ಪ್ರೇಮಿಗಳ ದಿನಕ್ಕೆ ಪ್ರೇಮ್ ಸಾಂಗ್ ಹಾಡಲು ಏಕ್ ಲವ್ಯಾ ರೆಡಿ
Team Udayavani, Feb 6, 2021, 9:32 AM IST
ನಿರ್ದೇಶಕ ಪ್ರೇಮ್ ಪ್ರೇಮಿಗಳ ದಿನಕ್ಕೆ ತಮ್ಮ ಚಿತ್ರದ ಮೊದಲ ಹಾಡನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಹಾಡು ರಿಲೀಸ್ ಆಗುವ ಬಗ್ಗೆ ವಿಭಿನ್ನ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ಹಾಡಿನ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.
ಪ್ರೇಮ್ ಸಿನಿಮಾಗಳಲ್ಲಿ ಹಾಡಿಗೆ ಮೊದಲ ಪ್ರಾಶಸ್ತ್ಯವಿರುವುದರಿಂದ ಈಗ ಬಿಡುಗಡೆಯಾಗುತ್ತಿರುವ ಹಾಡಿನ ಬಗ್ಗೆಯೂ ನಿರೀಕ್ಷೆ ಇದೆ. ಏಕ್ ಲವ್ ಯಾ’ ಚಿತ್ರ ನಾಲ್ಕು ಭಾಷೆಯಲ್ಲಿ ತಯಾರಾಗುತ್ತಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಚಿತ್ರ ತಯಾರಾಗುತ್ತಿದ್ದು, ಆಯಾ ಭಾಷೆಯಲ್ಲಿನ ಪೋಸ್ಟರ್ ಅನ್ನು ಚಿತ್ರತಂಡ ಸಂಕ್ರಾಂತಿ ಹಬ್ಬದಂದು ಬಿಡುಗಡೆ ಮಾಡಿತ್ತು.
ಇದನ್ನೂ ಓದಿ:ಕಲರ್ಫುಲ್ ಪೊಲೀಸ್ ಸ್ಟೋರಿ! ‘ಇನ್ಸ್ಪೆಕ್ಟರ್ ವಿಕ್ರಂ’ ಚಿತ್ರ ವಿಮರ್ಷೆ
ಈಗ ಹಾಡು ಕೂಡಾ ನಾಲ್ಕು ಭಾಷೆಯಲ್ಲೂ ಬಿಡುಗಡೆಯಾಗಲಿದೆ. ಈ ಮೂಲಕ ಪ್ರೇಮ್ ಮತ್ತೂಮ್ಮೆ ನಾಲ್ಕು ಭಾಷೆಯಲ್ಲಿ ಸದ್ದು ಮಾಡಲಿದ್ದಾರೆ. ಇನ್ನು “ಏಕ್ ಲವ್ ಯಾ’ ಚಿತ್ರದಲ್ಲಿ ನಟಿ ರಕ್ಷಿತಾ ಸೋದರ ರಾಣಾ ನಾಯಕ ನಟನಾಗಿ ಸ್ಯಾಂಡಲ್ವುಡ್ಗೆ ಪರಿಚಯವಾಗುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…