರ ಪಡೆದಿರುತ್ತಾರೆ. ಅಂತವರ ಮನವೊಲಿಸಿ ವ್ಯಾಕ್ಸಿನ್‌ನಿಂದ ಯಾವುದೇ ಅಡ್ಡ ಪರಿಣಾಮವಿಲ್ಲ ಎಂದು ಹೇಳುವ ಕಾರ್ಯವನ್ನೂ ಆರೋಗ್ಯ ಇಲಾಖೆ ಮಾಡುತ್ತಿದೆ.

ವ್ಯಾಕ್ಸಿನ್‌ ಪಡೆದ ಡಿಎಚ್‌: ವ್ಯಾಕ್ಸಿನ್‌ ಪಡೆಯಲು ಹಿಂದೇಟು ಹಾಕುತ್ತಿದ್ದವರಿಗೆ ಪ್ರೇರಣೆ ನೀಡಲು ಹಾಗೂ ಹೆಸರು ನೋಂದಾಯಿಸಿದ ಬಳಿಕ ತಮ್ಮ ಸರತಿ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಅನಂತ ದೇಸಾಯಿ ಕೊರೊನಾ ವ್ಯಾಕ್ಸಿನ್‌ ಪಡೆದಿದ್ದಾರೆ. ವ್ಯಾಕ್ಸಿನ್‌ ಪಡೆದು ಸಂಜೆಯವರೆಗೆ ಮಾತ್ರ ವಿಶ್ರಾಂತಿ ಪಡೆದು ಮತ್ತೆ ಸೇವೆಗೆ ಹಾಜರಾಗಿದ್ದಾರೆ. ಇದು ಇಲಾಖೆಯ ಇತರೆ ಸಿಬ್ಬಂದಿಯೂ ವ್ಯಾಕ್ಸಿನ್‌ ಪಡೆಯಲು ಪ್ರೇರಣೆ ಎಂಬಂತಾಗಿದೆ.

­ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.