ಕೃಷಿ ಭೂಸ್ವಾಧೀನ ಖಂಡಿಸಿ ರಸ್ತೆ ತಡೆ


Team Udayavani, Feb 5, 2021, 1:17 PM IST

protest

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಂಟೆ ಬಳಿ ಮಲ್ಟಿ ಮಾಡಲ್‌ ಲಾಜಿಸ್ಟಿಕ್‌ ಪಾರ್ಕ್‌ ಸ್ಥಾಪನೆಗೆ  ಮಾಡುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಆಗ್ರಹಿಸಿ, ಕೃಷಿ ಭೂ ರಕ್ಷಣಾ Óಮಿತಿ ನೇತೃತ್ವದಲ್ಲಿ ಹುಲಿಕುಂಟೆ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯಿತು.

ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ ಪ್ರತಿಭಟನಾಕಾರರು ಭೂ ಸ್ವಾಧೀನ ಪಕ್ರಿಯೆಗೆ ಯಾವುದೇ ಕಾರಣಕ್ಕೂ  ಅವಕಾಶ ನೀಡುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.  ಈ ವೇಳೆ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,  ಕೃಷಿ ಭೂಮಿ ವಶಪಡಿಸಿಕೊಳ್ಳಲು ಮುಂದಾಗಿರುವ ಕೆಎಡಿಬಿ ಇಲಾಖೆ ಅಧಿಕಾರಿಗಳು ಸ್ಥಳೀಯ ಸ್ಥಿತಿಗತಿ ಪರಿಗಣಿಸದೆ ಇರಲು ಕಾರಣವೇನು  ತಿಳಿಯುತ್ತಿಲ್ಲ. ಈ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಭೂಮಿಗೆ ಚಿನ್ನದ ಬೆಲೆ ಬರಲಿದೆ. ಆದರೆ, ಸಂಸದರು, ಶಾಸಕರು, ಅಧಿಕಾರಿಗಳು ಈ ವ್ಯಾಪ್ತಿಯಲ್ಲಿ ಭೂಮಿ ಖರೀದಿ ಕೊಡುತ್ತಿದ್ದಾರೆ ಎಂದರು.

ರೈತರು ಜಾಗೃತರಾಗಬೇಕು: ತಾಲೂಕಿನಲ್ಲಿರುವ ಸುಮಾರು ನಾಲ್ಕು ನೂರು ಎಕರೆ ಖಾಲಿ ಜಮೀನಿನ ಮಾಹಿತಿ ಪಡೆದಿದ್ದು ಸರ್ಕಾರದ ಗಮನಕ್ಕೆ ತರಲಾಗಿದೆ. ಈ ಪ್ರದೇಶದಲ್ಲಿ ಹೈನುಗಾರಿಕೆ ಪ್ರಮುಖವಾಗಿದ್ದು, 4 ಸಾವಿರ ಲೀಟರ್‌ ಹಾಲು  ಉತ್ಪಾದನೆಯಾಗುತ್ತಿದೆ. ರೈತರು ಜಾಗೃತರಾಗಬೇಕಿದ್ದು, ಮುಂದೆ ಒಂದು ಗುಂಟೆನೂ ಜಮೀನನ್ನು ಮಾರಬಾರದು ಎಂದು ಮನವಿ ಮಾಡಿದರು.

ಭೂಮಿ ವಶಕ್ಕೆ ಅವಕಾಶ ನೀಡಬೇಡಿ: ಬೇಟೆ ರಂಗನಾಥ ಸ್ವಾಮಿ ಟ್ರಸ್ಟ್‌ನ ಸೋಮಶೇಖರ್‌ ಮಾತ  ನಾಡಿ, ಈ ಹಿಂದೆ ನೀಡಿರುವ  ಭೂಮಿಗೆ ಇನ್ನೂ ಹಣ ಬಂದಿಲ್ಲ. ರೈತರು ಹಣದ ಆಸೆಗೆ ಒಳಗಾಗಿ ಕೃಷಿ ಭೂಮಿ ವಶ ಪಡಿಸಿಕೊಳ್ಳಲು ಅವಕಾಶ ನೀಡಬಾರದೆಂದು ಮನವಿ ಮಾಡಿದರು.

ಹೋರಾಟಕ್ಕೆ ಬೆಂಬಲ ನೀಡಿ: ಸ್ಥಳೀಯ ಮುಖಂಡ ವಿಶ್ವನಾಥ್‌ ಮಾತನಾಡಿ, ಈಗಾಗಲೇ ಕೈಗಾರಿಕಾ ಪ್ರದೇಶಗಳ ವ್ಯಾಪ್ತಿಯಲ್ಲಿ  ಪರಿಸರ ಸಂಪೂರ್ಣ ಹಾಳಾಗಿ ಹೋಗಿದೆ. ನಮ್ಮ ನೆಲೆಯನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ನಮ್ಮ ಮೇಲಿದ್ದು, ರೈತರು ಒಟ್ಟಾಗಿ ಹೋರಾಟಕ್ಕೆ ಬೆಂಬಲ ನೀಡಬೇಕೆಂದರು.

ರೈತನೇ ಮುಂದಾಳತ್ವ ವಹಿಸಬೇಕಿದೆ: ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಜಿಲ್ಲಾ ಮುಖಂಡ ಮುತ್ತೇಗೌಡ  ಮಾತನಾಡಿ, ಈ ಹಿಂದೆ ರೈತರ ಹೋರಾಟದ ಫಲವಾಗಿ ಪವರ್‌ಗ್ರಿಡ್‌ ಕಂಪನಿಯಿಂದ 4ಲಕ್ಷ ರೂ.ವರೆಗೆ ಪರಿಹಾರ ಸಿಕ್ಕಿತ್ತು.  ಹೋರಾಟವಿಲ್ಲದೇ ಯಾವುದೂ ಸಿಗುವುದಿಲ್ಲ. ರೈತನೇ ಅದರ ಮುಂದಾಳತ್ವ ವಹಿಸಬೇಕಿದೆ. ಭೂಮಿ ಬೆಲೆ ಹೆಚ್ಚಿಸುವ  ಹೋರಾಟಕ್ಕೆ ರೈತ ಸಂಘ ಬೆಂಬಲ ನೀಡುವುದಿಲ್ಲ. ರೈತರು ಕೈಗಾರಿಕೆ ಸ್ಥಾಪನೆಯಿಂದ ಕೊಟ್ಟ ಭೂಮಿಗೆ ಹಣ, ಮನೆಗೆ ಕೆಲಸ ಸಿಗುತ್ತೆ ಎಂಬ ಭ್ರಮೆಯಿಂದ ಹೊರ ಬರಬೇಕೆಂದರು.

ಕೊಡಿಗೇಹಳ್ಳಿಯ ಲಕ್ಷ್ಮಣ ಮಠದ ಮೋಹನ್‌ ರಾಮ್‌ ಸ್ವಾಮೀಜಿ ಮಾತನಾಡಿ, ಫಲವತ್ತಾದ ಕೃಷಿ ಭೂಮಿ ಡೀಸೆಲ…, ಗ್ರೀಸ್‌,  ಕಬ್ಬಿಣಕ್ಕೆ ನೀಡುತ್ತಿರುವ ಸರ್ಕಾರದ ನಿಲುವು ಖಂಡನೀಯ ಎಂದರು.

 ಇದನ್ನೂ ಓದಿ : ಸರ್ಕಾರದ ಸ್ಪಂದನೆಯಿಂದ ಆತ್ಮ ವಿಶ್ವಾಸ ಹೆಚ್ಚಲಿ

ಮನವಿ ಪತ್ರ ಸ್ವೀಕರಿಸಿದ ಜಿಲ್ಲಾಧಿಕಾರಿ ಪಿ.ಎನ್‌. ರವೀಂದ್ರ ಮಾತನಾಡಿ, ರೈತರ ಮನವಿಯನ್ನು ಸರ್ಕಾರದ ಗಮನಕ್ಕೆ ತಂದು  ಸಮಸ್ಯೆ ಬಗೆಹರಿಸಲಾಗುವುದು ಎಂದರು. ಉಪ ವಿಭಾಗಾಧಿಕಾರಿ ಅರುಳ್‌ ಕುಮಾರ್‌, ತಹಸೀಲ್ದಾರ್‌ ಟಿ.ಎಸ್‌.ಶಿವರಾಜ್‌ ಇದ್ದರು. ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ಮುಖಂಡ ಸುಲೋಚನಮ್ಮ ವೆಂಕಟರೆಡ್ಡಿ, ಕನ್ನಡ ಪಕ್ಷದ ಸಂಜೀವ್‌ ನಾಯಕ್‌, ಕೃಷಿ    ಕ್ಷಣಾ ಸಮಿತಿ ಅಧ್ಯಕ್ಷ ಎಚ್‌. ಆರ್‌.ದೇವರಾಜ್‌, ಸಮಿತಿಯ ವಿಶ್ವನಾಥಯ್ಯ, ಗೋಪಿನಾಥ್‌, ಸೋಮಶೇಖರಯ್ಯ, ರಘು ರಂಗಸ್ವಾಮಿ, ಶಂಕರಯ್ಯ ಭಾಗವಹಿಸಿದ್ದರು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.