ಸಿಎಂ ಯಡಿಯೂರಪ್ಪ ಗೆ ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆ!
Team Udayavani, Feb 4, 2021, 9:08 AM IST
ವಿಧಾನಸಭೆ: ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗಣಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಆರೋಪ ಇದೆ. ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅಧಿಕಾರದಲ್ಲಿ ಇರಬೇಕಾ ಎಂದು ಜನರು ಪ್ರಶ್ನಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಮಾತನಾಡಿ, ತಮ್ಮ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಸಿಎಂ ಯಡಿಯೂರಪ್ಪ ಹಾಗೂ ಸಚಿವ ನಿರಾಣಿ ಸುಪ್ರೀಂ ಕೋರ್ಟ್ಗೆ ಹೋಗಿದ್ದಾರೆ. ಆದರೆ, ಸುಪ್ರೀಂ ಕೋರ್ಟ್ ಪ್ರಕರಣ ವಜಾ ಮಾಡಲು ನಿರಾಕರಿಸಿದ್ದು, ಬಂಧನ ಮಾಡದಂತೆ ಸೂಚನೆ ನೀಡಿದೆ. ಇದು ಒಂದು ರೀತಿ ಬೇಲ್ ನೀಡಿದಂತೆ ಆಗಿದೆ ಎಂದು ಹೇಳಿದರು.
ಇದನ್ನೂ ಓದಿ: ಸಿನಿಮಾ ಮಂದಿ ಒಕ್ಕೊರಲ ಪ್ರಶ್ನೆಗೆ ಮಣಿದ ಸರ್ಕಾರ: ಉದಯವಾಣಿ ವರದಿಗೆ ಎಲ್ಲೆಡೆಯಿಂದ ಸ್ಪಂದನೆ
ಈ ಸಂದರ್ಭ ಮಧ್ಯಪ್ರವೇಶಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ಈ ಪ್ರಕರಣ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಚರ್ಚೆ ಮಾಡುವುದು ಸರಿಯಲ್ಲ. ಈ ವಿಷಯದ ಮೇಲೆ ಚರ್ಚೆಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ