ಹಿಂಬದಿಯಿಂದ ಕಾರು ಡಿಕ್ಕಿ: ಬೈಕ್ ಸವಾರ ಸಾವು
Team Udayavani, Feb 9, 2021, 1:44 PM IST
ನಂಜನಗೂಡು: ಬೈಕ್ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ನಗರದ ಹೊರವಲಯದ ಗುಂಡ್ಲುಪೇಟೆ ರಸ್ತೆಯ ಹೊಸಳ್ಳಿ ಗೇಟ್ ಬಳಿ ಈ ಅವಘಡ ಜರುಗಿದ್ದು, ನಂಜನ ಗೂಡು ತಾಲೂಕಿನ ಮುದ್ದಳ್ಳಿ ಗ್ರಾಮದ ನವೀನ (22) ಮೃತ ಯುವಕ ಎಂದು ಗುರುತಿಸಲಾಗಿದೆ.
ಸ್ವಗ್ರಾಮ ಮುದ್ದಳ್ಳಿಗೆ ನವೀನ್ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಕೇರಳಕ್ಕೆ ತೆರಳುತ್ತಿದ್ದ ಇನೊವಾ ಕಾರು ಹಿಂಬದಿಯಿಂದ ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಆರು ಮಂದಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ :
ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿ ಸಮೀಪದ ಗದ್ದೆಗೆ ಉರುಳಿದೆ. ಘಟನಾ ಸ್ಥಳಕ್ಕೆ ನಂಜನಗೂಡು ಸಂಚಾರ ಠಾಣೆ ಅಧಿಕಾರಿ ಜಯಲಕ್ಷ್ಮೀ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ